Home ಸುದ್ದಿ ಬಳಗಾನೂರಿನಲ್ಲಿ ಶಾರ್ಟ್ ಸರ್ಕ್ಯೂಟ್‌ ಹೊತ್ತಿ ಉರಿದ ಗುಡಿಸಲು: ₹2.25 ಲಕ್ಷ ನಗದು, ಚಿನ್ನಾಭರಣ ಸಹಿತ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ.
ಸುದ್ದಿ

ಬಳಗಾನೂರಿನಲ್ಲಿ ಶಾರ್ಟ್ ಸರ್ಕ್ಯೂಟ್‌ ಹೊತ್ತಿ ಉರಿದ ಗುಡಿಸಲು: ₹2.25 ಲಕ್ಷ ನಗದು, ಚಿನ್ನಾಭರಣ ಸಹಿತ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ.

Share
Share
ಮರ್ಚೆಡ್ ಡೇಸ್ ಸುದ್ದಿ|ರಾಯಚೂರು.

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬಳಗಾನೂರು ಪಟ್ಟಣ ಪಂಚಾಯತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕಿಟ್ ದಿಂದ  ಉಂಟಾದ ಪರಿಣಾಮವಾಗಿ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲೇ ಜ್ವಾಲೆಗಳು ಇಡೀ ಮನೆಯನ್ನು ಆವರಿಸಿಕೊಂಡಿವೆ.

ಈ ದುರ್ಘಟನೆಯಲ್ಲಿ ಗಂಗಣ್ಣ ಅಮರಪ್ಪ ತಲೇಖಾನ ಅವರಿಗೆ ಸೇರಿದ ಗುಡಿಸಲು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಯಾವುದೇ ವಸ್ತುಗಳನ್ನು ರಕ್ಷಿಸಲು ಸಾಧ್ಯವಾಗದೆ, ಇಡೀ ಆಶ್ರಯ ತಾಣವೇ ಬೂದಿಯಾಗಿದೆ.

ಬೆಂಕಿಯ ಕೆನ್ನಾಲಿಗೆಗೆ ₹2 ಲಕ್ಷ 25 ಸಾವಿರ ನಗದು ಹಣ, ಎರಡೂವರೆ ತೊಲೆ ಬಂಗಾರ ಹಾಗೂ 22 ತೊಲೆ ಬೆಳ್ಳಿ ಸೇರಿದಂತೆ ಬೆಲೆಬಾಳುವ ಆಭರಣಗಳು ಸುಟ್ಟು ಹೋಗಿವೆ. ಕಷ್ಟಪಟ್ಟು ಕೂಡಿಟ್ಟಿದ್ದ ಹಣ ಮತ್ತು ಒಡವೆಗಳು ಕಣ್ಣೆದುರೇ ನಾಶವಾಗಿರುವುದು ಕುಟುಂಬಕ್ಕೆ ಭರಿಸಲಾರದ ಹೊಡೆತ ನೀಡಿದೆ.

ಕೇವಲ ಹಣ, ಒಡವೆಯಷ್ಟೇ ಅಲ್ಲದೆ, ಸಂಗ್ರಹಿಸಿಡಲಾಗಿದ್ದ 35 ಕ್ವಿಂಟಲ್ ಹತ್ತಿ, 25 ಪ್ಯಾಕೆಟ್ ಬಿತ್ತನೆ ಜೋಳ, ಅಕ್ಕಿ, ಭತ್ತ ಹಾಗೂ ಬಟ್ಟೆ ಸೇರಿದಂತೆ ಗೃಹಬಳಕೆಯ ಸಮಸ್ತ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಈ ಘಟನೆಯಿಂದಾಗಿ ಸಂತ್ರಸ್ತ ಕುಟುಂಬಕ್ಕೆ ಒಟ್ಟಾರೆಯಾಗಿ ಸುಮಾರು 10 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬದುಕಿಗೆ ಆಧಾರವಾಗಿದ್ದ ಎಲ್ಲವನ್ನೂ ಕಳೆದುಕೊಂಡು ಕಂಗಾಲಾಗಿರುವ ಸಂತ್ರಸ್ತ ಕುಟುಂಬಕ್ಕೆ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಯಿಂದ ಶೀಘ್ರವೇ ಸೂಕ್ತ ಪರಿಹಾರ ಒದಗಿಸಬೇಕೆಂದು ಸ್ಥಳೀಯರು ತೀವ್ರವಾಗಿ ಒತ್ತಾಯಿಸಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...