Home ಸುದ್ದಿ ಎಂಎಲ್ಸಿ ಅವಧಿ ಮುಂದುವರಿಸಿ, ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಿ: ಕಮಕನೂರ್ ಪರ ಗಂಗಾಮತ ಸಮಾಜ ಆಗ್ರಹ
ಸುದ್ದಿ

ಎಂಎಲ್ಸಿ ಅವಧಿ ಮುಂದುವರಿಸಿ, ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಿ: ಕಮಕನೂರ್ ಪರ ಗಂಗಾಮತ ಸಮಾಜ ಆಗ್ರಹ

Share
Share

 

 

ತಿಪ್ಪಣ್ಣ ಕಮಕನೂರ್‌ಗೆ ಎಂಎಲ್ಸಿ ಸ್ಥಾನ ಮುಂದುವರಿಸಿ, ಸಚಿವ ಸ್ಥಾನ ನೀಡಿ: ಗಂಗಾಮತ ಸಮಾಜ ಆಗ್ರಹ

 

ಮರ್ಚೆಡ್ ಡೇಸ್ ಸುದ್ದಿ

ಗಂಗಾವತಿ:

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ ಹಾಗೂ ಗಂಗಾಮತ ಸಮಾಜದ ಹಿರಿಯ ಮುಖಂಡ ತಿಪ್ಪಣ್ಣ ಕಮಕನೂರ್ ಅವರನ್ನು ವಿಧಾನ ಪರಿಷತ್ ಸದಸ್ಯ (ಎಂಎಲ್ಸಿ) ಸ್ಥಾನದಲ್ಲಿ ಮುಂದುವರಿಸಬೇಕು ಮತ್ತು ಮುಂದಿನ ದಿನಗಳಲ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಗಂಗಾಮತ ಸಮಾಜದ ಮುಖಂಡರು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.

 

ನಗರದ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ಬುದುವಾರ ಹಮ್ಮಿಕೊಂಡಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸಮಾಜದ ವಿವಿಧ ಮುಖಂಡರು ಆಗ್ರಹಿಸಿದರು. ಈ ಬೇಡಿಕೆಗೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ರಾಜ್ಯಾದ್ಯಂತ ಇರುವ ಸಮಾಜದ ಪ್ರಮುಖರನ್ನು ಒಗ್ಗೂಡಿಸಿಕೊಂಡು ಬೆಂಗಳೂರಿಗೆ ಬೃಹತ್ ನಿಯೋಗ ಕೊಂಡೊಯ್ಯಲು ತೀರ್ಮಾನಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗಂಗಾಮತ ಸಮಾಜದ ಜಿಲ್ಲಾ ಗೌರವ ಅಧ್ಯಕ್ಷ ರಾಜಶೇಖರ ಮುಸ್ಟೂರು ಅವರು, “ತಿಪ್ಪಣ್ಣ ಕಮಕನೂರ್ ಅವರು ದಶಕಗಳಿಂದ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ. ರಾಜ್ಯದಲ್ಲಿ ಗಂಗಾಮತ ಸಮುದಾಯವು ಅತಿ ದೊಡ್ಡ ಜನಸಂಖ್ಯೆಯನ್ನು ಹೊಂದಿದ್ದು, ಸಮಾಜದ ಧ್ವನಿಯಾಗಿ ಕೆಲಸ ಮಾಡಲು ಕಮಕನೂರ್ ಅವರಂತಹ ನಾಯಕರ ಅಗತ್ಯವಿದೆ. ಅವರ ಶ್ರಮವನ್ನು ಗುರುತಿಸಿ ಎಂಎಲ್ಸಿ ಸ್ಥಾನವನ್ನು ಮುಂದುವರಿಸುವ ಮೂಲಕ ಪಕ್ಷವು ಸಮಾಜಕ್ಕೆ ನ್ಯಾಯ ಒದಗಿಸಬೇಕು,” ಎಂದರು.

 

ಮಾಜಿ ಎಂಎಲ್ಸಿ ಎಚ್.ಆರ್. ಶ್ರೀನಾಥ್ ಮಾತನಾಡಿ, “ತಿಪ್ಪಣ್ಣ ಕಮಕನೂರ್ ಅವರು ಕೇವಲ ಸ್ವ-ಸಮುದಾಯಕ್ಕೆ ಸೀಮಿತವಾಗದೆ. ಸರ್ವ ಸಮಾಜದ ಒಳಿತಿಗಾಗಿ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಿ ಎಲ್ಲರ ವಿಶ್ವಾಸ ಗಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾದರೆ ಅವರಿಗೆ ಸಚಿವ ಸ್ಥಾನ ನೀಡಬೇಕು. ಇದರಿಂದ ಶೋಷಿತ ಸಮಾಜಗಳ ಅಭಿವೃದ್ಧಿಗೆ ಮತ್ತಷ್ಟು ಆನೆಬಲ ಬಂದಂತಾಗುತ್ತದೆ,” ಎಂದು ಅಭಿಪ್ರಾಯಪಟ್ಟರು.

 

ತಾಲೂಕು ಅಧ್ಯಕ್ಷ ಹನುಮೇಶ ಭಟಾರಿ ಮಾತನಾಡಿ, “ಕಾಂಗ್ರೆಸ್ ಪಕ್ಷವು ಈ ಹಿಂದೆ ಕಮಕನೂರ್ ಅವರ ಶ್ರಮಕ್ಕೆ ತಕ್ಕಂತೆ ಎಂಎಲ್ಸಿ ಸ್ಥಾನ ನೀಡಿ ಗೌರವಿಸಿದೆ. ಈಗ ಅದೇ ಸ್ಥಾನವನ್ನು ಮುಂದುವರಿಸುವ ಮೂಲಕ ಸಮಸ್ತ ಗಂಗಾಮತ ಸಮುದಾಯದ ಹಿತವನ್ನು ಕಾಪಾಡಬೇಕು,” ಎಂದು ವಿನಂತಿಸಿದರು.

 

ತಿಪ್ಪಣ್ಣ ಕಮಕನೂರ್ ಅವರ ರಾಜಕೀಯ ಭವಿಷ್ಯ ಹಾಗೂ ಸಮಾಜದ ಹಿತದೃಷ್ಟಿಯಿಂದ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಒತ್ತಡ ಹೇರಲು ಶೀಘ್ರದಲ್ಲೇ ರಾಜ್ಯದ ವಿವಿಧ ಜಿಲ್ಲೆಗಳ ಮುಖಂಡರನ್ನೊಳಗೊಂಡ ನಿಯೋಗ ರಾಜಧಾನಿ ಬೆಂಗಳೂರಿಗೆ ತೆರಳಲಿದೆ ಎಂದು ಮುಖಂಡರು ಇದೇ ವೇಳೆ ತಿಳಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ಪರಶುರಾಮ ಮಡ್ಡೇರ್, ಗೌರವ ಅಧ್ಯಕ್ಷ ಹುಲಗಪ್ಪ ಕಾಪು, ನಿಜಶರಣ ಅಂಬಿಗರ ಚೌಡಯ್ಯ ಯುವಕ ಸಂಘದ ಅಧ್ಯಕ್ಷ ಭೈರೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಿವಕುಮಾರ ಅರಿಕೇರಿ, ಮುಖಂಡರಾದ ಸಿದ್ದಪ್ಪ ಸೇರಿದಂತೆ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...