Home ಸುದ್ದಿ ಶಿವಾನಂದ ಮನ್ಯಾ ನಾಯ್ಕ ಅವರಿಗೆ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪ್ರದಾನ.
ಸುದ್ದಿ

ಶಿವಾನಂದ ಮನ್ಯಾ ನಾಯ್ಕ ಅವರಿಗೆ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪ್ರದಾನ.

Share
Share
ಮರ್ಚೆಡ್ ಡೇಸ್ ಸುದ್ದಿ|ಕಲಬುರಗಿ.

ಕಲಬುರಗಿ : ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಂದು ಮೈಲಿಗಲ್ಲು ಎಂಬಂತೆ, ಗುಲಬರ್ಗಾ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಸಂಶೋಧನಾ ವಿದ್ಯಾರ್ಥಿ ಶಿವಾನಂದ ಮನ್ಯಾ ನಾಯ್ಕ ಅವರು ಪಿಎಚ್‌ಡಿ ಪದವಿಗೆ ಭಾಜನರಾಗಿದ್ದಾರೆ. ವಿಮನಾ ರಂಗದಲ್ಲಿ ಅವರು ನಡೆಸಿದ ಆಳವಾದ ಅಧ್ಯಯನಕ್ಕೆ ವಿಶ್ವವಿದ್ಯಾಲಯವು ಈ ಗೌರವವನ್ನು ಅಧಿಕೃತವಾಗಿ ಘೋಷಿಸಿದೆ.

ಸಂಶೋಧಕ ಶಿವಾನಂದ ಮನ್ಯಾ ನಾಯ್ಕ ಅವರು ವಾಣಿಜ್ಯ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಅವರ ಸಮರ್ಥ ಮಾರ್ಗದರ್ಶನದಲ್ಲಿ ತಮ್ಮ ಸಂಶೋಧನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಅವರು “ಹ್ಯೂಮನ್ ರಿಸೋರ್ಸ್ ಮ್ಯಾನೇಜ್ಮೆಂಟ್ ಪ್ರಾಕ್ಟಿಸಸ್ ಇನ್ ಪಬ್ಲಿಕ್ ಅಂಡ್ ಪ್ರೈವೇಟ್ ಲೈಫ್ ಇನ್ಶೂರೆನ್ಸ್ ಕಂಪನೀಸ್ – ಎ ಕಂಪ್ಯಾರೇಟಿವ್ ಸ್ಟಡಿ ಆಫ್ ಸೆಲೆಕ್ಟ್ ಲೈಫ್ ಇನ್ಶೂರೆನ್ಸ್ ಕಂಪನೀಸ್” ಎಂಬ ಪ್ರಮುಖ ವಿಷಯದ ಕುರಿತು ಮಹಾಪ್ರಬಂಧವನ್ನು ಸಿದ್ಧಪಡಿಸಿ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದರು.

ಸಾರ್ವಜನಿಕ ಹಾಗೂ ಖಾಸಗಿ ಜೀವ ವಿಮಾ ಕಂಪನಿಗಳ ಮಾನವ ಸಂಪನ್ಮೂಲ ನಿರ್ವಹಣಾ ಪದ್ಧತಿಗಳ ಕುರಿತು ಅವರು ನಡೆಸಿದ ಈ ತುಲನಾತ್ಮಕ ಅಧ್ಯಯನವು ಶೈಕ್ಷಣಿಕ ವಲಯದಲ್ಲಿ ವಿಶೇಷ ಮೆಚ್ಚುಗೆಗೆ ಪಾತ್ರವಾಗಿದೆ. ಅವರ ಈ ಸಾಧನೆಗೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಹಿತೈಷಿಗಳು ಹಾಗೂ ಸಂಶೋಧನಾ ವಲಯದ ಮುಖಂಡರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...