Home ಸುದ್ದಿ ಕಲಬುರ್ಗಿ ವಿಶ್ವವಿದ್ಯಾಲಯ: ಬೀದಿಗೆ ಬೀಳುವ ಆತಂಕದಲ್ಲಿ ಹತ್ತಾರು ವರ್ಷ ಸೇವೆ ಸಲ್ಲಿಸಿದ ಹೊರಗುತ್ತಿಗೆ ನೌಕರರು
ಸುದ್ದಿ

ಕಲಬುರ್ಗಿ ವಿಶ್ವವಿದ್ಯಾಲಯ: ಬೀದಿಗೆ ಬೀಳುವ ಆತಂಕದಲ್ಲಿ ಹತ್ತಾರು ವರ್ಷ ಸೇವೆ ಸಲ್ಲಿಸಿದ ಹೊರಗುತ್ತಿಗೆ ನೌಕರರು

Share
Share

 

 

ಮರ್ಚೆಡ್ ಡೇಸ್ ಸುದ್ದಿ.

ಕಲಬುರ್ಗಿ: ವಿಶ್ವವಿದ್ಯಾಲಯದಲ್ಲಿ ಕಳೆದ ಹತ್ತಾರು ವರ್ಷಗಳಿಂದ ವಿಶ್ವವಿದ್ಯಾಲಯದ ಬೋಧಕೇತರ ವಿಭಾಗದ ಜವಾಬ್ದಾರಿಯನ್ನು ಹೊತ್ತು, ತಮ್ಮದೇ ಆದ ಕೌಶಲದಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿಕೊಂಡು ಬಂದಿರುವ ಹೊರಗುತ್ತಿಗೆ ನೌಕರರನ್ನು ಇದ್ದಕ್ಕಿದ್ದಂತೆ ಕೆಲಸದಿಂದ ತೆಗೆದುಹಾಕಲಾಗುತ್ತಿದ್ದು, ಅವರ ಬದುಕು ಈಗ ಬೀದಿಗೆ ಬೀಳುವ ಆತಂಕ ಎದುರಾಗಿದೆ.

ಸರ್ಕಾರದ ನೀತಿಗಳು ಮತ್ತು ಆಡಳಿತ ಮಂಡಳಿಯ ಮಸಲತ್ತುಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ನೌಕರರು, ಪ್ರಸ್ತುತ ಉರಿ ಬಿಸಿಲನ್ನೂ ಲೆಕ್ಕಿಸದೆ ತಮ್ಮ ಹೊಟ್ಟೆಪಾಡಿಗಾಗಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

ದಶಕಗಳ ಸೇವೆಗೆ ಸಿಗದ ಮಾನ್ಯತೆ

ವಿಶ್ವವಿದ್ಯಾಲಯದ ಆಡಳಿತ ಸುಗಮವಾಗಿ ನಡೆಯಲು ಹಗಲಿರುಳು ಶ್ರಮಿಸಿದ ಈ ನೌಕರರನ್ನು ಏಕಾಏಕಿ ಉದ್ಯೋಗದಿಂದ ಕೈಬಿಟ್ಟಿರುವುದು ಅವರ ಕುಟುಂಬಗಳನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ. “ಬದುಕು ಯಾರ ಹಂಗಿಗೂ ನಿಲ್ಲಲ್ಲ” ಎನ್ನುವ ಸತ್ಯವನ್ನು ಅರಿತಿರುವ ನೌಕರರು, ಮಲಗಿರುವ ಇಡೀ ವ್ಯವಸ್ಥೆಯನ್ನು ಎಚ್ಚರಿಸಲು ಈಗ ಹೋರಾಟದ ಹಾದಿ ಹಿಡಿದಿದ್ದಾರೆ.

ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ನಡೆ ಹಾಗೂ ಸರ್ಕಾರದ ಉದಾಸೀನ ನೀತಿಯೇ ಈ ಇಡೀ ಸಮಸ್ಯೆಗೆ ಕಾರಣ ಎಂದು ಹೋರಾಟಗಾರರು ದೂರಿದ್ದಾರೆ. ದಶಕಗಳ ಕಾಲ ಸಂಸ್ಥೆಯನ್ನು ನಂಬಿ ಬದುಕಿದ ಕಾರ್ಮಿಕರ ಹೊಟ್ಟೆಯ ಮೇಲೆ ಹೊಡೆಯುವ ಇಂತಹ ನಿರ್ಧಾರಗಳ ವಿರುದ್ಧ ಸಾರ್ವಜನಿಕ ವಲಯದಲ್ಲೂ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ.

ಕೂಡಲೇ ಉನ್ನತ ಅಧಿಕಾರಿಗಳು ಹಾಗೂ ಸರ್ಕಾರ ಮಧ್ಯಪ್ರವೇಶಿಸಿ, ಧರಣಿ ನಿರತ ನೌಕರರ ಉದ್ಯೋಗ ಭದ್ರತೆಯನ್ನು ಕಾಪಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...