Home ಸುದ್ದಿ ಮಾನ್ವಿಯಲ್ಲಿ ‘ಭಾವನಾ ಡಯಾ ಬೆಸ್ಟ್’ ಶುಗರ್ ಲೆಸ್ ರೈಸ್ ಬಿಡುಗಡೆ: ಮಧುಮೇಹಿಗಳಿಗೆ ಸಿಹಿ ಸುದ್ದಿ.
ಸುದ್ದಿ

ಮಾನ್ವಿಯಲ್ಲಿ ‘ಭಾವನಾ ಡಯಾ ಬೆಸ್ಟ್’ ಶುಗರ್ ಲೆಸ್ ರೈಸ್ ಬಿಡುಗಡೆ: ಮಧುಮೇಹಿಗಳಿಗೆ ಸಿಹಿ ಸುದ್ದಿ.

Share
Share

 

ಮರ್ಚೆಡ್ ಡೇಸ್ ಸುದ್ದಿ.|ರಾಯಚೂರು.

ಮಾನ್ವಿ: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಪತ್ರಿಕಾ ಭವನದಲ್ಲಿ ಮಧುಮೇಹಿಗಳಿಗೆ (ಶುಗರ್ ಕಾಯಿಲೆ ಇರುವವರಿಗೆ) ಅತ್ಯಂತ ಉಪಯುಕ್ತವಾದ ‘ಭಾವನಾ ಡಯಾ ಬೆಸ್ಟ್ ರೈಸ್’ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಹೊಸ ಉತ್ಪನ್ನವನ್ನು ಪರಿಚಯಿಸಲಾಯಿತು.

ದೈನಂದಿನ ಆಹಾರ ಪದ್ಧತಿಯಲ್ಲಿ ಅನ್ನ ಸೇವನೆಯಿಂದ ಶುಗರ್ ಮಟ್ಟ ಹೆಚ್ಚಾಗುತ್ತದೆ ಎಂಬ ಆತಂಕದಲ್ಲಿರುವ ಮಧುಮೇಹಿಗಳಿಗೆ ಈ ಅಕ್ಕಿ ಉತ್ತಮ ಪರಿಹಾರವಾಗಿದೆ. ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಹೊಂದಿರುವ ಈ ‘ಶುಗರ್ ಲೆಸ್ ರೈಸ್’ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಸಮತೋಲನದಲ್ಲಿಡಲು ಸಹಕಾರಿಯಾಗಿದ್ದು, ಆರೋಗ್ಯ ರಕ್ಷಣೆಗೆ ಸೂಕ್ತವಾಗಿದೆ ಎಂದು ಸಂಸ್ಥೆಯ ಪ್ರತಿನಿಧಿಗಳು ತಿಳಿಸಿದರು.

‘ಬೈ.. ಬೈ.. ಶುಗರ್’ ಎಂಬ ಧ್ಯೇಯವಾಕ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಈ ಭಾವನಾ ರೈಸ್ 5 ಕೆಜಿ ಪ್ಯಾಕೆಟ್‌ಗಳಲ್ಲಿ ಲಭ್ಯವಿದೆ. ಇದು ಕೇವಲ ಶುಗರ್ ರೋಗಿಗಳಿಗೆ ಮಾತ್ರವಲ್ಲದೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರು ಹಾಗೂ ತೂಕ ಇಳಿಸಿಕೊಳ್ಳಲು ಬಯಸುವವರಿಗೂ ಉತ್ತಮ ಪೌಷ್ಟಿಕ ಆಹಾರ ಆಯ್ಕೆಯಾಗಿದೆ ಎಂದು ಗೋಷ್ಠಿಯಲ್ಲಿ ಮಾಹಿತಿ ನೀಡಲಾಯಿತು

ಮಾನ್ವಿ ಪಟ್ಟಣ ಹಾಗೂ ಗ್ರಾಮೀಣ ಭಾಗದ ಜನರಿಗೆ ಸುಲಭವಾಗಿ ದೊರೆಯುವಂತೆ ಸ್ಥಳೀಯವಾಗಿ ಈ ಅಕ್ಕಿಯ ಮಾರಾಟ ಮತ್ತು ವಿತರಣಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇನ್ಮುಂದೆ ಅನ್ನ ಪ್ರಿಯರಾದ ಮಧುಮೇಹಿಗಳು ಯಾವುದೇ ಆತಂಕವಿಲ್ಲದೆ ನಿತ್ಯದ ಊಟದಲ್ಲಿ ಈ ಅಕ್ಕಿಯನ್ನು ಬಳಸಬಹುದಾಗಿದೆ ಎಂದು ತಿಳಿಸಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಮುಖ್ಯಸ್ಥರು, ಗಣ್ಯರು ಹಾಗೂ ಸ್ಥಳೀಯ ಪತ್ರಕರ್ತರು ಉಪಸ್ಥಿತರಿದ್ದು ಉತ್ಪನ್ನದ ಪೊಟ್ಟಣವನ್ನು ಜಂಟಿಯಾಗಿ ಬಿಡುಗಡೆಗೊಳಿಸಿದರು. ಸಾರ್ವಜನಿಕರು ಹಾಗೂ ಮಧುಮೇಹದಿಂದ ಬಳಲುತ್ತಿರುವವರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಲಾಯಿತು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...