Home ಸುದ್ದಿ ವಿಜಯೇಂದ್ರಗೆ ಪತ್ರ: ಗಂಗಾವತಿಯಲ್ಲಿ ಜನಾರ್ಧನ ರೆಡ್ಡಿ ವಿರುದ್ಧ ಮುಖಂಡರ ಆಕ್ರೋಶ, ಅಭಿವೃದ್ಧಿ ಮರೆತ ಶಾಸಕನಿಗೆ ನೆನಪಿಸಿದಷ್ಟೇ.
ಸುದ್ದಿ

ವಿಜಯೇಂದ್ರಗೆ ಪತ್ರ: ಗಂಗಾವತಿಯಲ್ಲಿ ಜನಾರ್ಧನ ರೆಡ್ಡಿ ವಿರುದ್ಧ ಮುಖಂಡರ ಆಕ್ರೋಶ, ಅಭಿವೃದ್ಧಿ ಮರೆತ ಶಾಸಕನಿಗೆ ನೆನಪಿಸಿದಷ್ಟೇ.

Share
Share

 

ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.

ಗಂಗಾವತಿ : ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಬರೆದಿರುವ ಗಂಭೀರ ಪತ್ರವೊಂದರಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರ ಕಾರ್ಯವೈಖರಿ ಹಾಗೂ ಕ್ಷೇತ್ರದ ನಿರ್ಲಕ್ಷ್ಯ ಧೋರಣೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಚುನಾವಣಾ ಸಮಯದಲ್ಲಿ ನೀಡಿರುವ ಭರವಸೆಗಳು ಮೂರು ವರ್ಷ ಕಳೆದರೂ ಈಡೇರದೆ ಇರುವುದು ಮತ್ತು ಶಾಸಕರು ಸಾರ್ವಜನಿಕರಿಗೆ ಲಭ್ಯವಿಲ್ಲದಿರುವುದು ಈ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದೆ.

ಚುನಾವಣಾ ಪ್ರಚಾರದ ವೇಳೆ ಅಂಜನಾದ್ರಿಗೆ ಐದು ಸಾವಿರ ಕೋಟಿ ರೂ. ಅನುದಾನ, ಡಬಲ್ ಬೆಡ್‌ರೂಮ್ ಮನೆಗಳ ನಿರ್ಮಾಣ, ಕೈಗಾರಿಕೆಗಳ ಸ್ಥಾಪನೆ ಮೂಲಕ ಉದ್ಯೋಗ ಸೃಷ್ಟಿ ಹಾಗೂ ಗಂಗಾವತಿಯನ್ನು ‘ಸಿಂಗಪುರ ಮತ್ತು ತಿರುಪತಿ’ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಮೂರು ವರ್ಷ ಕಳೆದರೂ ಒಂದೇ ಒಂದು ಭರವಸೆ ಈಡೇರಿಲ್ಲ. ಗಣಿ ದಣಿಯಾಗಿರುವ ಕಾರಣ ತಮ್ಮ ಸ್ವಂತ ಹಣದಿಂದ ಕ್ಷೇತ್ರ ಅಭಿವೃದ್ಧಿ ಮಾಡುತ್ತಾರೆಂಬ ಜನತೆಯ ನಂಬಿಕೆಗೆ ಇದರಿಂದ ತೀವ್ರ ಧಕ್ಕೆಯುಂಟಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಶಾಸಕರು ಕ್ಷೇತ್ರದಲ್ಲಿ ವಾಸ್ತವ್ಯ ಹೂಡುತ್ತಿಲ್ಲ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಮೂರು ವರ್ಷಗಳಿಂದ ಯಾವುದೇ ಸಭೆಗಳನ್ನು ನಡೆಸಿಲ್ಲ ಮತ್ತು ಜನರ ಕೈಗೆ ಸಿಗುತ್ತಿಲ್ಲ. ಕೇವಲ ಕೆಲವು ಜಯಂತಿಗಳು, ಸಭೆ-ಸಮಾರಂಭಗಳು ಹಾಗೂ ಕಾಮಗಾರಿಗಳ ಭೂಮಿಪೂಜೆಗಳಿಗೆ ಮಾತ್ರ ಸೀಮಿತವಾಗಿರುವ ಅವರು, ಕಾರ್ಯಕ್ರಮ ಮುಗಿದ ಕೂಡಲೇ ಕ್ಷೇತ್ರ ಬಿಟ್ಟು ಹೊರಟು ಹೋಗುತ್ತಾರೆ. ಪ್ರಸ್ತುತ ಬರ ಪರಿಸ್ಥಿತಿ ಇದ್ದರೂ ರೈತರ ಸಮಸ್ಯೆಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ತೋರುತ್ತಿರುವುದರಿಂದ ಜನರು ಬೇಸತ್ತಿದ್ದಾರೆ.

ಇದೇ ಪರಿಸ್ಥಿತಿ ಮುಂದುವರೆದರೆ ಮುಂಬರುವ ದಿನಗಳಲ್ಲಿ ಕ್ಷೇತ್ರದಲ್ಲಿ ಪಕ್ಷದ ಅಸ್ತಿತ್ವಕ್ಕೇ ಧಕ್ಕೆಯುಂಟಾಗಲಿದ್ದು, “ಎಲ್ಲ ಕಾಲಕ್ಕೂ ದುಡ್ಡು ಹಂಚಿ ಗೆಲ್ಲಬಹುದು ಎಂದು ಜನಪ್ರತಿನಿಧಿಗಳು ಭಾವಿಸಿದ್ದರೆ ಅದು ತಪ್ಪು, ಜನರು ಮೂರ್ಖರಲ್ಲ” ಎಂದು ಎಚ್ಚರಿಸಲಾಗಿದೆ. ಆದ್ದರಿಂದ ಶಾಸಕ ಜನಾರ್ಧನ ರೆಡ್ಡಿ ಅವರು ಕ್ಷೇತ್ರದಲ್ಲಿಯೇ ಇದ್ದು ಅಭಿವೃದ್ಧಿಗೆ ಒತ್ತು ನೀಡಬೇಕು, ಹಾಳಾಗಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಸೂಚನೆ ನೀಡಬೇಕು. ಒಂದು ವೇಳೆ ಅವರನ್ನು ಸ್ಥಳೀಯವಾಗಿ ನಿಯಂತ್ರಿಸಲು ಸಾಧ್ಯವಾಗದಿದ್ದರೆ, ಕೂಡಲೇ ಹೈಕಮಾಂಡ್ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಲವಾಗಿ ಒತ್ತಾಯಿಸಲಾಗಿದೆ.

 

 

 

 

 

 

 

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...