Home ಸುದ್ದಿ ಕೆರೇಹಳ್ಳಿಯಲ್ಲಿ ಯಶಸ್ವಿಯಾಗಿ ಜರುಗಿದ ಜಾನುವಾರುಗಳ ಗಂಟಲು ಬೇನೆ ಲಸಿಕಾ ಕಾರ್ಯಕ್ರಮ ಹಾಗೂ ಆರೋಗ್ಯ ತಪಾಸಣಾ ಶಿಬಿರ.
ಸುದ್ದಿ

ಕೆರೇಹಳ್ಳಿಯಲ್ಲಿ ಯಶಸ್ವಿಯಾಗಿ ಜರುಗಿದ ಜಾನುವಾರುಗಳ ಗಂಟಲು ಬೇನೆ ಲಸಿಕಾ ಕಾರ್ಯಕ್ರಮ ಹಾಗೂ ಆರೋಗ್ಯ ತಪಾಸಣಾ ಶಿಬಿರ.

Share
Share

 

ಮರ್ಚೆಡ್ ಡೇಸ್ ಸುದ್ದಿ|ಕೊಪ್ಪಳ

ಗಂಗಾವತಿ, ಜು.20: ಕೃಷಿ ಮಹಾವಿದ್ಯಾಲಯ, ಗಂಗಾವತಿ ವತಿಯಿಂದ ಗ್ರಾಮೀಣ ಕೃಷಿ ಕಾರ್ಯಾನುಭವ (RAWE) ಶಿಬಿರದ ಅಂಗವಾಗಿ ಕೆರೇಹಳ್ಳಿ ಗ್ರಾಮದಲ್ಲಿ ಜಾನುವಾರುಗಳಿಗೆ ಗಂಟಲು ಬೇನೆ (HS) ಲಸಿಕಾ ಕಾರ್ಯಕ್ರಮ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು.

ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕೊಪ್ಪಳ ಹಾಗೂ ಹಿಟ್ನಾಳ ಪಶು ಚಿಕಿತ್ಸಾಲಯದ ಸಹಯೋಗದಲ್ಲಿ ಜರುಗಿದ ಈ ಶಿಬಿರದಲ್ಲಿ ಮಾತನಾಡಿದ ಪಶುವೈದ್ಯರಾದ ಡಾ. ವಿನಯ್ ಅಂಗಡಿ, ರೈತರ ಜೀವನಾಡಿಯಾದ ಜಾನುವಾರುಗಳ ಬಗ್ಗೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರುವುದು ಸೂಕ್ತವಲ್ಲ. ಜಾನುವಾರುಗಳ ಆಹಾರ, ಶುದ್ಧ ಕುಡಿಯುವ ನೀರು ಮತ್ತು ಗುಣಮಟ್ಟದ ಕಡೆಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಶಿಬಿರದ ಸಂದರ್ಭದಲ್ಲಿ ಪಶುವೈದ್ಯಕೀಯ ಸಿಬ್ಬಂದಿಗಳಾದ ಶಂಕ್ರಪ್ಪ ದಳವಾಯಿ, ರಾಜೇಶ್ ಹಾಗೂ ಲೋಕೇಶ್ ಡಿ. ಅವರು ಗ್ರಾಮದ ಜಾನುವಾರುಗಳಿಗೆ ಗಂಟಲು ಬೇನೆ ರೋಗದ ವಿರುದ್ಧ ಲಸಿಕೆ ನೀಡಿ, ಸಮಗ್ರ ಆರೋಗ್ಯ ತಪಾಸಣೆ ನಡೆಸಿದರು. ಅಲ್ಲದೆ, ರೈತರಿಗೆ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ, ಲಸಿಕೆಗಳ ಮಹತ್ವ ಹಾಗೂ ವೈಜ್ಞಾನಿಕ ಪಶುಪಾಲನಾ ಪದ್ಧತಿಗಳ ಕುರಿತು ಉಪಯುಕ್ತ ಮಾಹಿತಿ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಕೃಷಿ ಮಹಾವಿದ್ಯಾಲಯದ RAWE ಆಯೋಜಕರಾದ ಡಾ. ಎಂ.ವಿ. ರವಿ, ಸಹ-ಆಯೋಜಕರಾದ ಡಾ. ವಾಸುದೇವ ನಾಯಕ್, ಸಹಾಯಕ ಪ್ರಾಧ್ಯಾಪಕರಾದ ಡಾ. ಮಹಾಂತೇಶ್ ಎಂ.ಟಿ. ಹಾಗೂ ಡಾ. ಸಾಹೇಬ್ ಗೌಡ, RAWE ವಿದ್ಯಾರ್ಥಿಗಳು ಹಾಗೂ ಗ್ರಾಮದ ನೂರಾರು ರೈತರು ಭಾಗವಹಿಸಿ ಶಿಬಿರದ ಯಶಸ್ಸಿಗೆ ಕೈಜೋಡಿಸಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...