Home ಸುದ್ದಿ ಕಿಷ್ಕಿಂಧಾ ಅಂಜನಾದ್ರಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ: 46 ದಿನಗಳಲ್ಲಿ 44.15 ಲಕ್ಷ ರೂ. ಸಂಗ್ರಹ.
ಸುದ್ದಿ

ಕಿಷ್ಕಿಂಧಾ ಅಂಜನಾದ್ರಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ: 46 ದಿನಗಳಲ್ಲಿ 44.15 ಲಕ್ಷ ರೂ. ಸಂಗ್ರಹ.

Share
Share
ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.

ಗಂಗಾವತಿ : ತಾಲೂಕಿನ ಐತಿಹಾಸಿಕ ಕಿಷ್ಕಿಂಧಾ ಅಂಜನಾದ್ರಿ ದೇವಾಲಯದ ಭಕ್ತರ ಕಾಣಿಕೆಯ ಹುಂಡಿಯನ್ನು ಮಂಗಳವಾರ ಎಣಿಕೆ ಮಾಡಲಾಗಿದ್ದು, ಕಳೆದ 46 ದಿನಗಳಲ್ಲಿ ಒಟ್ಟು 44,15,590 ರೂಪಾಯಿ ಸಂಗ್ರಹವಾಗಿದೆ.

ಜುಲೈ 07 ರಿಂದ ಆಗಸ್ಟ್ 18 ರವರೆಗಿನ ಅವಧಿಯಲ್ಲಿ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆಯನ್ನು ಮಂಗಳವಾರ ಕಂದಾಯ, ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳ ನೇತೃತ್ವದಲ್ಲಿ ವೀಡಿಯೋ ರೆಕಾರ್ಡಿಂಗ್‌ನೊಂದಿಗೆ ಎಣಿಕೆ ಮಾಡಲಾಯಿತು.

ಈ ಬಾರಿಯ ಹುಂಡಿ ಎಣಿಕೆಯ ಸಂದರ್ಭದಲ್ಲಿ ಭಾರತೀಯ ಚಲಾವಣೆಯ ಜೊತೆಗೆ ನೇಪಾಳ, ಅಮೇರಿಕಾ, ಪನಾಮ ಮತ್ತು ನೆದರ್ಲ್ಯಾಂಡ್ಸ್ ದೇಶಗಳ ವಿದೇಶಿ ಕರೆನ್ಸಿಗಳು ಸಹ ಹುಂಡಿಯಲ್ಲಿ ಪತ್ತೆಯಾಗಿವೆ.

ಈ ಹುಂಡಿ ಎಣಿಕೆಯ ಸಂದರ್ಭದಲ್ಲಿ ಕಂದಾಯ ಇಲಾಖೆಯ ಶಿರಸ್ತೇದಾರರಾದ ಪ್ರಕಾಶ್ ನಾಯಕ, ಕೃಷ್ಣವೇಣಿ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ, ಮಹೇಶ ದಲಾಲ್, ಕಂದಾಯ ಮಂಜುನಾಥ್, ರಶ್ಮಿ, ನಾಗರತ್ನ, ಪ್ರಭುಸ್ವಾಮಿ, ಸುಧಾ, ಕವಿತಾ, ಗಾಯತ್ರಿ, ಸುಪ್ರಿಯ, ನವಾಜ್, ಯಶವಂತ, ಶರಣಪ್ಪ, ರಾಜೇಶ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ನವೀನ್ ಕುಮಾರ್, ಕಮಿಟಿ ಮ್ಯಾನೇಜರ್ ಮಡಿವಾಳ ವೆಂಕಟೇಶ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...