Home ಸುದ್ದಿ ಹಿರೇ ಜಂತಕಲ್ ಶ್ರೀ ವಿನಾಯಕ ಶಾಲೆಯಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ: ನಗರಸಭೆಯ ವಿಶೇಷ ಸಹಭಾಗಿತ್ವ.
ಸುದ್ದಿ

ಹಿರೇ ಜಂತಕಲ್ ಶ್ರೀ ವಿನಾಯಕ ಶಾಲೆಯಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ: ನಗರಸಭೆಯ ವಿಶೇಷ ಸಹಭಾಗಿತ್ವ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ನಮ್ಮ ಶಾಲೆ, ನಮ್ಮ ಪರಿಸರ ಎಂಬ ಧ್ಯೇಯದೊಂದಿಗೆ ಹಿರೇ ಜಂತಕಲ್‌ನ ಶ್ರೀ ವಿನಾಯಕ ಕನ್ನಡ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಗರಸಭೆಯ ಸಹಯೋಗದೊಂದಿಗೆ ಸ್ವಚ್ಛತಾ ಜಾಗೃತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು

ಶಾಲಾ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ನಗರಸಭೆಯ ಸಿಬ್ಬಂದಿ ವರ್ಗದವರು ಪಾಲ್ಗೊಂಡು ಸ್ವಚ್ಛತೆಯ ಕುರಿತು ಉಪಯುಕ್ತ ಮಾಹಿತಿಗಳನ್ನು ಹಂಚಿಕೊಂಡರು.

ಈ ವಿಶೇಷ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ್ ನಾಯ್ಡು , ದೈಹಿಕ ಶಿಕ್ಷಕರಾದ ಉಜ್ಜನಗೌಡ  ಸೇರಿದಂತೆ ಶಿಕ್ಷಕಿಯರಾದ ಕುಮಾರಿ ಯಶೋದಾ, ದೇವಿಕಾ, ಮತ್ತು ಗೀತಾ ಅವರು ಉಪಸ್ಥಿತರಿದ್ದರು. ಅಲ್ಲದೆ, ನಗರಸಭೆಯ  ಶರಣಪ್ಪ  ಮತ್ತು ಅವರ ತಂಡದ ಸಿಬ್ಬಂದಿ ವರ್ಗದವರು ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು

ಶಾಲೆಯ ಶಿಕ್ಷಕರು ಮತ್ತು ನಗರಸಭೆಯ ಅಧಿಕಾರಿಗಳು ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಮೌಲ್ಯಗಳನ್ನು ಬಿತ್ತುವ ಮೂಲಕ ಸ್ವಚ್ಛ ಮತ್ತು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...