
ಮರ್ಚೆಡ್ ಡೇಸ್ ಸುದ್ದಿ .
ಬಳ್ಳಾರಿ : ಜಾತಕ ಪಕ್ಷಿಯಂತೆ ಕಾದು ಕುಳಿತಿದ್ದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳಿಗೆ ಇದೀಗ ಸಂತಸದ ಸುದ್ದಿ ಲಭಿಸಿದೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಸಬ್ಜೆಕ್ಟ್ ಗಳ ಪರೀಕ್ಷೆಗಳನ್ನು ಬರೆಯಲು ಎದುರು ನೋಡುತ್ತಿದ್ದ ಅಭ್ಯರ್ಥಿಗಳಿಗಾಗಿ ವಿಶ್ವವಿದ್ಯಾಲಯವು ಅಧಿಕೃತವಾಗಿ ‘ಗೋಲ್ಡನ್ ಚಾನ್ಸ್’ ಪರೀಕ್ಷಾ ಅವಕಾಶವನ್ನು ಕಲ್ಪಿಸಿದೆ. ಈ ಕುರಿತಾದ ವೇಳಾಪಟ್ಟಿ ಮತ್ತು ಮಾರ್ಗಸೂಚಿಗಳನ್ನು ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗವು ಪ್ರಕಟಿಸಿದ್ದು, ವಿದ್ಯಾರ್ಥಿಗಳಲ್ಲಿ ಹೊಸ ಭರವಸೆ ಮೂಡಿದೆ.
ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಪದವಿ ಕಾಲೇಜುಗಳಲ್ಲಿ ಶಿಕ್ಷಣ ಪಡೆದು, ವಿವಿಧ ಕಾರಣಗಳಿಂದ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ವಿಶೇಷ ಅವಕಾಶ ಒದಗಿಸಲಾಗಿದೆ. ಈಗಾಗಲೇ ಪರೀಕ್ಷಾ ಶುಲ್ಕವನ್ನು ಪಾವತಿಸಿರುವ ವಿದ್ಯಾರ್ಥಿಗಳಿಗೆ, ಪರೀಕ್ಷಾ ದಿನಾಂಕಗಳನ್ನು ಜುಲೈ 27.07.2026 ರಿಂದ 12 ಎಂಟು 2026 ರವರೆಗೆ ಇದರೊಳಗೆ ಹಾಲ್ ಟಿಕೆಟ್ ವಿತರಿಸಲಾಗುವ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ತಿಳಿಸಿದೆ.
ಇನ್ನೂ ಪರೀಕ್ಷಾ ಶುಲ್ಕ ಪಾವತಿಸದ ವಿದ್ಯಾರ್ಥಿಗಳು ತಡಮಾಡದೆ, ಕೂಡಲೇ ತಮ್ಮ ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರನ್ನು ಸಂಪರ್ಕಿಸಬೇಕು. ಪ್ರಾಂಶುಪಾಲರ ಕಚೇರಿಗೆ ಭೇಟಿ ನೀಡಿ, ವಿಷಯವಾರು ನಿಗದಿತ ಶುಲ್ಕವನ್ನು ಪಾವತಿಸುವ ಮೂಲಕ ಗೋಲ್ಡನ್ ಚಾನ್ಸ್ ಪರೀಕ್ಷೆಗೆ ನೋಂದಾಯಿಸಿಕೊಳ್ಳಬೇಕು ಎಂದು ವಿಶ್ವವಿದ್ಯಾಲಯವು ಸೂಚನೆ ನೀಡಿದೆ. ಈ ಪ್ರಕ್ರಿಯೆಯು ಅಂತಿಮ ಗಡುವಿನೊಳಗೆ ಪೂರ್ಣಗೊಳ್ಳುವುದು ಅವಶ್ಯಕವಾಗಿದೆ.
2017 ರಿಂದ ಈವರೆಗೂ ಗೋಲ್ಡನ್ ಚಾನ್ಸ್ ಅವಕಾಶ ಇಲ್ಲದೆ ಅನೇಕ ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸಲಾಗದೆ ಸಂಕಷ್ಟದಲ್ಲಿದ್ದರು. ಈ ಕುರಿತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಸಂಘವು ನಿರಂತರವಾಗಿ ರಾಜ್ಯ ಸರ್ಕಾರ, ಉನ್ನತ ಶಿಕ್ಷಣ ಇಲಾಖೆ ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಮನವಿ ಸಲ್ಲಿಸಿತ್ತು. ಪ್ರಾಧ್ಯಾಪಕರ ಸಂಘದ ಈ ಹೋರಾಟದ ಫಲವಾಗಿ, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಅವಕಾಶವನ್ನು ಒದಗಿಸಲಾಗಿದೆ.
ಈ ವಿಶೇಷ ಅವಕಾಶವನ್ನು ಕಲ್ಪಿಸಿರುವ ಕುಲಪತಿಗಳು ಹಾಗೂ ಪರೀಕ್ಷಾ ವಿಭಾಗದ ರಿಜಿಸ್ಟ್ರಾರ್ಗಳ ಕ್ರಮವನ್ನು ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಸಂಘದ ಅಧ್ಯಕ್ಷ ಡಾ. ಕರಿ ಗೂಳಿ ಅವರನ್ನು ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳು
ಈ ಸುವರ್ಣಾವಕಾಶವನ್ನು ಸಮರ್ಥವಾಗಿ ಬಳಸಿಕೊಂಡು, ಕಠಿಣ ಪರಿಶ್ರಮದ ಮೂಲಕ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ತಮ್ಮ ಪದವಿಯನ್ನು ಪೂರ್ಣಗೊಳಿಸಿಕೊಳ್ಳಬೇಕೆಂದು ಕೋರಲಾಗಿದೆ.