Home ಸುದ್ದಿ ಉದ್ಯೋಗಾವಕಾಶ: ರಾಯಚೂರು ಅಂಚೆ ಇಲಾಖೆಯಲ್ಲಿ ಜೀವ ವಿಮೆ ಮಾರಾಟ ಪ್ರತಿನಿಧಿಗಳ ಹುದ್ದೆಗೆ ನೇರ ಸಂದರ್ಶನ.
ಸುದ್ದಿ

ಉದ್ಯೋಗಾವಕಾಶ: ರಾಯಚೂರು ಅಂಚೆ ಇಲಾಖೆಯಲ್ಲಿ ಜೀವ ವಿಮೆ ಮಾರಾಟ ಪ್ರತಿನಿಧಿಗಳ ಹುದ್ದೆಗೆ ನೇರ ಸಂದರ್ಶನ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ರಾಯಚೂರು, ಜೂನ್ 25 : ನಿರುದ್ಯೋಗಿ ಯುವಕ-ಯುವತಿಯರಿಗೆ ಹಾಗೂ ಸ್ವಯಂ ಉದ್ಯೋಗ ಆಕಾಂಕ್ಷಿಗಳಿಗೆ ಭಾರತೀಯ ಅಂಚೆ ಇಲಾಖೆಯು ಸುವರ್ಣಾವಕಾಶವೊಂದನ್ನು ತಂದಿದೆ. ರಾಯಚೂರು ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ  ಉತ್ಪನ್ನಗಳ ಮಾರಾಟಕ್ಕಾಗಿ ನೇರ ಪ್ರತಿನಿಧಿಗಳನ್ನು  ಆಯ್ಕೆ ಮಾಡಿಕೊಳ್ಳಲು ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಪ್ರಮುಖ ವಿವರಗಳು ಈ ಕೆಳಗಿನಂತಿವೆ:

ವಿದ್ಯಾಹರ್ಹತೆ: ಕನಿಷ್ಠ 10ನೇ ತರಗತಿ (SSLC) ಪಾಸಾಗಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ ತುಂಬಿರಬೇಕು.

ನಿರುದ್ಯೋಗಿಗಳು, ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು/ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಹಾಗೂ ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನರು ಮತ್ತು ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸೂಕ್ತ ಎನಿಸುವ ಯಾವುದೇ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಉತ್ತಮ ಸಂವಹನಾ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿರುವ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು.

ಸಂದರ್ಶನದ ವಿವರಗಳು:

ದಿನಾಂಕ: ಜುಲೈ 06, 2026

ಸಮಯ: ಬೆಳಿಗ್ಗೆ 11:00 ಗಂಟೆಗೆ

ಸ್ಥಳ: ಅಂಚೆ ಅಧೀಕ್ಷಕರ ಕಚೇರಿ, ಗಂಜ್ ವೃತ್ತದ ಬಳಿ, ರಾಯಚೂರು.

ಆಯ್ಕೆಯಾದ ಅಭ್ಯರ್ಥಿಗಳು ₹5,000 ಗಳ ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ  ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ.

ನಿಯುಕ್ತರಾದ ಪ್ರತಿನಿಧಿಗಳಿಗೆ ಅವರು ಮಾಡುವ ವ್ಯವಹಾರದ ಈ ಆಧಾರದ ಮೇಲೆ ಸೂಕ್ತ ಹಾಗೂ ಆಕರ್ಷಕ ಕಮಿಷನ್ ನೀಡಲಾಗುತ್ತದೆ.

ಹೆಚ್ಚಿನ ವಿವರಗಳಿಗಾಗಿ ಸಾರ್ವಜನಿಕರು ಹಾಗೂ ಆಸಕ್ತರು ತಮ್ಮ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ರಾಯಚೂರು ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...