Home ಸುದ್ದಿ ಬಳ್ಳಾರಿ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ನೀವು ಊರಿಗೆ ಹೋಗುವಾಗ ಮನೆ ಬಗ್ಗೆ ಚಿಂತಿಸಬೇಕಿಲ್ಲ!
ಸುದ್ದಿ

ಬಳ್ಳಾರಿ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ನೀವು ಊರಿಗೆ ಹೋಗುವಾಗ ಮನೆ ಬಗ್ಗೆ ಚಿಂತಿಸಬೇಕಿಲ್ಲ!

Share
Share

 

ಮರ್ಚೆಡ್ ಡೇಸ್ ಸುದ್ದಿ.

ಬಳ್ಳಾರಿ: ನೀವು ಕೆಲಸದ ನಿಮಿತ್ತವೋ ಅಥವಾ ಪ್ರವಾಸದ ನಿಮಿತ್ತವೋ ದೀರ್ಘಕಾಲದವರೆಗೆ ಮನೆಯನ್ನು ಲಾಕ್ ಮಾಡಿ ಬೇರೆ ಊರಿಗೆ ಹೋಗುತ್ತೀರಾ? ಮನೆಯಲ್ಲಿರುವ ಆಸ್ತಿ-ಪಾಸ್ತಿ ಮತ್ತು ಸುರಕ್ಷತೆಯ ಬಗ್ಗೆ ಆತಂಕವಿದೆಯೇ? ಹಾಗಾದರೆ, ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆಯು ನಿಮಗಾಗಿಯೇ ಒಂದು ವಿನೂತನ ಮತ್ತು ಅತ್ಯಂತ ಸುರಕ್ಷಿತ ಯೋಜನೆಯನ್ನು ಜಾರಿಗೆ ತಂದಿದೆ.

ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ಸುಮನ್ ಡಿ. ಪನ್ನೀಕರ್ ಅವರ  ನೇತೃತ್ವದಲ್ಲಿ, ಇದೀಗ ‘ಲಾಕ್ಡ್ ಹೌಸ್ ಮಾನಿಟರಿಂಗ್ ಸಿಸ್ಟಮ್’ (Locked House Monitorin system LHMS) ಎಂಬ ವಿಶಿಷ್ಟ ಮತ್ತು ವಿನೂತನ  ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತಂದಿದ್ದಾರೆ.

ನೀವು ನಿಮ್ಮ ಮನೆಯನ್ನು ಲಾಕ್ ಮಾಡಿ ಊರಿಗೆ ಹೋಗುವಾಗ, ಈ ಕೆಳಕಂಡ ಸರಳ ಹಂತಗಳನ್ನು ಅನುಸರಿಸುವ ಮೂಲಕ ನಿಮ್ಮ ಮನೆಯ ಸುರಕ್ಷತೆಯನ್ನು

ನೀವು ಹೋಗುವ ಸ್ಥಳ, ಅವಧಿ ಮತ್ತು ನಿಮ್ಮ ಮನೆಯ ವಿಳಾಸದ ಸಂಪೂರ್ಣ ವಿವರಗಳನ್ನು ಒದಗಿಸಿ.

ಮನೆಯ ವಿಳಾಸ ಮತ್ತು ಪ್ರದೇಶವನ್ನು ಸ್ಪಷ್ಟವಾಗಿ ತೋರಿಸುವ ಒಂದು ಚಿಕ್ಕ ಸೆಲ್ಫಿ ವಿಡಿಯೋವನ್ನು ಮಾಡಿ.

ಮೇಲಿನ ಎಲ್ಲಾ ಮಾಹಿತಿಗಳನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕೃತ ವಾಟ್ಸಾಪ್ ಸಂಖ್ಯೆ 9480803083 ಗೆ ಕಳುಹಿಸಿ.

ನೀವು ಕಳುಹಿಸಿದ ಮಾಹಿತಿಯನ್ನು ತಕ್ಷಣವೇ ಸಂಬಂಧಪಟ್ಟ ಪೊಲೀಸ್ ಠಾಣೆಗೆ ರವಾನಿಸಲಾಗುತ್ತದೆ. ಇದರಿಂದ ನಿಮ್ಮ ಏರಿಯಾದಲ್ಲಿ ಗಸ್ತು ತಿರುಗುವ ಪೊಲೀಸರು, ನಿಮ್ಮ ಮನೆಯ ಮೇಲೆ ಹೆಚ್ಚಿನ ನಿಗಾವಹಿಸಲು ಮತ್ತು ವಿಶೇಷ ಭದ್ರತೆ ಒದಗಿಸಲು ಅನುಕೂಲವಾಗುತ್ತದೆ.

ಬಳ್ಳಾರಿ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪೊಲೀಸ್ ಇಲಾಖೆಯು ಈ ವಿನೂತನ ಯೋಜನೆಯನ್ನು ಪರಿಚಯಿಸಿದೆ. ಈ ಕಾರ್ಯಕ್ರಮವು ಸಂಪೂರ್ಣ ಯಶಸ್ವಿಯಾಗಲು ಪ್ರತಿಯೊಬ್ಬ ನಾಗರಿಕನ ಸಹಕಾರ ಅತ್ಯಗತ್ಯ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ನಮ್ಮೆಲ್ಲರ ಜವಾಬ್ದಾರಿ. ನೀವು ಮನೆಯಿಂದ ಹೊರ ಹೋಗುವಾಗ ಈ ವ್ಯವಸ್ಥೆಯನ್ನು ಬಳಸಿಕೊಂಡು, ಆತಂಕವಿಲ್ಲದೆ ನಿಮ್ಮ ಪ್ರಯಾಣವನ್ನು ಆನಂದಿಸಿ.

ನಿಮ್ಮ ಭದ್ರತೆ – ನಮ್ಮ ಜವಾಬ್ದಾರಿ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...