Home ಸುದ್ದಿ ​ಶಿಕ್ಷಣದೊಂದಿಗೆ ಯಶಸ್ಸಿನ ಮಂತ್ರ: ಬೇತಲ್ ಸಮೂಹ ಸಂಸ್ಥೆಯಲ್ಲಿ ಸ್ಫೂರ್ತಿಯ ಹೊನಲು!
ಸುದ್ದಿ

​ಶಿಕ್ಷಣದೊಂದಿಗೆ ಯಶಸ್ಸಿನ ಮಂತ್ರ: ಬೇತಲ್ ಸಮೂಹ ಸಂಸ್ಥೆಯಲ್ಲಿ ಸ್ಫೂರ್ತಿಯ ಹೊನಲು!

Share
Share

 

ಮರ್ಚೆಡ್ ಡೇಸ್ ಸುದ್ದಿ.|ಗಂಗಾವತಿ.

“ಸತ್ಯಮೇವ ಜಯತೇ” ಸಂದೇಶದೊಂದಿಗೆ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾರ್ಗದರ್ಶನ;

ಗಂಗಾವತಿ :- ಬೇತಲ್ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ಸಹಯೋಗದಲ್ಲಿ 2026–27ನೇ ಶೈಕ್ಷಣಿಕ ವರ್ಷದ ಅಂಗವಾಗಿ ಮಂಗಳವಾರ ಅಭಿಪ್ರೇರಣಾತ್ಮಕ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಜೀವನದ ಬಗ್ಗೆ ಸ್ಪೂರ್ತಿದಾಯಕ ಸಂದೇಶಗಳನ್ನು ನೀಡಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿಕಾಸ್ ಅಕಾಡೆಮಿಯ ಅಧ್ಯಕ್ಷರಾದ  ಬಸವರಾಜ್ ಪಾಟೀಲ್ ಸೇಡಂ ಅವರು ಆಗಮಿಸಿ ಮಾತನಾಡಿದರು. “ಸತ್ಯಮೇವ ಜಯತೇ” ಎಂಬ ತತ್ವವು ಕೇವಲ ಘೋಷವಾಕ್ಯವಲ್ಲ, ಅದು ಜೀವನದ ದಿಕ್ಕು ತೋರಿಸುವ ದೀಪವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯು ಇದನ್ನು ತನ್ನ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ಕೇವಲ ಶಕ್ತಿ ಸಾಲದು. ಯುಕ್ತಿ ಮತ್ತು ವಿವೇಕವೇ ವ್ಯಕ್ತಿಯನ್ನು ಉನ್ನತಿಗೆ ಕೊಂಡೊಯ್ಯುತ್ತವೆ ಎಂದು ತಿಳಿಸುತ್ತಾ . ದಧೀಚಿ ಮಹರ್ಷಿಯ ತ್ಯಾಗ ಮತ್ತು ಧೈರ್ಯದ ಪೌರಾಣಿಕ ಉದಾಹರಣೆಯನ್ನು ನೀಡುತ್ತಾ, ಗುರಿ ಸಾಧನೆಗೆ ನಿಷ್ಠೆ, ಪರಿಶ್ರಮ ಮತ್ತು ಸದ್ಗುಣಗಳ ಅಗತ್ಯವನ್ನು ಮನದಟ್ಟು ಮಾಡಿದರು.

ಇನ್ನೋರ್ವ ಅತಿಥಿಯಾದ ಆಂಗ್ಲ ಉಪನ್ಯಾಸಕರಾದ ಎ.ಕೆ. ಮಹೇಶ್ ಕುಮಾರ್ ಅವರು ಮಾತನಾಡಿ, ಪುಣ್ಯಕೋಟಿಯ ಗೀತೆಯನ್ನು ಉಲ್ಲೇಖಿಸಿ “ಸತ್ಯವೇ ನಮ್ಮ ತಾಯಿ-ತಂದೆ, ಸತ್ಯವೇ ನಮ್ಮ ಬಂಧು-ಬಳಗ” ಎಂದು ಹೇಳಿದರು. ಸತ್ಯ ಮತ್ತು ಪ್ರಾಮಾಣಿಕತೆ ಎಂಬ ಮೌಲ್ಯಗಳು ವ್ಯಕ್ತಿಯ ವ್ಯಕ್ತಿತ್ವವನ್ನು ಕಟ್ಟಿಕೊಡುತ್ತವೆ.. ಎಂದು ಅಭಿಪ್ರಾಯಪಟ್ಟ. ಅವರು, ವಿದ್ಯಾರ್ಥಿಗಳು ಶಿಸ್ತಿನೊಂದಿಗೆ ಅಧ್ಯಯನ ಮಾಡಿ ಸಮಾಜದ ಉತ್ತಮ ನಾಗರಿಕರಾಗಿ ಹೊರಹೊಮ್ಮಬೇಕು ಎಂದು ಕರೆ ನೀಡಿದರು. ದೇಶದ ಸಮಗ್ರ ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ತಮ್ಮ ಹೊಣೆಗಾರಿಕೆಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದರು.

ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ವೀರೇಶ್ ಮ್ಯಾಗೇರಿ ಅವರು ನೀಡಿದರು. ಮುಖ್ಯ ಅತಿಥಿಗಳ ಪರಿಚಯವನ್ನು ಮಾಡಿಕೊಟ್ಟು, ವಿಕಾಸ್ ಅಕಾಡೆಮಿಯು ಶಿಕ್ಷಣ ಹಾಗೂ ಉದ್ಯೋಗೋನ್ಮುಖ ಕ್ಷೇತ್ರಗಳಲ್ಲಿ ಸಾಧಿಸಿರುವ ಪ್ರಗತಿ ಮತ್ತು ಸಾಧನೆಗಳನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಶಿಕ್ಷಕ-ಉಪನ್ಯಾಸಕರ ವೃಂದ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳು, ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಮೌಲ್ಯಪೂರ್ಣ ಸಂದೇಶಗಳನ್ನು ನೀಡುವ ಮೂಲಕ ಯಶಸ್ವಿಯಾಗಿ ನೆರವೇರಿತು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...