Home ಸುದ್ದಿ ರಾಯಚೂರಿನಲ್ಲಿ ಅಮಾನವೀಯ ಕೃತ್ಯ: ಬಹಿರ್ದೆಸೆಗೆ ತೆರಳಿದ್ದ ಯುವತಿಯ ಮೇಲೆ ಅತ್ಯಾಚಾರವೆಸಗಿ ಬಾವಿಗೆ ತಳ್ಳಿ ಬರ್ಬರ ಕೊಲೆ.
ಸುದ್ದಿ

ರಾಯಚೂರಿನಲ್ಲಿ ಅಮಾನವೀಯ ಕೃತ್ಯ: ಬಹಿರ್ದೆಸೆಗೆ ತೆರಳಿದ್ದ ಯುವತಿಯ ಮೇಲೆ ಅತ್ಯಾಚಾರವೆಸಗಿ ಬಾವಿಗೆ ತಳ್ಳಿ ಬರ್ಬರ ಕೊಲೆ.

Share
Share

ಮರ್ಚೆಡ್ ಡೇಸ್ ಸುದ್ದಿ.|ಸಿರವಾರ.

ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಮಾನವೀಯತೆ ತಲೆತಗ್ಗಿಸುವಂತಹ ಭೀಕರ ಕೃತ್ಯವೊಂದು ಬೆಳಕಿಗೆ ಬಂದಿದೆ. ಬಹಿರ್ದೆಸೆಗೆ ತೆರಳಿದ್ದ ಯುವತಿಯೊಬ್ಬಳನ್ನು ದುಷ್ಕರ್ಮಿಗಳು ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ.

ಮೃತ ದುರ್ದೈವಿಯನ್ನು ಹೊಕ್ರಾಣಿ ಗ್ರಾಮದ ತಿಪ್ಪಾರೆಡ್ಡಿ ಎಂಬುವವರ ಪುತ್ರಿ ಅಶ್ವಿನಿ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆಯಲ್ಲಿ ಬಯಲು ಶೌಚಾಲಯಕ್ಕೆ ತೆರಳಿದ್ದ ಸಂದರ್ಭದಲ್ಲಿ ಕಾದು ಕುಳಿತಿದ್ದ ಕಾಮುಕರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಯುವತಿ ಒಬ್ಬಂಟಿಯಾಗಿರುವುದನ್ನು ಗಮನಿಸಿದ ನಾಲ್ಕೈದು ದುಷ್ಕರ್ಮಿಗಳ ಗುಂಪು ಆಕೆಯ ಮೇಲೆ ಎರಗಿ ಸಾಮೂಹಿಕ ಅತ್ಯಾಚಾರವೆಸಗಿದೆ ಎಂದು ಶಂಕಿಸಲಾಗಿದೆ. ಬಳಿಕ ಕೃತ್ಯವನ್ನು ಮುಚ್ಚಿಹಾಕುವ ಉದ್ದೇಶದಿಂದ ಆಕೆಯನ್ನು ಹತ್ಯೆಗೈದು ಸಮೀಪದ ಬಾವಿಗೆ ಎಸೆದು ಪರಾರಿಯಾಗಿದ್ದಾರೆ.

ಮರುದಿನ ಬೆಳಗ್ಗೆ ಬಾವಿಯ ಮೆಟ್ಟಿಲುಗಳ ಮೇಲೆ ಯುವತಿಯ ಶವ ಪತ್ತೆಯಾಗುತ್ತಿದ್ದಂತೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಅಮಾನುಷ ಕೃತ್ಯಕ್ಕೆ ಗ್ರಾಮಸ್ಥರು ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಂತಹ ಹೇಯ ಕೃತ್ಯ ಎಸಗಿದ ನರಾಧಮರಿಗೆ ಗಲ್ಲು ಶಿಕ್ಷೆಯೇ ಆಗಬೇಕು ಎಂದು ಸ್ಥಳೀಯರು ಮತ್ತು ವಿವಿಧ ಸಂಘಟನೆಗಳು ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿವೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶಂಕಿತರ ಪತ್ತೆಗಾಗಿ ಬಲೆ ಬೀಸಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿರುವ ಈ ಪರಿಸ್ಥಿತಿ ಸಾರ್ವಜನಿಕರಲ್ಲಿ ಭಾರೀ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...