” ಪತ್ರಿಕ ಪ್ರಕಟಣೆ”
ಮರ್ಚೆಡ್ ಡೇಸ್ ಸುದ್ದಿ.
ಗಂಗಾವತಿ: 2026-27ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆ: ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಮೀಸಲಾತಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಮತ್ತು ಇತರೆ ವರ್ಗದ (SC, ST ಹಾಗೂ ಹಿಂದುಳಿದ ವರ್ಗ) ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದೆ.
ಪಿ.ಯು.ಸಿ, ಐ.ಟಿ.ಐ, ಡಿಪ್ಲೊಮಾ ಮತ್ತು ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅರ್ಜಿ ಸಲ್ಲಿಸುವ ವಿಧಾನ: ವಿದ್ಯಾರ್ಥಿಗಳು https://shp.karnataka.gov.in/ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ
ಅರ್ಜಿ ಸಲ್ಲಿಸಬೇಕು.
ಆರಂಭ ದಿನಾಂಕ: 05-06-2026
ಅರ್ಜಿ ಕೊನೆಯ ದಿನಾಂಕ:30-06-2026
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ, ಗಂಗಾವತಿ ಅಥವಾ ಅಲ್ಪಸಂಖ್ಯಾತ ಮಾಹಿತಿ ಕೇಂದ್ರ, ಜೂನಿಯರ್ ಕಾಲೇಜು ಆವರಣ, ಗಂಗಾವತಿ ಇಲ್ಲಿಗೆ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ: 08533-230027