Home ಸುದ್ದಿ 10ನೇ ತರಗತಿ ಅನುತ್ತೀರ್ಣರಾದ ಬಾಲಕಿಯರಿಗೆ ‘ಸೆಕೆಂಡ್ ಚಾನ್ಸ್’; ಉಚಿತ ಶಿಕ್ಷಣಕ್ಕೆ ಚಾಲನೆ.
ಸುದ್ದಿ

10ನೇ ತರಗತಿ ಅನುತ್ತೀರ್ಣರಾದ ಬಾಲಕಿಯರಿಗೆ ‘ಸೆಕೆಂಡ್ ಚಾನ್ಸ್’; ಉಚಿತ ಶಿಕ್ಷಣಕ್ಕೆ ಚಾಲನೆ.

Share
Share

ಮರ್ಚೆಡ್ ಡೇಸ್ ಸುದ್ದಿ.

ಕೊಪ್ಪಳ: ಶಿಕ್ಷಣದಿಂದ ವಂಚಿತರಾದ ಹಾಗೂ ಹತ್ತನೇ ತರಗತಿಯಲ್ಲಿ ಅನುತ್ತೀರ್ಣರಾದ ಬಾಲಕಿಯರು ಮತ್ತು ಮಹಿಳೆಯರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ‘ಪ್ರಥಮ ಎಜುಕೇಶನ್ ಫೌಂಡೇಶನ್’ ಮುಂದಾಗಿದೆ. ನಗರದ ಬಿಜೆಪಿ ಕಚೇರಿ ರಸ್ತೆ ಮತ್ತು ಕೊಲ್ಲೂರ್ ಲೇಔಟ್‌ನಲ್ಲಿ ಸಂಸ್ಥೆಯ ನೂತನ ಬ್ಲಾಕ್ ಕಚೇರಿಗಳನ್ನು ಮಂಗಳವಾರ ವಿಧ್ಯುಕ್ತವಾಗಿ ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಫೌಂಡೇಶನ್‌ನ ಶಿಕ್ಷಕ ಮುತ್ತಪ್ಪ ಮಾತ್ನಾಡಿ, “ನಮ್ಮ ಸಂಸ್ಥೆಯು ಸರ್ಕಾರೇತರ ಸ್ವಯಂಸೇವಾ ಸಂಸ್ಥೆಯಾಗಿದ್ದು, ‘ಸೆಕೆಂಡ್ ಚಾನ್ಸ್’ ಎಂಬ ವಿಶೇಷ ಕಾರ್ಯಕ್ರಮದ ಮೂಲಕ ಅರ್ಧಕ್ಕೆ ಶಿಕ್ಷಣ ಮೊಟಕುಗೊಳಿಸಿದ ಹಾಗೂ ಫೇಲಾದ ಬಾಲಕಿಯರಿಗೆ ಉಚಿತ ಶಿಕ್ಷಣ ಮತ್ತು ಮಾರ್ಗದರ್ಶನ ನೀಡುತ್ತಿದೆ. ಕೇವಲ ಪರೀಕ್ಷೆಗೆ ಸಿದ್ಧತೆ ಮಾತ್ರವಲ್ಲದೆ, ಸ್ವಯಂ ಉದ್ಯೋಗ ಕೈಗೊಳ್ಳಲು ಅಗತ್ಯವಿರುವ ವೃತ್ತಿಪರ ತರಬೇತಿಯನ್ನು ನೀಡುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ” ಎಂದು ತಿಳಿಸಿದರು.

ಫೌಂಡೇಶನ್‌ನ ಶಿಕ್ಷಕ ರಫಿ ಮಾತನಾಡಿ, ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಯಶಸ್ವಿಯಾಗಿ ಕಾರ್ಯಕ್ರಮ ನಡೆಸುತ್ತಿದ್ದು, ವಿದ್ಯಾರ್ಥಿನಿಯರಿಗೆ ಉಚಿತ ಪಠ್ಯಪುಸ್ತಕ ಹಾಗೂ ಪ್ರತಿ ವಿಷಯಕ್ಕೂ ಪರಿಣಿತ ಶಿಕ್ಷಕರಿಂದ ತರಬೇತಿ ನೀಡಲಾಗುತ್ತಿದೆ. ಕೊಪ್ಪಳದಲ್ಲಿ ಈಗಾಗಲೇ 949ಕ್ಕೂ ಹೆಚ್ಚು ಮಹಿಳೆಯರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಶಿಕ್ಷಣದಿಂದ ಹೊರಗುಳಿದವರು ಕೂಡಲೇ ನಮ್ಮ ಕಚೇರಿಯನ್ನು ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನ್ಯೂಸ್ ಫಸ್ಟ್ ವರದಿಗಾರ ರಾಜು ಬಿ.ಆರ್. ಅವರು ಶಿಕ್ಷಣದ ಮಹತ್ವದ ಕುರಿತು ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಫೌಂಡೇಶನ್ ತಂಡದ ನಾಯಕಿ ಶರಣಮ್ಮ, ಪ್ರಮುಖರಾದ ಕೀರ್ತಿ, ಶಿಕ್ಷಕ ಜಗದೀಶ್ ಸೇರಿದಂತೆ ಹಲವು ಗಣ್ಯರು ಹಾಗೂ ಫೌಂಡೇಶನ್‌ನ ಸಿಬ್ಬಂದಿ ಉಪಸ್ಥಿತರಿದ್ದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...