Home ಸುದ್ದಿ ಕಾರಟಗಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದ ಸ್ವಾಗತ ಮತ್ತು ಉದ್ಘಾಟನಾ ಸಮಾರಂಭ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ.
ಸುದ್ದಿ

ಕಾರಟಗಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದ ಸ್ವಾಗತ ಮತ್ತು ಉದ್ಘಾಟನಾ ಸಮಾರಂಭ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ.

Share
Share
ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ.

ಕಾರಟಗಿ: ಜುಲೈ 26: ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಹಾಗೂ 2026-27ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ದೈನಂದಿನ ಘಟಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಕಾರಟಗಿ ಜೆ.ಪಿ. ನಗರದ ಪುರಸಭೆ ಸದಸ್ಯರಾದ  ಸೋಮಶೇಖರ್ ಬಿ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾಲೇಜಿನ ಪ್ರಾಚಾರ್ಯರಾದ  ನಾಗರಾಜ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಿದ ತುರಾವಿಹಾಳ ಸರಕಾರಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ  ಚನ್ನಬಸವ ಆಸ್ಪರಿ ಅವರು, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಮತ್ತು ಅದರ ದುಷ್ಪರಿಣಾಮಗಳ ಕುರಿತು ಎಚ್ಚರಿಕೆ ನೀಡಿದರು. ಇಂದಿನ ವಿದ್ಯಾರ್ಥಿಗಳಿಗೆ ಸಂಸ್ಕಾರ ಅತ್ಯಂತ ಮುಖ್ಯವಾಗಿದ್ದು, ಕಾಲಕ್ಕೆ ತಕ್ಕಂತೆ ಬದಲಾವಣೆ ಹೊಂದದಿದ್ದರೆ ಕಾಲವೇ ನಮ್ಮನ್ನು ಹಿಂದೆಹಾಕಿ ಮುಂದೆ ಸಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಯರಡೋಣ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ  ರಾಘವೇಂದ್ರ ಕಂಠಿ ಅವರು, ಪ್ರಥಮ ಹಾಗೂ ದ್ವಿತೀಯ ಪಿಯು ಹಂತದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಜ್ಞಾನ ಸಂಪಾದಿಸುವುದರ ಜೊತೆಗೆ ತಮ್ಮ ಭವಿಷ್ಯದ ನಿರ್ಮಾಣಕ್ಕಾಗಿ ಕಠಿಣ ಶ್ರಮವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಳೆದ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಾಲೇಜಿಗೆ ಕೀರ್ತಿ ತಂದ ಪ್ರತಿಭಾವಂತ ವಿದ್ಯಾರ್ಥಿಗಳಾದ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 577 ಅಂಕ ಪಡೆದ ಶಿವಕುಮಾರ್ (ತಂದೆ: ಯಂಕಪ್ಪ), ಕಲಾ ವಿಭಾಗದಲ್ಲಿ 600ಕ್ಕೆ 571 ಅಂಕ ಪಡೆದ ಶುಭಾಷಿನಿ (ತಂದೆ: ಆಂಜನೇಯ) ಹಾಗೂ ವಿಜ್ಞಾನ ವಿಭಾಗದಲ್ಲಿ 600ಕ್ಕೆ 551 ಅಂಕ ಪಡೆದ ಚಾಮುಂಡಿ (ತಂದೆ: ಪರಶುರಾಮ್) ಅವರನ್ನು ಕಾಲೇಜಿನ ವತಿಯಿಂದ ತಲಾ ರೂ. 1,500/- ನಗದು ಪುರಸ್ಕಾರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಕನ್ನಡ ವಿಷಯದಲ್ಲಿ 100/100 ಅಂಕ ಪಡೆದ ಶಾಂತಮ್ಮ ಅವರಿಗೆ ಪುರಸಭೆ ಸದಸ್ಯರಾದ ಶ್ರೀ ಸೋಮಶೇಖರ್ ಬಿ. ಅವರು ವೈಯಕ್ತಿಕವಾಗಿ ರೂ. 1,000/- ನಗದು ಬಹುಮಾನ ನೀಡಿದರೆ, ವಿಷಯ ಉಪನ್ಯಾಸಕರಾದ ಶ್ರೀಮತಿ ಮಲ್ಲಮ್ಮ ಮತ್ತು  ಅಂಬರೀಶ್ ಅವರು ಸನ್ಮಾನಿಸಿದರು. ಅಂತೆಯೇ, ಶಿಕ್ಷಣಶಾಸ್ತ್ರದಲ್ಲಿ 100/100 ಅಂಕ ಪಡೆದ ಚೈತ್ರಾ ಅವರಿಗೆ ವಿಷಯ ಉಪನ್ಯಾಸಕರಾದ ಶಿವನಾಗಪ್ಪ ಅವರು ವೈಯಕ್ತಿಕವಾಗಿ ಸನ್ಮಾನಿಸಿ ಪ್ರೋತ್ಸಾಹಿಸಿದರು. ಇದೇ ಸಂದರ್ಭದಲ್ಲಿ ಇದೇ ತಿಂಗಳ ಕೊನೆಯಲ್ಲಿ ನಿವೃತ್ತರಾಗಲಿರುವ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ  ಹೊಮ್ಮಣ್ಣ ಹಾಗೂ ಕಾಲೇಜಿನ ಐತಿಹಾಸಿಕ ದಾಖಲೆಯ ಫಲಿತಾಂಶಕ್ಕೆ ಕಾರಣರಾದ ಎಲ್ಲ ಉಪನ್ಯಾಸಕರನ್ನು ಕಾಲೇಜಿನಿಂದ ಗೌರವಿಸಲಾಯಿತು.

ಕೆ.ಪಿ.ಎಸ್. ಕಾರಟಗಿ ಸಂಗೀತ ಶಿಕ್ಷಕರಾದ ಸಂತೋಷ್ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಮಲ್ಲಮ್ಮ ಸ್ವಾಗತಿಸಿದರು. ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಾಂಕೇತಿಕವಾಗಿ ಹೂಗುಚ್ಚ ನೀಡಿ ಬರಮಾಡಿಕೊಂಡರು. ವಿಷ್ಣು ನಾಯಕ್ ಕಾರ್ಯಕ್ರಮ ನಿರ್ವಹಿಸಿಕೊಟ್ಟರೆ, ವೆಂಕಟೇಶ್, ರಮೇಶ್ ಹಾಗೂ ಅಮರೇಗೌಡ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿಕೊಟ್ಟರು. ಉಪನ್ಯಾಸಕರಾದ ಅಮರೇಶ್ ಮತ್ತು ಚಂದ್ರಕಲಾ ನಿರೂಪಿಸಿದ ಕಾರ್ಯಕ್ರಮವನ್ನು ಶಿವನಾಗಪ್ಪ ವಂದಿಸಿದರು. ಕಾರ್ಯಕ್ರಮದಲ್ಲಿ ಕೆ.ಪಿ.ಎಸ್. ಶಾಲೆಯ ಉಪ ಪ್ರಾಚಾರ್ಯರಾದ  ಶರಣಪ್ಪ ಸೋಮಲಾಪುರ್ ಹಾಗೂ ಉಪನ್ಯಾಸಕರಾದ ಸಂಗಮೇಶ್, ಕೆ.ಆರ್.ಸಿ. ವರ್ಮಾ, ಶಿವಕುಮಾರ್, ಚಂದ್ರಶೇಖರ್, ಗೋವಿಂದರಾಜು, ಸುಲೋಚನಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದು ಯಶಸ್ವಿಗೊಳಿಸಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...