ಮರ್ಚೆಡ್ ಡೇಸ್ ಸುದ್ದಿ.
ಕೊಪ್ಪಳ/ಬಾಗಲಕೋಟೆ: ದಾವಣಗೆರೆಯ ಕೆ. ಎ.ಎಸ್.ಐ.ಪಿ. ಎಸ್ ಮತ್ತು ಐ.ಎ.ಎಸ್. ಆಕಾಂಕ್ಷಿಗಳಿಗೆ ಸ್ಪೂರ್ತಿಯ ಸೆಲೆಯಾಗಿರುವ ವಿನಯ್ ಕುಮಾರ್ ಜಿ.ಬಿ. ಅವರು, ಇದೇ ತಿಂಗಳ 30 ಮತ್ತು 31ರಂದು ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ಪ್ರವಾಸದ ಮುಖ್ಯ ಉದ್ದೇಶ ಆ ಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ ನೀಡುವುದಾಗಿದೆ. ಮುಖ್ಯವಾಗಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ, ಮುಂದಿನ ಉನ್ನತ ವ್ಯಾಸಂಗದ ಆಯ್ಕೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮತ್ತು ವೃತ್ತಿಜೀವನದ ರೂಪರೇಷೆಗಳ ಕುರಿತು ಅವರು ಸಮಗ್ರ ಮಾಹಿತಿ ನೀಡಲಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತ್ತು ಮುಧೋಳ ತಾಲೂಕುಗಳಲ್ಲಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸ್ಥಳೀಯ ವಿದ್ಯಾರ್ಥಿಗಳಲ್ಲಿ ಹೊಸ ಆಶಾಕಿರಣವನ್ನು ಮೂಡಿಸುವ ನಿರೀಕ್ಷೆಯಿದೆ. ಈ ಕುರಿತು ಮಾತನಾಡಿದ ವಿನಯ್ ಕುಮಾರ್ ಅವರು, “ನಮ್ಮ ‘ಸ್ವಾಭಿಮಾನಿ ಬಳಗ’ದ ವತಿಯಿಂದ ಈ ಶೈಕ್ಷಣಿಕ ಜಾಗೃತಿ ಸಂಘಟಿಸಲಾಗುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯದಲ್ಲಿ ಸೂಕ್ತ ಮಾರ್ಗದರ್ಶನ ಸಿಗಲಿ ಎಂಬುದು ನಮ್ಮ ಆಶಯ ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ದಾರಿಯನ್ನು ಸ್ಪಷ್ಟಪಡಿಸಿಕೊಳ್ಳಲು ಮತ್ತು ಐ.ಎ.ಎಸ್. ಸೇರಿದಂತೆ ಉನ್ನತ ಹುದ್ದೆಗಳನ್ನು ತಲುಪಲು ಬೇಕಾದ ಸಿದ್ಧತೆಗಳ ಕುರಿತು ಅರಿವು ಮೂಡಿಸುವ ವೇದಿಕೆಯಾಗಲಿದೆ.