ಮರ್ಚೆಡ್ ಡೇಸ್ ಸುದ್ದಿ.
ರಾಯಚೂರು ಜೂನ್.01 (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ 4ರಡಿ ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳಿಗೆ ಉಚಿತ ಯುಜಿಡಿ ಮನೆ ಸಂಪರ್ಕ ಕಲ್ಪಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತರು ಜಾತಿ ಪ್ರಮಾಣ ಪತ್ರ, ಆಸ್ತಿ ಮಾಲೀಕತ್ವ ದಾಖಲಾತಿ / ಖಾತೆ / ಪಹಣಿ / ನೋಂದಣಿ ದಾಖಲೆ, ಆಧಾರ್ ಕಾರ್ಡ್ ಪ್ರತಿ, ಸಲ್ಲಿಸಲಾದ ದಾಖಲೆಗಳು ನಿಜವಾಗಿದ್ದು, ತಪ್ಪು ಮಾಹಿತಿ ನೀಡಿಲ್ಲ ಎಂಬುದಾಗಿ ನೋಟರಿ ಅಫಿಡೆವಿಟ್ದೊಂದಿಗೆ ಜೂನ್ 15ರೊಳಗಾಗಿ ಪಾಲಿಕೆಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಭೀಮಾಶಂಕರ ಮೊಬೈಲ್ ಸಂ:8076165543 ಅಥವಾ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜೈಪಾಲರೆಡ್ಡಿ ಮೊಬೈಲ್ ಸಂ: 7989813605ಗೆ ಸಂಪರ್ಕ ಮಾಡಬಹುದಾಗಿದೆ ಎಂದು ರಾಯಚೂರು ಮಹಾನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ