Home ಸುದ್ದಿ ಕೊಪ್ಪಳ ವಿಶ್ವವಿದ್ಯಾಲಯದಿಂದ ಮಹತ್ವದ ಪ್ರಕಟಣೆ: ಸಿಂಡಿಕೇಟ್ ಸದಸ್ಯರಾಗಿ ಡಾ. ಶಿವರಾಜ್ ಗುರಿಕಾರ್ ಸೇರಿದಂತೆ ಮತ್ತೋರ್ವ ಶಿಕ್ಷಣ ತಜ್ಞರ ನಾಮನಿರ್ದೇಶನ.
ಸುದ್ದಿ

ಕೊಪ್ಪಳ ವಿಶ್ವವಿದ್ಯಾಲಯದಿಂದ ಮಹತ್ವದ ಪ್ರಕಟಣೆ: ಸಿಂಡಿಕೇಟ್ ಸದಸ್ಯರಾಗಿ ಡಾ. ಶಿವರಾಜ್ ಗುರಿಕಾರ್ ಸೇರಿದಂತೆ ಮತ್ತೋರ್ವ ಶಿಕ್ಷಣ ತಜ್ಞರ ನಾಮನಿರ್ದೇಶನ.

Share
oplus_34
Share

 

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ಕೊಪ್ಪಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಮಂಡಳಿಗೆ ಇಬ್ಬರು ಗಣ್ಯ ಶಿಕ್ಷಣ ತಜ್ಞರನ್ನು ನಾಮನಿರ್ದೇಶನ ಮಾಡಿ ವಿಶ್ವವಿದ್ಯಾಲಯದ ಕುಲಸಚಿವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000ರ ಪ್ರಕರಣ 28(1)(ಎಫ್‌) ರನ್ವಯ, ದಿನಾಂಕ 20 ಜೂನ್ 2026 ರಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ಈ ಮಹತ್ವದ ನಾಮನಿರ್ದೇಶನವನ್ನು ಮಾಡಲಾಗಿದೆ.

ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರದ .ಡಾ. ಶಿವರಾಜ್ ಗುರಿಕಾರ್. ಮತ್ತು

ಡಾ. ಬಿ. ವೆಂಕಟೇಶ್: ತಾವರಗೇರಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು.

ವಿಶ್ವವಿದ್ಯಾಲಯದ ಪ್ರಕಟಣೆಯ ಪ್ರಕಾರ, ಈ ನಾಮನಿರ್ದೇಶನವು ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000ರ ಪ್ರಕರಣ 39(1) ರನ್ವಯ ಸರ್ಕಾರದ ಮುಂದಿನ ಆದೇಶದವರೆಗೆ ಅಥವಾ ಇವರ ಅಧಿಕಾರಾವಧಿ ಮುಕ್ತಾಯವಾಗುವವರೆಗೆ ಜಾರಿಯಲ್ಲಿರಲಿದೆ.

ನಾಮನಿರ್ದೇಶನಗೊಂಡ ಸದಸ್ಯರು ಸರ್ಕಾರದ ನಿಯಮಾವಳಿಗಳಿಗೆ ಬದ್ಧರಾಗಿ, ವಿಶ್ವವಿದ್ಯಾಲಯದ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಅಭಿವೃದ್ಧಿಗೆ ಸಹಕಾರ ನೀಡುವ ಮೂಲಕ ಸಂಸ್ಥೆಯ ಸರ್ವತೋಮುಖ ಪ್ರಗತಿಗೆ ಶ್ರಮಿಸಬೇಕಿದೆ ಎಂದು ಪ್ರಕಟಣೆಯಲ್ಲಿ ಆಶಯ ವ್ಯಕ್ತಪಡಿಸಲಾಗಿದೆ.

ಈ ಮಹತ್ವದ ಆದೇಶದ ಪ್ರತಿಗಳನ್ನು ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಕೊಪ್ಪಳ ವಿಶ್ವವಿದ್ಯಾಲಯದ ಸಂಬಂಧಿತ ಸಿಂಡಿಕೇಟ್ ಸದಸ್ಯರಿಗೆ ಮಾಹಿತಿ ಹಾಗೂ ಅಗತ್ಯ ಮುಂದಿನ ಕ್ರಮಕ್ಕಾಗಿ ರವಾನಿಸಲಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು  ಡಾ. ಶಿವರಾಜ ಗುರಿಕಾರ್. ಅವರನ್ನು ಕಾಲೇಜಿನ  ಸಿಬ್ಬಂದಿ ವರ್ಗ ಮತ್ತು ಉಪನ್ಯಾಸ ಮಿತ್ರರು  ಸನ್ಮಾನಿಸಿ ಅಭಿನಂದಿಸಿದರು.

 

 

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...