Home ಸುದ್ದಿ  ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವರ ನೂತನ ಕಚೇರಿ ಉದ್ಘಾಟನೆ. ಜನಸಾಮಾನ್ಯರ ಅಹವಾಲುಗಳಿಗೆ ಆದ್ಯತೆ.
ಸುದ್ದಿ

 ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವರ ನೂತನ ಕಚೇರಿ ಉದ್ಘಾಟನೆ. ಜನಸಾಮಾನ್ಯರ ಅಹವಾಲುಗಳಿಗೆ ಆದ್ಯತೆ.

Share
Share

 

ಮರ್ಚೇಡ್ ಡೇಸ್ ಸುದ್ದಿ.

ಬೆಂಗಳೂರು, ಜುಲೈ 2: ಬೆಂಗಳೂರಿನ ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ತಮ್ಮ ನೂತನ ಸಚಿವಾಲಯದ ಕಚೇರಿಯನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದರು.

ಕಚೇರಿ ಉದ್ಘಾಟನೆಯ ಬೆನ್ನಲ್ಲೇ ಸಚಿವರು ಕಾರ್ಯತತ್ಪರರಾದರು. ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರ ಅಹವಾಲುಗಳನ್ನು ಅತ್ಯಂತ ತಾಳ್ಮೆಯಿಂದ ಆಲಿಸಿದ ಅವರು, ಸಾರ್ವಜನಿಕರು ಸಲ್ಲಿಸಿದ ಮನವಿಗಳನ್ನು ಸ್ವೀಕರಿಸಿದರು. ಈ ವೇಳೆ, ಸಾರ್ವಜನಿಕರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಹಾಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸ್ಥಳದಲ್ಲೇ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ಜನಪರ, ಪಾರದರ್ಶಕ ಹಾಗೂ ಉತ್ತರದಾಯಿ ಆಡಳಿತವನ್ನು ನೀಡುವುದೇ ನಮ್ಮ ಸರ್ಕಾರದ ಮುಖ್ಯ ಉದ್ದೇಶ. ಈ ಸಂಕಲ್ಪದೊಂದಿಗೆ ನಾವು ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದೇವೆ, ಎಂದು ಪುನರುಚ್ಚರಿಸಿದರು.

ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ವಿಷಯಗಳಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ನಿರಂತರ ಸಮನ್ವಯ ಸಾಧಿಸುವುದು ತಮ್ಮ ಆದ್ಯತೆ ಎಂದು ತಿಳಿಸಿದ ಸಚಿವರು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಮತ್ತು ಪರಿಣಾಮಕಾರಿ ಸ್ಪಂದನೆ ನೀಡುವ ನಿಟ್ಟಿನಲ್ಲಿ ಸಚಿವಾಲಯದ ಕಚೇರಿಯು ಸದಾ ಎಲ್ಲರಿಗೂ ಮುಕ್ತವಾಗಿರಲಿದೆ ಎಂದು ಭರವಸೆ ನೀಡಿದರು.

ಈ ಕಚೇರಿಯು ರಾಜ್ಯದ ನಗರಾಭಿವೃದ್ಧಿ ಚಟುವಟಿಕೆಗಳ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಲಿದ್ದು, ನಾಗರಿಕರ ಸಮಸ್ಯೆಗಳಿಗೆ ವೇಗದ ಪರಿಹಾರ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...