ಮರ್ಚೇಡ್ ಡೇಸ್ ಸುದ್ದಿ.
ಗಂಗಾವತಿ: ‘ಶ್ರೀ ವಿನಾಯಕ ಕನ್ನಡ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ’ಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ವಿಶೇಷ ದಿನದ ಅಂಗವಾಗಿ ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪರಿಸರದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿ, ಅವುಗಳನ್ನು ಪೋಷಿಸುವ ಕುರಿತು ಜಾಗೃತಿ ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ ನಾಯ್ಡು, ದೈಹಿಕ ಶಿಕ್ಷಕರಾದ ಉಜ್ಜನಗೌಡ, ಹಾಗೂ ಶಿಕ್ಷಕ ವೃಂದದವರಾದ ಚನ್ನಬಸವ, ರಾಮನಗೌಡ, ಸಂತೋಷ್ ಕುಮಾರ್, ಕುಮಾರಿ ಯಶೋದಾ ಅವರು ಭಾಗವಹಿಸಿ, ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಿದರು. ಶಾಲೆಯ ಎಲ್ಲ ಶಿಕ್ಷಕ-ಶಿಕ್ಷಕಿಯರು ಮತ್ತು ಮುದ್ದು ಮಕ್ಕಳು
ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಪರಿಸರ ದಿನವನ್ನು ಆಚರಿಸಿದರು.