Home ಸುದ್ದಿ ರಾಯಚೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ.
ಸುದ್ದಿ

ರಾಯಚೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ.

Share
Share

ಮರ್ಚೆಡ್ ಡೇಸ್ ಸುದ್ದಿ|ರಾಯಚೂರು.

ರಾಯಚೂರು: ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ಮಂಗಳವಾರ ಅತ್ಯಂತ ಅರ್ಥಪೂರ್ಣವಾಗಿ ಜರುಗಿತು. ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್. ಭೋಸರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಭೋಸರಾಜು, ಪತ್ರಕರ್ತರು ಸಮಾಜದ ಬಗ್ಗೆ ಪ್ರಾಮಾಣಿಕ ಕಳಕಳಿ ಹೊಂದಿದ್ದಾಗ ಮಾತ್ರ ಆ ವೃತ್ತಿಗೆ ನಿಜವಾದ ಗೌರವ ದೊರೆಯುತ್ತದೆ ಎಂದರು. ಸಮಾಜದ ನ್ಯೂನತೆಗಳನ್ನು ತಿದ್ದಲು ಮಾಧ್ಯಮಗಳು ಪ್ರಬಲ ಅಸ್ತ್ರವಾಗಿದ್ದು, ಮಹಾತ್ಮ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಿ.ವಿ. ಗುಂಡಪ್ಪನವರಂತಹ ಮಹನೀಯರು ಪತ್ರಿಕಾ ರಂಗದ ಮೌಲ್ಯವನ್ನು ಹೆಚ್ಚಿಸಿದ್ದಾರೆ ಎಂದು ಸ್ಮರಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಬ್ಲಾಕ್ ಮೇಲ್ ಮಾಡುವ ಪತ್ರಕರ್ತರ ಅಗತ್ಯವಿಲ್ಲದೆ, ಜನರ ಸಮಸ್ಯೆಗೆ ಧ್ವನಿಯಾಗುವ ಬದ್ಧತೆಯುಳ್ಳ ಪತ್ರಕರ್ತರು ಇಂದಿನ ತುರ್ತು ಅವಶ್ಯಕತೆಯಾಗಿದ್ದಾರೆ ಎಂದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸೋಶಿಯಲ್ ಮೀಡಿಯಾ ಪ್ರಭಾವ ಹೆಚ್ಚುತ್ತಿದ್ದು, ಪತ್ರಕರ್ತರು ವೃತ್ತಿಯ ಘನತೆ ಮತ್ತು ಮೌಲ್ಯಗಳನ್ನು ಕಾಯ್ದುಕೊಳ್ಳುವ ಮೂಲಕ ಮಾಧ್ಯಮ ಕ್ಷೇತ್ರದ ಮೇಲೆ ಜನರಿರುವ ನಂಬಿಕೆಯನ್ನು ಮುಂದುವರಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿಶೇಷ ಸನ್ಮಾನ ಸ್ವೀಕರಿಸಿ ಮಾತನಾಡಿದ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ.ವೆಂಕಟ್ ಸಿಂಗ್, ಪತ್ರಕರ್ತರು ತಮ್ಮ ಸೇವೆಯನ್ನು ಹೆಮ್ಮೆಯಿಂದ ಕಾಣಬೇಕು ಎಂದು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ್, ಗ್ರಾಮೀಣ ಪತ್ರಕರ್ತರಿಗೆ ಸೇವಾ ಭದ್ರತೆ ಹಾಗೂ ಸೌಲಭ್ಯಗಳು ಸಿಗಬೇಕಿರುವ ಅಗತ್ಯತೆಯನ್ನು ಒತ್ತಿಹೇಳಿದರು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಪತ್ರಿಕೋದ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಾದ ರಂಗನಾಥ ಚಕ್ರವರ್ತಿ, ಶಿವಮೂರ್ತಿ ಹಿರೇಮಠ ಮತ್ತು ವಿರೇಶ ಸೌದ್ರಿ ಅವರಿಗೆ ಅತ್ಯುನ್ನತ ಜೀವಮಾನ ಸಾಧನೆ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದರೊಂದಿಗೆ ಜಿಲ್ಲೆಯ ವಿವಿಧ ಮುದ್ರ ಹಾಗೂ ದೃಶ್ಯ ಮಾಧ್ಯಮಗಳ ಹಲವು ಪ್ರತಿಭಾನ್ವಿತ ವರದಿಗಾರರು ಮತ್ತು ಕ್ಯಾಮೆರಾಮನ್ಸ್‌ಗಳಿಗೆ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಸಮಾರಂಭಕ್ಕೂ ಮುನ್ನ ಪತ್ರಿಕೋದ್ಯಮ ಕ್ಷೇತ್ರದ ಭೀಷ್ಮ ಡಿ.ವಿ. ಗುಂಡಪ್ಪ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾನವಿ ಶಾಸಕ ಜಿ. ಹಂಪಯ್ಯ ನಾಯಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜಿ. ಸುರೇಶ್ ಸೇರಿದಂತೆ ಸಂಘದ ಪ್ರಮುಖ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಗಣ್ಯರು ಉಪಸ್ಥಿತರಿದ್ದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...