Home ಸುದ್ದಿ ಬಳ್ಳಾರಿಯಲ್ಲಿ ಪತ್ರಿಕಾ ದಿನಾಚರಣೆ: ಡಿಜಿಟಲ್ ಯುಗದಲ್ಲೂ ಮುದ್ರಣ ಮಾಧ್ಯಮದ ವಿಶ್ವಾಸಾರ್ಹತೆ ಅಚಲ – ಕೆ. ನಿಂಗಜ್ಜ.
ಸುದ್ದಿ

ಬಳ್ಳಾರಿಯಲ್ಲಿ ಪತ್ರಿಕಾ ದಿನಾಚರಣೆ: ಡಿಜಿಟಲ್ ಯುಗದಲ್ಲೂ ಮುದ್ರಣ ಮಾಧ್ಯಮದ ವಿಶ್ವಾಸಾರ್ಹತೆ ಅಚಲ – ಕೆ. ನಿಂಗಜ್ಜ.

Share
Share

ಮರ್ಚೆಡ್ ಡೇಸ್ ಸುದ್ದಿ|ಬಳ್ಳಾರಿ.

ಬಳ್ಳಾರಿ: ಡಿಜಿಟಲ್ ಯುಗದಲ್ಲಿ ಸುದ್ದಿಗಳನ್ನು ನೀಡುವ ಭರಾಟೆಯಲ್ಲಿ ಸ್ಪರ್ಧೆ ಏರ್ಪಟ್ಟಿದ್ದರೂ, ಓದುಗರು ಇಂದಿಗೂ ಮುದ್ರಣ ಮಾಧ್ಯಮದ ಮೇಲೆ ಹೆಚ್ಚಿನ ವಿಶ್ವಾಸವನ್ನಿರಿಸಿದ್ದಾರೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಕೆ. ನಿಂಗಜ್ಜ ತಿಳಿಸಿದ್ದಾರೆ. ನಗರದ ಗಾಂಧಿ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ’ ಸಮಾರಂಭದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಕನ್ನಡ ಪತ್ರಿಕೋದ್ಯಮವು ‘ಮಂಗಳೂರು ಸಮಾಚಾರ’ದ ಮೂಲಕ ಆರಂಭವಾಗಿ 183 ವರ್ಷಗಳನ್ನು ಪೂರೈಸಿದ್ದು, ವಿಶ್ವದಲ್ಲೇ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ ಅವರು, ಪತ್ರಕರ್ತರು ಅನಿಶ್ಚಿತತೆ ಮತ್ತು ಸೇವಾ ಭದ್ರತೆಯ ಕೊರತೆಯ ನಡುವೆಯೂ ಜನಸಾಮಾನ್ಯರ ಹಾಗೂ ಸರ್ಕಾರದ ನಡುವೆ ಸೇತುವೆಯಾಗಿ ಶ್ರಮಿಸುತ್ತಿದ್ದಾರೆ ಎಂದರು. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿಯವರ ಪತ್ರಿಕೋದ್ಯಮದ ಆದರ್ಶಗಳನ್ನು ಸ್ಮರಿಸಿದ ಅವರು, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ಅನುಗುಣವಾಗಿ ವರದಿಗಾರಿಕೆ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಳ್ಳಾರಿ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್, ಪತ್ರಕರ್ತರು ಸಮಾಜದ ಕಣ್ಣುಗಳಿದ್ದಂತೆ ಎಂದು ಬಣ್ಣಿಸಿದರು. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ, ಸರ್ಕಾರದ ಗಮನ ಸೆಳೆಯುವ ಮೂಲಕ ಜಿಲ್ಲಾಡಳಿತದೊಂದಿಗೆ ಸಕಾರಾತ್ಮಕವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಸೇವೆ ಶ್ಲಾಘನೀಯ ಎಂದ ಅವರು, ಪತ್ರಕರ್ತರ ಸಂಘಕ್ಕೆ ಸೂಕ್ತ ಸ್ಥಳಾವಕಾಶ ದೊರೆತರೆ ಸಿಎಸ್ಆರ್ ನಿಧಿಯ ಮೂಲಕ ವಾಹನ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪನ್ನೇಕರ್ ಮಾತನಾಡಿ, ಪತ್ರಕರ್ತರು ಮತ್ತು ಪೊಲೀಸ್ ಇಲಾಖೆಗಳು ಒಂದೇ ರೀತಿಯ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿವೆ ಎಂದರು. ಶೋಷಿತರ ಧ್ವನಿಯಾಗಿ ಸಮಾಜವನ್ನು ತಿದ್ದುವ ಪವಿತ್ರ ಜವಾಬ್ದಾರಿ ಪತ್ರಕರ್ತರ ಮೇಲಿದ್ದು, ಇವರ ವೃತ್ತಿಪರತೆ ಮತ್ತು ಕುಟುಂಬದ ಹಿತರಕ್ಷಣೆಗಾಗಿ ಸರ್ಕಾರಗಳು ಹೆಚ್ಚಿನ ಸೌಲಭ್ಯ ಹಾಗೂ ಸೂಕ್ತ ಯೋಜನೆಗಳನ್ನು ರೂಪಿಸಬೇಕಾದ ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎನ್. ವೀರಭದ್ರಗೌಡ, ಜಿಲ್ಲಾ ವಾರ್ತಾಧಿಕಾರಿ ಬಿ.ಎಂ. ತುಕಾರಾಂ ಹಾಗೂ ಕಾರ್ಯದರ್ಶಿ ಬಸವರಾಜ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಸಮಾಜದಲ್ಲಿ ಪತ್ರಿಕಾ ವಿತರಣೆಯಲ್ಲಿ ತೊಡಗಿರುವ ವಿತರಕರನ್ನು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ತೋರಿದ ಪತ್ರಕರ್ತರ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...