Home ಸುದ್ದಿ ನಕಲಿ ವೈದ್ಯರು ಹಾಗೂ ಅನಧಿಕೃತ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿಗಳ ಸೂಚನೆ.
ಸುದ್ದಿ

ನಕಲಿ ವೈದ್ಯರು ಹಾಗೂ ಅನಧಿಕೃತ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿಗಳ ಸೂಚನೆ.

Share
Share

ಮರ್ಚೆಡ್ ಡೇಸ್ ಸುದ್ದಿ|ರಾಯಚೂರು.

ರಾಯಚೂರು : ಜಿಲ್ಲೆಯಲ್ಲಿ ಕೆಪಿಎಮ್‌ಇ ಕಾಯ್ದೆಯಡಿ ನೋಂದಾಯಿಸದ, ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ನಕಲಿ ವೈದ್ಯರು, ಆಸ್ಪತ್ರೆಗಳು ಮತ್ತು ವ್ಯಸನ ಮುಕ್ತಿ ಕೇಂದ್ರಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೆಪಿಎಮ್‌ಇ ಕಾಯ್ದೆ ಅನುಷ್ಠಾನ ಹಾಗೂ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವೈದ್ಯಕೀಯ ಪದವಿ ಪಡೆಯದೆ ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿರುವ ನಕಲಿ ವೈದ್ಯರ ಬಗ್ಗೆ ನಿಗಾ ಇಟ್ಟು, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಯಾವುದೇ ವೈದ್ಯಕೀಯ ಪದವಿ ಪಡೆದು ಆಸ್ಪತ್ರೆ ಆರಂಭಿಸುವ ಮುನ್ನ ಕೆಪಿಎಮ್‌ಇ ಕಾಯ್ದೆ-2007ರಡಿ ಕಡ್ಡಾಯವಾಗಿ ನೋಂದಣಿ ಮಾಡಿಸುವುದು ಹಾಗೂ ಅಲೋಪತಿ ಅಥವಾ ಆಯುಷ್ ವೈದ್ಯರು ತಮ್ಮ ನಿಗದಿತ ಪದ್ಧತಿಯಲ್ಲಿ ಮಾತ್ರ ಚಿಕಿತ್ಸೆ ನೀಡುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.

ಮೆಡಿಕಲ್ ಅಂಗಡಿಗಳ ಒಳಭಾಗ ಅಥವಾ ಪಕ್ಕದಲ್ಲಿ ಅನಧಿಕೃತವಾಗಿ ಕ್ಲಿನಿಕ್‌ಗಳನ್ನು ತೆರೆದಿರುವವರ ವಿರುದ್ಧವೂ ತನಿಖೆ ನಡೆಸಿ ಕ್ರಮವಹಿಸಲು ಸಹಾಯಕ ಔಷಧ ನಿಯಂತ್ರಕರಿಗೆ ಸೂಚಿಸಲಾಗಿದೆ. ಅಲ್ಲದೆ, ಪ್ರಯೋಗಾಲಯಗಳ ಪ್ರತಿ ವರದಿಯು ಕಡ್ಡಾಯವಾಗಿ ಪೇಥಾಲಜಿಸ್ಟ್ ಅಥವಾ ಆಸ್ಪತ್ರೆಯ ಮುಖ್ಯ ವೈದ್ಯರಿಂದ ದೃಢೀಕರಿಸಲ್ಪಟ್ಟಿರಬೇಕು ಹಾಗೂ ವೈದ್ಯರ ಸರಿಯಾದ ಚೀಟಿ ಇದ್ದರೆ ಮಾತ್ರ ಸಾರ್ವಜನಿಕರಿಗೆ ಔಷಧಿಗಳನ್ನು, ಅದರಲ್ಲೂ ವಿಶೇಷವಾಗಿ ಗರ್ಭಪಾತ ಸಂಬಂಧಿತ ಔಷಧಿಗಳನ್ನು ವಿತರಿಸಬೇಕು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆ ಹಾಗೂ ವೈದ್ಯ ವೃತ್ತಿಯ ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ಕಳೆದ 6 ತಿಂಗಳ ಅವಧಿಯಲ್ಲಿ ಒಟ್ಟು 20 ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಂಡು ಕ್ಲಿನಿಕ್‌ಗಳನ್ನು ಮುಚ್ಚಿಸುವುದರ ಜೊತೆಗೆ ಒಟ್ಟು 2 ಲಕ್ಷದ 20 ಸಾವಿರ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಂದಿತಾ ಎಮ್.ಎನ್. ಸಭೆಗೆ ಮಾಹಿತಿ ನೀಡಿದರು.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...