Home ಸುದ್ದಿ “ಮತ ಬ್ಯಾಂಕ್‌ಗಾಗಿ ಜಾತಿ ದ್ವೇಷದ ದಾಳ: ಬಿಜೆಪಿಗೆ ಕಾಂಗ್ರೆಸ್ ತಿರುಗೇಟು”
ಸುದ್ದಿ

“ಮತ ಬ್ಯಾಂಕ್‌ಗಾಗಿ ಜಾತಿ ದ್ವೇಷದ ದಾಳ: ಬಿಜೆಪಿಗೆ ಕಾಂಗ್ರೆಸ್ ತಿರುಗೇಟು”

Share
Share

 

ಮರ್ಚೆಡ್ ಡೇಸ್ ಸುದ್ದಿ.

ಕನಕಗಿರಿ, ಜೂ.18: ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ಜನರ ವಿಶ್ವಾಸ ಗಳಿಸಿದ್ದು, ಕೇಂದ್ರದ ಬಿಜೆಪಿ ಸರ್ಕಾರ ಮಾತ್ರ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಕನಕಗಿರಿಯ ಕಾಂಗ್ರೆಸ್ ಮುಖಂಡರು ಆರೋಪಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, “ಪ್ರತಿಯೊಬ್ಬರ ಖಾತೆಗೆ ₹15 ಲಕ್ಷ ಜಮಾ ಮಾಡುವುದಾಗಿ ಭರವಸೆ ನೀಡಿದ್ದ ಬಿಜೆಪಿ ಜನತೆಗೆ ದ್ರೋಹ ಬಗೆದಿದೆ” ಎಂದು ಟೀಕಿಸಿದರು.

ಕಾಂಗ್ರೆಸ್ ಸರ್ಕಾರವು ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಕ್ಷೇತ್ರದ ವಿವಿಧ ಭಾಗಗಳಲ್ಲಿ ಕನಕ ಭವನ, ಅಂಬೇಡ್ಕರ್ ಭವನ ಹಾಗೂ ಸಂಸ್ಕೃತಿ ಭವನಗಳ ನಿರ್ಮಾಣಕ್ಕೆ ಅನುದಾನ ಒದಗಿಸಲಾಗಿದೆ. ಸವಿತಾ ಸಮಾಜದ ಯುವಕರಿಗೆ ಸೌಂದರ್ಯ ವರ್ಧಕ ಮತ್ತು ಕಟಿಂಗ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸ್ವಾವಲಂಬನೆಗೆ ಪ್ರೋತ್ಸಾಹ ನೀಡಲಾಗಿದೆ. ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ಸಚಿವ ಶಿವರಾಜ್ ತಂಗಡಗಿ ಮಹತ್ವದ ಕೊಡುಗೆ ನೀಡಿದ್ದು, ಕೃಷ್ಣಾ ಬಿ-ಸ್ಕೀಂ ಯೋಜನೆ ಜಾರಿಗೆ ತಂದಿರುವುದು ರೈತರಿಗೆ ಅನುಕೂಲಕರವಾಗಿದೆ ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರವು ಯುವಕರಿಗೆ ಉದ್ಯೋಗ ಸೃಷ್ಟಿಸುವ ಯಾವುದೇ ಮಹತ್ವದ ಯೋಜನೆಗಳನ್ನು ಜಾರಿಗೆ ತರಲಿಲ್ಲ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡರು, “ಅಭಿವೃದ್ಧಿ ವಿಷಯದಲ್ಲಿ ವಿಫಲವಾಗಿರುವ ಬಿಜೆಪಿ, ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಜಾತಿಯ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ” ಎಂದು ಕಿಡಿಕಾರಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ಸ್ವಾಮಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತನುಶ್ರೀ ರಾಮಚಂದ್ರ, ವಕ್ತಾರ ಶರಣಪ್ಪ ಭತ್ತದ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹಜರತ್ ಹುಸೇನ್, ಮುಖಂಡರಾದ ಸಿದ್ದಪ್ಪ ನಿರಲೂಟಿ, ರವಿ ಪಾಟೀಲ್, ಬಸವಂತಗೌಡ ಮಾದಿನಾಳ, ಕಂಠಿರಂಗ ನಾಯಕ, ಟಿ.ಜೆ. ರಾಮಚಂದ್ರ, ಹೊನ್ನೂರು ಉಪ್ಪು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಚಾರ ಸಮಿತಿ ಅಧ್ಯಕ್ಷ ರಮೇಶ್ ನಾಯಕ ಮಾತನಾಡಿ, “ಕನಕಗಿರಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಸ್ತಿತ್ವವೇ ಪ್ರಶ್ನಾರ್ಥಕವಾಗಿದೆ. ಸಚಿವ ಶಿವರಾಜ್ ತಂಗಡಗಿ ಅವರ ಅಭಿವೃದ್ಧಿ ಕಾರ್ಯಗಳನ್ನು ಜನರು ಕಣ್ಣಾರೆ ನೋಡುತ್ತಿದ್ದಾರೆ. ಟೀಕೆ ಮಾಡುವ ಮುನ್ನ ಬಿಜೆಪಿ ನಾಯಕರು ರಾಜಕೀಯದ ಬಗ್ಗೆ ಸರಿಯಾದ ತಿಳುವಳಿಕೆ ಪಡೆದುಕೊಳ್ಳಬೇಕು” ಎಂದು ತಿರುಗೇಟು ನೀಡಿದರು.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...