
ಮರ್ಚೆಡ್ ಡೇಸ್ ಸುದ್ದಿ.
ಗಂಗಾವತಿ: ಅಹಿಂದ ಸಮುದಾಯದ ಹೆಮ್ಮೆಯ ನಾಯಕ, ಹಿಂದುಳಿದ ವರ್ಗಗಳ ಧ್ವನಿ ಹಾಗೂ ಜನಪರ ಹೋರಾಟಗಾರರಾದ ಶಿವರಾಜ್ ತಂಗಡಗಿ. ಅವರಿಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು. ಒತ್ತಾಯಿಸಿ ಗಂಗಾವತಿಯಲ್ಲಿ ಬೃಹತ್ ರ್ಯಾಲಿ ನಡೆಸಲಾಯಿತು.
ಇಂದು ಬೆಳಿಗ್ಗೆ 11:00 ಗಂಟೆಗೆ ಕರ್ನೂಲ್ ಸಾಬ್ ದರ್ಗಾದಿಂದ ಕೃಷ್ಣದೇವರಾಯ ವೃತ್ತದವರೆಗೆ ಈ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.
ಗಂಗಾವತಿಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ನೇತೃತ್ವದಲ್ಲಿ ನಡೆದ
ಅಹಿಂದ ಸಮುದಾಯದ ಪ್ರಬಲ ನಾಯಕರಾದ ಶಿವರಾಜ್ ತಂಗಡಗಿ ಅವರಿಗೆ ಸಚಿವ ಸ್ಥಾನ ನೀಡಬೇಕು.
ಪಕ್ಷಕ್ಕಾಗಿ ನಿರಂತರವಾಗಿ ದುಡಿದ ಹಿರಿಯ ನಾಯಕನಿಗೆ ಸೂಕ್ತ ನ್ಯಾಯ ಸಿಗಬೇಕು.
ಕೊಪ್ಪಳ ಜಿಲ್ಲೆಯ ಜನರ ಆಶಯವನ್ನು ಗೌರವಿಸಬೇಕು.
ಶಿವರಾಜ್ ತಂಗಡಗಿ ಅವರಿಗೆ ಸಚಿವ ಸ್ಥಾನ ನೀಡಿ – ಜನರ ಧ್ವನಿಗೆ ಗೌರವ ಕೊಡಿ!” ಎಂಬ ಘೋಷಣೆಯೊಂದಿಗೆ. ಕಾರ್ಯಕರ್ತರು ತಮ್ಮ ಆಕ್ರೋಶ ಮತ್ತು ಬೇಡಿಕೆಯನ್ನು ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಮತ್ತು ಮುಸ್ಲಿಂ ಸಮಾಜದ ಮುಖಂಡರಾದ ಶಾಮಿದ್ ಮನಿಯಾರ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಮಾಜಸೇವಕರಾದ ಎಂ.ಡಿ. ಆಸಿಫ್ ಹುಸೇನ್. ಸೇರಿದಂತೆ ವಿವಿಧ ಸಮಾಜಗಳ ಮುಖಂಡರು, ಅಪಾರ ಸಂಖ್ಯೆಯ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪಾಲ್ಗೊಂಡು ಬೆಂಬಲ ಸೂಚಿಸಿದರು.