Home ಸುದ್ದಿ ರಾಯಚೂರಿನಲ್ಲಿ ಬೆಳೆಗಳ ಪರಿಶೀಲನೆ : ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ.
ಸುದ್ದಿ

ರಾಯಚೂರಿನಲ್ಲಿ ಬೆಳೆಗಳ ಪರಿಶೀಲನೆ : ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ.

Share
Share

 

ಮರ್ಚೆಡ್ ಡೇಸ್ ಸುದ್ದಿ .

ರಾಯಚೂರು, ಜುಲೈ 04: ಜಿಲ್ಲೆಯಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ರೈತರು ಎದುರಿಸುತ್ತಿರುವ ಸಂಕಷ್ಟ ಹಾಗೂ ಬಿತ್ತನೆ ಮಾಡಲಾದ ಬೆಳೆಗಳ ಸ್ಥಿತಿಗತಿಯನ್ನು ಅವಲೋಕಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಎಸ್. ನಕುಲ್ ಅವರು ರಾಯಚೂರು ತಾಲೂಕಿನ ಮಸ್ಸಪೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಚೌಹಾಣ್ ಅವರು ಕಾರ್ಯದರ್ಶಿಗಳಿಗೆ ಮಾಹಿತಿ ನೀಡುತ್ತಾ, ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಜೂನ್ ತಿಂಗಳ ಅಂತ್ಯದವರೆಗೆ ಜಿಲ್ಲೆಯಲ್ಲಿ ಶೇ. 22 ರಷ್ಟು ಮಳೆಯ ಕೊರತೆ ಉಂಟಾಗಿದೆ ಎಂದು ತಿಳಿಸಿದರು. ಮಳೆಯು ಸಮಾನವಾಗಿ ಹಂಚಿಕೆಯಾಗದ ಕಾರಣ, ತೇವಾಂಶದ ಕೊರತೆಯಿಂದಾಗಿ ಬಿತ್ತನೆ ಮಾಡಿದ ಹತ್ತಿ ಬೆಳೆಗಳು ಅಸಮರ್ಪಕವಾಗಿ ಮೊಳಕೆ ಒಡೆದಿರುವುದನ್ನು ಈ ಸಂದರ್ಭದಲ್ಲಿ ಗಮನಿಸಲಾಯಿತು.

ಮುಂದಿನ ದಿನಗಳಲ್ಲಿ ಒಂದು ವೇಳೆ ಬರ ಪರಿಸ್ಥಿತಿ ನಿರ್ಮಾಣವಾದರೆ ರೈತರಿಗೆ ಆರ್ಥಿಕ ರಕ್ಷಣೆ ಒದಗಿಸಲು ಬೆಳೆ ವಿಮೆ ಯೋಜನೆಯು ಅತ್ಯಂತ ಅವಶ್ಯಕವಾಗಿದೆ ಎಂದು ಎಸ್.ಎಸ್. ನಕುಲ್ ಅವರು ತಿಳಿಸಿದರು. ಈ ನಿಟ್ಟಿನಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಬೆಳೆ ವಿಮೆ ಯೋಜನೆಗಳ ಬಗ್ಗೆ ರೈತರಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಮತ್ತು ಅರಿವು ಮೂಡಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಕ್ಷೇತ್ರ ಭೇಟಿಯ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜೂಬಿನ್ ಮೋಹಪಾತ್ರ, ಉಪ ಕೃಷಿ ನಿರ್ದೇಶಕ ನಹೀಂ ಹುಸೇನ್, ರಾಯಚೂರು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕಿ ದೀಪಾ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...