Home ಸುದ್ದಿ ಗಂಗಾವತಿ: ನಗರದ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಿಂದ ಬೆಳಗ್ಗೆ 9:30ಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. 
ಸುದ್ದಿ

ಗಂಗಾವತಿ: ನಗರದ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಿಂದ ಬೆಳಗ್ಗೆ 9:30ಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. 

Share
Share

 

 

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ಬೆಳಗ್ಗಿನ ಜಾವದಿಂದಲೇ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಸಮುದಾಯದವರು ಈದ್ಗಾ ಮೈದಾನಕ್ಕೆ ಆಗಮಿಸಿ ವಿಶೇಷ ನಮಾಜ್ ನೆರವೇರಿಸಿದರು.

 

ಈ ಸಂದರ್ಭದಲ್ಲಿ ದೇಶದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಹಬ್ಬದ ಹಿನ್ನೆಲೆಯಲ್ಲಿ ಪರಸ್ಪರ ಬಕ್ರೀದ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಭ್ರಾತೃತ್ವದ ಸಂದೇಶ ಸಾರಿದರು.

 

ಈ ಕಾರ್ಯಕ್ರಮದಲ್ಲಿ ಗುರುಗಳಾದ ಕಮಲ್ ಮುಸ್ತಫ ಹಾಫಿಜ್, ಕಾಂಗ್ರೆಸ್ ಮುಖಂಡ ಅಖ್ತರ್ ಅನ್ಸಾರಿ, ಅಯ್ಯೂಬ್ ಅನ್ಸಾರಿ, ಎಸ್.ಬಿ.ಖಾದ್ರಿ, ಕಿಷ್ಕಿಂದ ವಾಹಿನಿಯ ಮುಖ್ಯಸ್ಥರಾದ ಸೈಯದ್ ಅಲಿ, ಕರ್ನಾಟಕ ಪವರ್ ಟಿವಿ ವಾಹಿನಿಯ ಮುಖ್ಯಸ್ಥರಾದ ಎಂ.ಡಿ.ಅಲಿ, ಕೆ.ಆರ್.ಪಿ.ಪಿ ಪಕ್ಷದ ಮುಖಂಡ ಮೆಹಫೂಜ್ ಅಲಿಖಾನ್, ಈದ್ಗಾ ಕಮಿಟಿಯ ಅಧ್ಯಕ್ಷರು, ಸದಸ್ಯರು, ನಗರ ಸಭೆ ಇಲಾಖೆ ಪೊಲೀಸ್ ಇಲಾಖೆ, ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಹಿರಿಯರು ಯುವಕರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

 

ಬಕ್ರೀದ್ ಹಬ್ಬದ ಪ್ರಯುಕ್ತ ನಗರದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಮುಸ್ಲಿಂ ಬಾಂಧವರು ಕುಟುಂಬ ಸಮೇತರಾಗಿ ಹಬ್ಬವನ್ನು ಆಚರಿಸಿದರು.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...