Home ಸುದ್ದಿ ರಾಯಚೂರಿನಲ್ಲಿ ‘ಕುರುಬ ಎಸ್‌ಟಿ ಮೀಸಲಾತಿ’ ಹೋರಾಟಕ್ಕೆ ಬಲ: ಸಮುದಾಯದ ಬೃಹತ್ ಜಾಗೃತಿ ಅಭಿಯಾನ ಸಭೆ.
ಸುದ್ದಿ

ರಾಯಚೂರಿನಲ್ಲಿ ‘ಕುರುಬ ಎಸ್‌ಟಿ ಮೀಸಲಾತಿ’ ಹೋರಾಟಕ್ಕೆ ಬಲ: ಸಮುದಾಯದ ಬೃಹತ್ ಜಾಗೃತಿ ಅಭಿಯಾನ ಸಭೆ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಶ್ರೀ ಕನಕ ಭವನದಲ್ಲಿ, ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿ ಕಲ್ಪಿಸಬೇಕೆಂಬ ಬೇಡಿಕೆಯನ್ನು ಬಲಪಡಿಸುವ ನಿಟ್ಟಿನಲ್ಲಿ “ಕುರುಬ ಎಸ್‌ಟಿ ಮೀಸಲಾತಿ ಹಕ್ಕೊತ್ತಾಯದ ಜಾಗೃತಿ ಅಭಿಯಾನ” ಸಭೆಯು ಯಶಸ್ವಿಯಾಗಿ ನಡೆಯಿತು. ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳವರ ಮಾರ್ಗದರ್ಶನ ಹಾಗೂ ಆಶಯದಂತೆ ಹಮ್ಮಿಕೊಳ್ಳಲಾಗಿದ್ದ ಈ ಸಭೆಯಲ್ಲಿ, ಸಮುದಾಯದ ಮುಖಂಡರು ಮತ್ತು ನೂರಾರು ಬಂಧುಗಳು ಅತ್ಯುತ್ಸಾಹದಿಂದ ಪಾಲ್ಗೊಂಡಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖಂಡರು, ದಶಕಗಳಿಂದ ಮೀಸಲಾತಿಯಿಂದ ವಂಚಿತವಾಗಿರುವ ಕುರುಬ ಸಮುದಾಯಕ್ಕೆ ನ್ಯಾಯ ಒದಗಿಸುವುದು ಅತ್ಯಗತ್ಯವಾಗಿದೆ ಎಂದು ಪ್ರತಿಪಾದಿಸಿದರು. ರಾಜ್ಯದ ಪಟ್ಟಿಯಲ್ಲಿ ಈಗಾಗಲೇ ಇರುವ ‘ಕುರುಬ’ ಎಂಬ ಸಮಾನಾರ್ಥಕ ಪದದ ವ್ಯಾಪ್ತಿಯನ್ನು ರಾಜ್ಯಾದ್ಯಂತ ವಿಸ್ತರಿಸುವ ಮೂಲಕ, ಸಮುದಾಯದ ಹಕ್ಕನ್ನು ಎಸ್‌ಟಿ ಮೀಸಲಾತಿಯಡಿ ಮರುಸ್ಥಾಪಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಬಲವಾದ ಒತ್ತಾಯವನ್ನು ಮಂಡಿಸಲಾಯಿತು. ಈ ವಿಷಯದಲ್ಲಿ ರಾಜ್ಯದ ಲೋಕಸಭೆ ಮತ್ತು ರಾಜ್ಯಸಭೆ ಸಂಸದರು ಹೆಚ್ಚಿನ ಜವಾಬ್ದಾರಿ ವಹಿಸಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಲಾಯಿತು.

ಮೀಸಲಾತಿ ಹೋರಾಟದ ಮುಂದಿನ ಕಾರ್ಯತಂತ್ರಗಳು ಮತ್ತು ರಾಜ್ಯಾದ್ಯಂತ ಹಮ್ಮಿಕೊಳ್ಳಬೇಕಾದ ಜಿಲ್ಲಾವಾರು ಜಾಗೃತಿ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು. ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಮೂಲಕ ಸರ್ಕಾರಕ್ಕೆ ತಮ್ಮ ಬೇಡಿಕೆಯನ್ನು ಪರಿಣಾಮಕಾರಿಯಾಗಿ ತಲುಪಿಸುವ ಕುರಿತು ಮುಖಂಡರು ಒಮ್ಮತದ ನಿರ್ಣಯ ಕೈಗೊಂಡರು. ಅಲ್ಲದೆ, ಸ್ಥಳೀಯ ಜನಪ್ರತಿನಿಧಿಗಳ ಮೂಲಕ ಕೇಂದ್ರಕ್ಕೆ ಮನವಿ ಸಲ್ಲಿಸಲು ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.

ಈ ಸಮಾವೇಶದಲ್ಲಿ ಮಾಜಿ ಸಂಸದರಾದ ಕೆ. ವಿರೂಪಾಕ್ಷಪ್ಪ, ಹಾಲುಮತ ಮಹಾಸಭಾದ  ರುದ್ರಣ್ಣ ಗುಳಿಗಿ ಸೇರಿದಂತೆ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು. ರಾಯಚೂರು ಜಿಲ್ಲಾ ಕುರುಬ ಸಂಘದ ಪದಾಧಿಕಾರಿಗಳು, ಹಾಲುಮತ ಮಹಾಸಭಾದ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಕುರುಬ ಸಮುದಾಯದ ಬಾಂಧವರು ಈ ಐತಿಹಾಸಿಕ ಹೋರಾಟಕ್ಕೆ ಸಾಕ್ಷಿಯಾದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...