Home ಸುದ್ದಿ ಹಿರೇಜಂತಕಲ್‌ನಲ್ಲಿ ಬೆಂಕಿ ಅವಘಡ: ಶೆಡ್, ಹುಲ್ಲಿನ ಬಣವೆ ಭಸ್ಮ; ಮೂರು ಎಮ್ಮೆಗಳಿಗೆ ಗಂಭೀರ ಗಾಯ.
ಸುದ್ದಿ

ಹಿರೇಜಂತಕಲ್‌ನಲ್ಲಿ ಬೆಂಕಿ ಅವಘಡ: ಶೆಡ್, ಹುಲ್ಲಿನ ಬಣವೆ ಭಸ್ಮ; ಮೂರು ಎಮ್ಮೆಗಳಿಗೆ ಗಂಭೀರ ಗಾಯ.

Share
Share
ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ಇಲ್ಲಿನ 29ನೇ ವಾರ್ಡ್ ಹಿರೇಜಂತಕಲ್‌ನ ಬನ್ನಿ ಮಹಾಕಾಳಿ ಗುಡಿ ಸಮೀಪ  ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಹುಲ್ಲಿನ ಬಣವೆ ಹಾಗೂ ಪಕ್ಕದಲ್ಲಿದ್ದ ಜಾನುವಾರುಗಳ ಶೆಡ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ  ಈ ಘಟನೆಯು ಇಂದು ಮುಂಜಾನೆ ಸುಮಾರು 8.30 ಗಂಟೆಗೆ  ಸಂಭವಿಸಿದೆ.
ಸ್ಥಳೀಯ ನಿವಾಸಿಗಳಾದ ಹುಲುಗಪ್ಪ ಮತ್ತು ಮಲ್ಲಪ್ಪ ಅವರಿಗೆ ಸೇರಿದ ಹುಲ್ಲಿನ ಬಣವೆ ಇದಾಗಿದ್ದು, ಬಣವೆ ಪಕ್ಕದಲ್ಲಿದ್ದ ತಿಪ್ಪೆಗೆ ಯಾರೋ ಸುರಿದಿದ್ದ ಒಲೆಯ ಬಿಸಿ ಬೂದಿಯ ಕೆಂಡದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆ ಪಕ್ಕದಲ್ಲಿದ್ದ ಶೆಡ್ಡಿಗೂ ವ್ಯಾಪಿಸಿದ್ದು, ಶೆಡ್‌ನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.
ಶೆಡ್‌ನಲ್ಲಿ ಕಟ್ಟಲಾಗಿದ್ದ ಮೂರು ಎಮ್ಮೆಗಳ ಮೈತುಂಬಾ ಚರ್ಮ ಸುಟ್ಟು ಗಾಯಗಳಾಗಿದ್ದು, ತಕ್ಷಣವೇ ಅವುಗಳನ್ನು ರಕ್ಷಿಸಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಘಟನಾ ಸ್ಥಳದಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾದರು.
ಅಗ್ನಿಶಾಮಕ ದಳದ ಸಮಯಪ್ರಜ್ಞೆಯಿಂದ ಬೆಂಕಿ ಸುತ್ತಮುತ್ತಲಿನ ಮನೆಗಳಿಗೆ ಹರಡುವುದು ತಪ್ಪಿದ್ದು, ಸಂಭವಿಸಬಹುದಾಗಿದ್ದ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದಂತಾಗಿದೆ. ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...