Home ಸುದ್ದಿ ನೆರೆಯ ರಾಜ್ಯದಲ್ಲಿ ಋತುಮಾನದ ಪ್ಲೂ ಭೀತಿ: ರಾಯಚೂರು ಗಡಿಯಲ್ಲಿ ಹೈ ಅಲರ್ಟ್.
ಸುದ್ದಿ

ನೆರೆಯ ರಾಜ್ಯದಲ್ಲಿ ಋತುಮಾನದ ಪ್ಲೂ ಭೀತಿ: ರಾಯಚೂರು ಗಡಿಯಲ್ಲಿ ಹೈ ಅಲರ್ಟ್.

Share
Share

 

ಮರ್ಚೆಡ್ ಡೇಸ್ ಸುದ್ದಿ.
ರಾಯಚೂರು: ನೆರೆಯ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಋತುಮಾನದ ಪ್ಲೂ (ಕೋವಿಡ್ ಮಾದರಿಯ ಲಕ್ಷಣಗಳು) ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ರಾಯಚೂರು ಜಿಲ್ಲೆಯ ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಭಾರತ ಸರ್ಕಾರದ ಮಾರ್ಗಸೂಚಿ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ಗಿಲ್ಲೆಸೂಗುರು, ಗಾಣದಾಳ, ಇಡಪನೂರು, ಯಾಪಲದಿನ್ನಿ ಹಾಗೂ ಚಂದ್ರಬಂಡಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾರಿ (SARI) ಮತ್ತು ಐಎಲ್‌ಐ (ILI) ಲಕ್ಷಣಗಳಿರುವವರನ್ನು ಪತ್ತೆ ಹಚ್ಚಿ ಪರೀಕ್ಷಿಸಲು ವೈದ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಂದಿತಾ ಎಮ್.ಎನ್. ತಿಳಿಸಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲವಾದ್ದರಿಂದ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಡಾ. ನಂದಿತಾ ಸ್ಪಷ್ಟಪಡಿಸಿದ್ದಾರೆ. ಪ್ರವಾಸಿಗರು ಹೆಚ್ಚಾಗಿ ಭೇಟಿ ನೀಡುವ ಸ್ಥಳಗಳಲ್ಲಿ ಸೂಕ್ತ ತಪಾಸಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಯಾರಿಗಾದರೂ ಜ್ವರ, ಕೆಮ್ಮು, ಗಂಟಲು ನೋವು ಅಥವಾ ಉಸಿರಾಟದ ತೊಂದರೆಯಂತಹ ಲಕ್ಷಣಗಳು ಕಂಡುಬಂದಲ್ಲಿ, ತಡಮಾಡದೆ ತಕ್ಷಣವೇ ಸಮೀಪದ ವೈದ್ಯರನ್ನು ಸಂಪರ್ಕಿಸಿ ಪರೀಕ್ಷಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ರೋಗ ಹರಡದಂತೆ ತಡೆಗಟ್ಟಲು ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆ ಮತ್ತು ಜಾಗೃತಿಯನ್ನು ಪಾಲಿಸಬೇಕಿದೆ. ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗನ್ನು ಕಡ್ಡಾಯವಾಗಿ ಮುಚ್ಚಿಕೊಳ್ಳಬೇಕು, ಸಾಬೂನು ಅಥವಾ ಸ್ಯಾನಿಟೈಜರ್ ಬಳಸಿ ಕೈಗಳನ್ನು ಆಗಾಗ ಸ್ವಚ್ಛಗೊಳಿಸಿಕೊಳ್ಳಬೇಕು. ಅಲ್ಲದೆ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಶುದ್ಧ ಕುಡಿಯುವ ನೀರು ಹಾಗೂ ಪೌಷ್ಟಿಕ ಆಹಾರವನ್ನು ಸೇವಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಜಿಲ್ಲಾಡಳಿತವು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅಗತ್ಯವಿದ್ದಲ್ಲಿ ಐಸೋಲೇಶನ್ ವಾರ್ಡ್‌ಗಳನ್ನು ತೆರೆಯಲು ಮತ್ತು ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...