Home ಸುದ್ದಿ ನವಜಾತ ಶಿಶುವಿನಲ್ಲಿ ಚಯಾಪಚಯ ನ್ಯೂನ್ಯತೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಲಾಗುವುದು: ಡಾ.ಸುರೇಂದ್ರ ಬಾಬು
ಸುದ್ದಿ

ನವಜಾತ ಶಿಶುವಿನಲ್ಲಿ ಚಯಾಪಚಯ ನ್ಯೂನ್ಯತೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಲಾಗುವುದು: ಡಾ.ಸುರೇಂದ್ರ ಬಾಬು

Share
Share

“ಕಲ್ಯಾಣ ಕರ್ನಾಟಕ ಹಾಗೂ ಗಣಿ ಭಾದಿತ ಜಿಲ್ಲೆಗಳಿಗೆ ಮೊದಲ ಆದ್ಯತೆ”

ಮರ್ಚೆಡ್ ಡೇಸ್ ಸುದ್ದಿ.
ರಾಯಚೂರು ಜೂನ್ 04 (ಕರ್ನಾಟಕ ವಾರ್ತೆ): ನವಜಾತ ಶಿಶುವಿನಲ್ಲಿ ಜನ್ಮಜಾತ ಚಯಾಪಚಯ ನ್ಯೂನ್ಯತೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದು ಶಿಶುವಿನ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಅವಶ್ಯಕವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಅವರು ಹೇಳಿದರು.
ಜೂನ್ 02ರ ಮಂಗಳವಾರ ದಂದು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೃಷ್ಣ ಸಭಾಂಗಣದಲ್ಲಿ ಜನ್ಮಜಾತ ಚಯಾಪಚಯ ನ್ಯೂನ್ಯತೆಗಳನ್ನು ಪತ್ತೆ ಹಚ್ಚುವ ವಿಧಾನಗಳ ಕುರಿತು ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನವಜಾತ ಶಿಶುಗಳಲ್ಲಿ ಆರೋಗ್ಯ ಸ್ಥಿತಿಯ ಜೈವಿಕ ಕ್ರಿಯೆಯಲ್ಲಿ (ಚಯಾಪಚಯ) ಕೆಲವು ಜನ್ಮಜಾತ ದೋಷಗಳನ್ನು ನಿರ್ಲಕ್ಷಿಸಿದರೆ ಮಗುವಿನ ಕುಂಠಿತ ಬೆಳವಣಿಗೆಗೆ ಕಾರಣವಾಗುತ್ತದೆ. ಹೆರಿಗೆ ಸಮಯದಲ್ಲಿ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಪ್ರಯೋಗಾಲಯ ಸೇವೆ ಮೂಲಕ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಸೌಲಭ್ಯವನ್ನು ಕರ್ನಾಟಕ ಸರಕಾರವು ಕಲ್ಯಾಣ ಕರ್ನಾಟಕ ಹಾಗೂ ಗಣಿ ಭಾದಿತ ಜಿಲ್ಲೆಗಳಿಗೆ ಮೊದಲ ಆಧ್ಯತೆ ನೀಡಿ ಆರಂಭಿಸಿದ್ದು, ಮಗುವಿನ ಬೆಳವಣಿಗೆಗೆ ಪೂರಕವಾದ ಈ ಸೌಲಭ್ಯವನ್ನು ಪಡೆಯಲು ಹೆಚ್ಚು ಜಾಗೃತಿ ಮೂಡಿಸಬೇಕು. ಅಲ್ಲದೆ ಸರ್ಕಾರದ ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಲು ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಬೇಕೆಂದರು.
ಈ ವೇಳೆ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ ಎಮ್.ಎನ್. ಅವರು ಮಾತನಾಡಿ, ಮಗು ಜನಿಸಿದ ತಕ್ಷಣವೇ ಕೈಗೊಳ್ಳುವ ನವಜಾತ ಶಿಶು ತಪಾಸಣೆ ಮೂಲಕ ಈ ದೋಷಗಳನ್ನು ಮೊದಲೇ ಪತ್ತೆ ಹಚ್ಚಬಹುದಾಗಿದೆ. ಥೈರಾಯಿಡ್ ಕಾಯಿಲೆಯನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿದರೆ ನಿರ್ದಿಷ್ಟ ಆಹಾರ ಪದ್ಧತಿ ಮತ್ತು ಔಷಧಿಗಳ ಮೂಲಕ ಮಗುವಿನ ಸಾಮಾನ್ಯ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಬಹುದಾಗಿದೆ. ಆಸ್ಪತ್ರೆಗೆ ಬರುವ ತಾಯಂದಿರು ಪಾಲಕರಿಗೆ ತಮ್ಮ ಮಗುವಿಗೆ ಇಂತಹ ಸಮಸ್ಯೆಗಳ ಬಗ್ಗೆ ಅನುಮಾನವಿದ್ದರೆ, ಕೂಡಲೇ ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞರ ಸಲಹೆಯನ್ನು ಪಡೆಬೇಕೆಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹಮ್ಮದ್ ಶಾಕೀರ್, ಯುಎನ್‌ಡಿಪಿ ರಾಕೇಶ್, ಡಿಪಿಸಿ ಹಾಗೂ ಸಿಪಿಓ ಬಸವರಾಜಪ್ಪಗೌಡ, ಎಮ್‌ಎನ್‌ಡಿ ಜಿಲ್ಲಾ ವ್ಯವಸ್ಥಾಪಕ ಗುರುಗುಪ್ಪಾ ಸೇರಿದಂತೆ ಜಿಲ್ಲೆಯ ವಿವಿಧ ವೈದ್ಯಕೀಯ ಪ್ರಯೋಗ ಶಾಲಾ ತಂತ್ರಜ್ಞರು ತರಬೇತಿ ಕಾರ್ಯಾಗಾರದಲ್ಲಿ ಇದ್ದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...