ಮರ್ಚೆಡ್ ಡೇಸ್ ಸುದ್ದಿ.
ರಾಯಚೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮೀ’ ಯೋಜನೆಯಡಿ, 2026-27ನೇ ಸಾಲಿನ 31ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು, ಜಿಲ್ಲೆಯ ಒಟ್ಟು 4,35,750 ಅರ್ಹ ಫಲಾನುಭವಿಗಳಿಗೆ ತಲಾ 2,000 ರೂಪಾಯಿಯಂತೆ ಒಟ್ಟು 87,15,00,000 (ಎಂಭತ್ತೇಳು ಕೋಟಿ ಹದಿನೈದು ಲಕ್ಷ) ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಅನುದಾನವು ರಾಯಚೂರಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮೂಲಕ ನೇರ ನಗದು ವರ್ಗಾವಣೆ (DBT) ಪದ್ಧತಿಯಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿದೆ. ಸರ್ಕಾರವು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಗೃಹಲಕ್ಷ್ಮೀ ಯೋಜನೆಯಡಿ ಸಕಾಲದಲ್ಲಿ ಹಣ ಪಾವತಿಸುವ ಮೂಲಕ ಕುಟುಂಬಗಳ ಆರ್ಥಿಕ ಹೊರೆಯನ್ನು ತಗ್ಗಿಸಲು ಬದ್ಧವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.