Home ಸುದ್ದಿ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳಿ: ಸಹಾಯಕ ಆಯುಕ್ತ ಡಾ.ಹಂಪಣ್ಣ.
ಸುದ್ದಿ

ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳಿ: ಸಹಾಯಕ ಆಯುಕ್ತ ಡಾ.ಹಂಪಣ್ಣ.

Share
oplus_1048576
Share
oplus_1048578

ಅಂತರರಾಷ್ಟಿಯ ಯೋಗ ದಿನಾಚರಣೆ ಪೂರ್ವಭಾವಿ ಸಭೆ

ಮರ್ಚೆಡ್ ಡೇಸ್ ಸುದ್ದಿ.

ರಾಯಚೂರು ಜೂನ್ 12 (ಕರ್ನಾಟಕ ವಾರ್ತೆ): ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಜೂನ್ 21 ರಂದು ಬೆಳಿಗ್ಗೆ 6.45ಗಂಟೆಗೆ 12ನೇ ಅಂತರರಾಷ್ಟಿಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗುವುದು. ಸಾವಿರಾರು ಯೋಗಾಪಟುಗಳು ಭಾಗವಹಿಸುವರು. ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಸಲಾಗುವುದು. ಇದಕ್ಕೆ ಬೇಕಾದ ಸಿದ್ಧತೆಯನ್ನು ಸಂಬಧಿಸಿದ ಇಲಾಖೆಯ ಅಧಿಕಾರಿಗಳು ಕೈಗೊಳ್ಳಬೇಕೆಂದು ರಾಯಚೂರು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ ಅವರು ಸೂಚಿಸಿದರು.

ಜೂನ್ 12 ಶುಕ್ರವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂತರಾಷ್ಟಿಯ ಯೋಗ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯೋಗವನ್ನು ಕೇವಲ ಒಂದೇ ದಿನಕ್ಕೆ ಸೀಮಿತಗೊಳಿಸದೇ ಪ್ರತಿದಿನ ಯೋಗಾಸನಗಳನ್ನು ಮಾಡುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆರೋಗ್ಯ ರಕ್ಷಣೆಗೆ ಯೋಗ ಅತ್ಯುತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದರು.

ಅಂದು ಬೆಳಿಗ್ಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ,ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ಸಂಸ್ಥೆಗಳ ಯೋಗ ಆಸಕ್ತರು ಭಾಗವಹಿಸಲಿದ್ದು, ಜೂನ್ 18 ಮತ್ತು 19ರಂದು ಯೋಗ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಬೇಕು. ಕಾರ್ಯಕ್ರಮದ ಯಶಸ್ವಿಗಾಗಿ ವಿವಿಧ ಇಲಾಖೆಗಳಿಗೆ ವಿವಿಧ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದ್ದು, ಅವುಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕೆಂದು ಸಂಬಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸಹಾಯಕ ಆಯುಕ್ತರು ಸೂಚಿಸಿದರು.

ಯೋಗ ನಡೆಯುವ ಸ್ಥಳದಲ್ಲಿ ಆಂಬುಲೆನ್ಸ್, ಕುಡಿಯುವ ನೀರು ಹಾಗೂ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಮಹಾನಗರ ಪಾಲಿಕೆಯಿಂದ ಸ್ವಚ್ಚತೆ ಹಾಗೂ ನೀರಿನ ವ್ಯವಸ್ಥೆ ಹಾಗೂ ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಯವರು, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ತಮಗೆ ಅನುಕೂಲಕರವಾದ ಸಮಯದಲ್ಲಿ ಆನ್‌ಲೈನ್ ಮೂಲಕ ಯೋಗ ತರಬೇತಿಯನ್ನು ಪಡೆಯಬಹುದು. ಆನ್‌ಲೈನ್ ಮೂಲಕ ಯೋಗ ತರಬೇತಿಗೆ ನೋಂದಾಯಿಸಿಕೊಡು ಯೋಗಾಭ್ಯಾಸ ಮಾಡಬಹುದು ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರವೀಣ ಕುಮಾರ್, ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕ ಸೋಮಶೇಖರಪ್ಪ ಹೋಕ್ರಾಣಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುನೀತಾ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ, ಆಹಾರ ಇಲಾಖೆ ವ್ಯವಸ್ಥಾಪಕ ಹರೀಶ್ ಡಿ.,

ರಾಯಚೂರು ಮಹಾನಗರ ಪಾಲಿಕೆಯ ಸಮುದಾಯ ಸಂಘಟನಾಧಿಕಾರಿ ಕೃಷ್ಣ ಕಟ್ಟಿಮನಿ ಸೇರಿದಂತೆ ವಿವಿಧ ಸಂಘ, ಸಂಸ್ಥೆಯ ಮುಖಂಡರು ಸಭೆಯಲ್ಲಿ ಇದ್ದರು.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...