Home ಸುದ್ದಿ ರಿಮ್ಸ್ ಆಸ್ಪತ್ರೆಗೆಂದು ತೆರಳಿದ್ದ ವ್ಯಕ್ತಿ ನಾಪತ್ತೆ: ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು.
ಸುದ್ದಿ

ರಿಮ್ಸ್ ಆಸ್ಪತ್ರೆಗೆಂದು ತೆರಳಿದ್ದ ವ್ಯಕ್ತಿ ನಾಪತ್ತೆ: ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು.

Share
Share

 

 

ಮರ್ಚೇಡ್ ಡೇಸ್ ಸುದ್ದಿ.

ರಾಯಚೂರು : ರಾಯಚೂರಿನ ಎಲ್.ಬಿ.ಎಸ್ ನಗರದ ನಿವಾಸಿಯೊಬ್ಬರು ಆಸ್ಪತ್ರೆಗೆ ತೆರಳಿದವರು ವಾಪಸ್ ಬಾರದೇ ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಆತಂಕಕ್ಕೀಡಾಗಿರುವ ಕುಟುಂಬಸ್ಥರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಎನ್.ನಾಗೇಂದ್ರ (50) ತಂದೆ ಭೀಮಾರಾವ್ ನಾಪತ್ತೆಯಾದ ವ್ಯಕ್ತಿ. ಇವರು ಕಳೆದ ಜೂನ್ 13ರಂದು ಬೆಳಿಗ್ಗೆ 9.30ರ ಸುಮಾರಿಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟವರು, ನಂತರ ಮರಳಿ ಮನೆಗೆ ಮರಳಿಲ್ಲ. ಈ ಕುರಿತು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಗುನ್ನ ಸಂಖ್ಯೆ: 64/2026) ದಾಖಲಾಗಿದೆ.

ನಾಪತ್ತೆಯಾದ ನಾಗೇಂದ್ರ ಅವರು ವಿಮಾ ಕಚೇರಿಯಲ್ಲಿ ಉದ್ಯೋಗಿಯಾಗಿದ್ದು, ಮರಾಠಿ ಸಮುದಾಯಕ್ಕೆ ಸೇರಿದವರು. ಇವರು ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹಾಗೂ ದಪ್ಪನೆಯ ಮೂಗಿನ ಲಕ್ಷಣಗಳನ್ನು ಹೊಂದಿದ್ದಾರೆ. ಕನ್ನಡ, ತೆಲುಗು, ಹಿಂದಿ ಮತ್ತು ಮರಾಠಿ ಭಾಷೆಗಳನ್ನು ಮಾತನಾಡಬಲ್ಲರು. ಮನೆಯಿಂದ ಹೊರಡುವಾಗ ಇವರು ಹಳದಿ ಬಣ್ಣದ ಶರ್ಟ್ ಹಾಗೂ ನೀಲಿ ಬಣ್ಣದ ಲುಂಗಿಯನ್ನು ಧರಿಸಿದ್ದರು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಈ ಚಹರೆಯ ವ್ಯಕ್ತಿ ಎಲ್ಲಾದರೂ ಕಂಡುಬಂದಲ್ಲಿ ಅಥವಾ ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಕೂಡಲೇ ರಾಯಚೂರು ಮಾರ್ಕೆಟ್  ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನಾಗೇಂದ್ರ ಅವರ ಸುಳಿವು ಸಿಕ್ಕಿದ ಕೂಡಲೇ ಮಾರ್ಕೆಟ್ ಯಾರ್ಡ್ ಠಾಣೆಯ ಪಿ.ಎಸ್.ಐ ಅವರ ಮೊಬೈಲ್ ಸಂಖ್ಯೆ 9480803849 ಅಥವಾ ಠಾಣೆಯ ದೂರವಾಣಿ ಸಂಖ್ಯೆ 08532-235600ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...