ಮರ್ಚೆಡ್ ಡೇಸ್ ಸುದ್ದಿ.
ರಾಯಚೂರು ಜೂನ್ 20 (ಕರ್ನಾಟಕ ವಾರ್ತೆ): ರಾಯಚೂರು ನಗರದ ರೈಲ್ವೇ ಸ್ಟೇಷನ್ ರಸ್ತೆಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭಿಸಲಾದ ಕಿಶೋರಿ ಕೇಂದ್ರಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಸತ್ಯ ನಾರಾಯಣ ಶೆಟ್ಟಿ ಅವರು ಗುರುವಾರ ಭೇಟಿ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕಿಶೋರಿಯರಿಯರೊಂದಿಗೆ ಮಕ್ಕಳ ಹಕ್ಕುಗಳ ಕುರಿತು ಚರ್ಚೆ ಮಾಡಿದರು. ಕಿಶೋರಿ ಕೇಂದ್ರ ಉತ್ತಮ ಯೋಜನೆಯಾಗಿದ್ದು, ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ ಕಾರನೂರು ಅವರು ಕಿಶೋರಿ ಕೇಂದ್ರದ ಉದ್ದೇಶವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಿಗೆ ಪರಿಚಯಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಂ.ಡಿಗೋಕುಲ್ ಹುಸೇನ, ಮಕ್ಕಳ ಸಹಾಯವಾಣಿಯ ಸಿಬ್ಬಂದಿಗಳು ಉಪಸ್ಥಿತಿದ್ದರು.