
ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.
ಗಂಗಾವತಿ : ಇಂದು ದಿನಾಂಕ 24/07/2026 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸವನದುರ್ಗದಲ್ಲಿ ಪ್ರಗತಿ ಚಾರಿಟಬಲ್ ಟ್ರಸ್ಟ್ (ರಿ) ಬೆಂಗಳೂರು. ವತಿಯಿಂದ ಶಾಲಾ ಮಕ್ಕಳಿಗೆ ಟ್ರ್ಯಾಕ್ ಸೂಟ್ ಸಮವಸ್ತ್ರ ದೇಣಿಗೆ ನೀಡುವ ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆ ರಾಮದುರ್ಗ ಗೂಗಿಬಂಡಿಯ ಅಧ್ಯಕ್ಷರಾದ ಮುನೇಶ್ ಜೋಗಲ್ ಕಾಸ್ಟಿ. ಅವರು ಖುದ್ದಾಗಿ ಶಾಲೆಗೆ ಆಗಮಿಸಿ ಮಕ್ಕಳಿಗೆ ಸಮವಸ್ತ್ರಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳು ಉಳಿಯಬೇಕು ಹಾಗೂ ಬಡತನ ನಿರ್ಮೂಲನೆಯಾಗಬೇಕಾದರೆ ಗುಣಾತ್ಮಕ ಶಿಕ್ಷಣ ಒಂದೇ ಪ್ರಮುಖ ಆಧಾರವಾಗಿದೆ ಎಂದು ತಿಳಿಸಿದರು. ಯಾವ ಮಕ್ಕಳೂ ಶಾಲೆ ಬಿಡದೆ ಚೆನ್ನಾಗಿ ಅಭ್ಯಾಸ ಮಾಡಿ, ಭವಿಷ್ಯದಲ್ಲಿ ಉನ್ನತ ಮಟ್ಟಕ್ಕೇರಿ ಸಮಾಜಕ್ಕೆ ಕೈಲಾದಷ್ಟು ಸಹಾಯ ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೆಚ್. ಬಿ. ನಟೇಶ್ ಅವರು ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀಮತಿ ಶರಣಮ್ಮ ಮಂಜುನಾಥ್. ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷರಾದ ಡಾ. ವೆಂಕಟೇಶ್ ಬಾಬು ಹಾಗೂ ರೈತ ಮುಖಂಡರಾದ ಶ್ರೀನಿವಾಸ ರೆಡ್ಡಿ ಬಸವನದುರ್ಗ ಹಾಗೂ
ಈ ಸಮಾರಂಭದಲ್ಲಿ ಎಸ್.ಡಿ.ಎಂ.ಸಿ. ಸದಸ್ಯರಾದ ಮಂಜುನಾಥ ಜಂಗರ, ಅಂಬ್ರೇಶ, ಭೀಮಪ್ಪ, ಸುರೇಶ, ಊರಿನ ಗುರುಹಿರಿಯರು ಮತ್ತು ಯುವ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ದೇವೇಂದ್ರ, ಗೌರವಾಧ್ಯಕ್ಷರಾದ ಹನುಮಂತಪ್ಪ ನಾಯಕ್, ಬಸವನದುರ್ಗ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ ಅವರು ಹಾಜರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.