Home ಸುದ್ದಿ ಕೇಂದ್ರ ಸರ್ಕಾರ ಮಣಿಸಿದ ವಿದ್ಯಾರ್ಥಿ ಶಕ್ತಿ: ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – ವಿದ್ಯಾರ್ಥಿ ಲೋಕಕ್ಕೆ ಮೊದಲ ಹಂತದ ಐತಿಹಾಸಿಕ ಜಯ.
ಸುದ್ದಿ

ಕೇಂದ್ರ ಸರ್ಕಾರ ಮಣಿಸಿದ ವಿದ್ಯಾರ್ಥಿ ಶಕ್ತಿ: ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – ವಿದ್ಯಾರ್ಥಿ ಲೋಕಕ್ಕೆ ಮೊದಲ ಹಂತದ ಐತಿಹಾಸಿಕ ಜಯ.

Share
Share
ಮರ್ಚೆಡ್ ಡೇಸ್ ಸುದ್ದಿ|ನವ ದೆಹಲಿ.

ನವ ದೆಹಲಿ: ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ ಜಂತರ್ ಮಂತರ್ (Jantar Mantar) ರಂಗಸ್ಥಳವು ಇಂದು ಮತ್ತೊಮ್ಮೆ ಲಕ್ಷಾಂತರ ವಿದ್ಯಾರ್ಥಿಗಳ ಮಹಾಸಂಗ್ರಾಮಕ್ಕೆ ಸಾಕ್ಷಿಯಾಗಿದೆ. ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಉಂಟಾಗಿರುವ ಭೀಕರ ವೈಫಲ್ಯಗಳು, ಸತತ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಗಳು ಮತ್ತು ಶಿಕ್ಷಣ ಕ್ಷೇತ್ರದ ಸಂಪೂರ್ಣ ಕಾವೀಕರಣದ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿರುವ ಐತಿಹಾಸಿಕ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಆಡಳಿತರೂಢ ಸರ್ಕಾರದ ಮಣಿದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದು ಮೊದಲ ಹಂತದ ಜಯ ವಿದ್ಯಾರ್ಥಿಗಳು ಮತ್ತು ಯುವಜನ ನಾಯಕರು ಏಕಕಂಠದಿಂದ ಆಗ್ರಹಿಸಿದ್ದಾರೆ ಯುವ ಜನತೆಗೆ ಸಂದ ಜಯ.

ಕಳೆದ ಕೆಲವು ದಿನಗಳಿಂದ ದೇಶದ ಮೂಲೆ ಮೂಲೆಗಳಿಂದ ದೆಹಲಿಗೆ ಆಗಮಿಸುತ್ತಿರುವ ಸಹಸ್ರಾರು ವಿದ್ಯಾರ್ಥಿಗಳು, ಸಂಶೋಧನಾ ವಿದ್ವಾಂಸರು ಹಾಗೂ ಯುವ ಜನತಪಸ್ವಿಗಳು ಜಂತರ್ ಮಂತರ್‌ನಲ್ಲಿ ಜಮಾಯಿಸಿ ಕೇಂದ್ರ ಸರ್ಕಾರದ ದಮನಕಾರಿ ನೀತಿಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ.

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ, ನೀಡಿದ್ದಾರೆ ಪರೀಕ್ಷಾ ವ್ಯವಸ್ಥೆಯ ಸರ್ವತೋಮುಖ ಸುಧಾರಣೆ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಸ್ವಾಯತ್ತತೆಯ ಹರಣದ ವಿರುದ್ಧ ಉಗ್ರ ಪ್ರತಿಭಟನೆ ಮುಂದುವರಿದಿದೆ.

ಪ್ರತಿಭಟನಾಕಾರರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ದೆಹಲಿ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ರಾಷ್ಟ್ರಮಟ್ಟದ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸತತವಾಗಿ ಸೋರಿಕೆಯಾಗುತ್ತಿರುವುದು ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ನೂಕಿದೆ. ಇದಕ್ಕೆ ನೇರ ಹೊಣೆ ಹೊತ್ತು ಸಚಿವರು ಪದತ್ಯಾಗ ಮಾಡಬೇಕು ಎಂಬುದು ಪ್ರಮುಖ ಒತ್ತಾಯವಾಗಿದೆ.

ಉನ್ನತ ಶಿಕ್ಷಣವನ್ನು ರಾಜಕೀಯ ಅಜೆಂಡಾಗಳಿಗೆ ಬಳಸುವುದು ಹಾಗೂ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಎಟುಕದಂತೆ ಮಾಡುತ್ತಿರುವ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಪದವಿ ಪಡೆದರೂ ಉದ್ಯೋಗವಿಲ್ಲದೆ ಪರದಾಡುತ್ತಿರುವ ಯುವ ಸಮೂಹದ ನೋವಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ಆಪಾದನೆ ಕೇಳಿಬಂದಿದೆ.

ಇದು ಕೇವಲ ಒಬ್ಬ ಸಚಿವರ ರಾಜೀನಾಮೆಯ ಪ್ರಶ್ನೆಯಲ್ಲ; ಇದು ದೇಶದ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ. ನಮ್ಮ ಶೈಕ್ಷಣಿಕ ಹಕ್ಕುಗಳನ್ನು ಕಸಿಯಲು ಹೊರಟಿರುವವರ ವಿರುದ್ಧದ ಈ ಧ್ವನಿ ಎಂದಿಗೂ ನಿಲ್ಲುವುದಿಲ್ಲ. ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ಉಗ್ರ ಸ್ವರೂಪದ ಹೋರಾಟವನ್ನು ದೇಶಾದ್ಯಂತ ವಿಸ್ತರಿಸಲಾಗುವುದು.”* ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿ ಮುಖಂಡರು ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನಾಕಾರರ ಈ ಬೃಹತ್ ಜಾಗೃತಿ ಮತ್ತು ಒಗ್ಗಟ್ಟು ಕೇಂದ್ರ ಸರ್ಕಾರದ ಮೇಲೆ ತೀವ್ರ ರಾಜಕೀಯ ಒತ್ತಡವನ್ನು ಸೃಷ್ಟಿಸಿದ್ದು, ಮುಂಬರುವ ದಿನಗಳಲ್ಲಿ ಈ ಹೋರಾಟ ಯಾವ ದಿಕ್ಕನ್ನು ಪಡೆಯಲಿದೆ ಎಂಬುದು ದೇಶದಾದ್ಯಂತ ಕುತೂಹಲ ಮೂಡಿಸಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...