Home ಸುದ್ದಿ ಮಹಾಂತೇಶ್ ಅಂಗಡಿ ನಿಧನ: ಕುಟುಂಬಸ್ಥರು, ಬಂಧುಗಳು ಹಾಗೂ ಆತ್ಮೀಯರಲ್ಲಿ ಶೋಕದ ಛಾಯೆ.
ಸುದ್ದಿ

ಮಹಾಂತೇಶ್ ಅಂಗಡಿ ನಿಧನ: ಕುಟುಂಬಸ್ಥರು, ಬಂಧುಗಳು ಹಾಗೂ ಆತ್ಮೀಯರಲ್ಲಿ ಶೋಕದ ಛಾಯೆ.

Share
Share
ಮರ್ಚೆಡ್ ಡೇಸ್|ಶೋಕ ಸುದ್ದಿ.

ಕಾರಟಗಿ: ಪಟ್ಟಣದ ನಿವಾಸಿ ಮಹಾಂತೇಶ್ ಅಂಗಡಿ (52),  ಶರಣಪ್ಪ ಅಂಗಡಿ ಅವರು ಮಗನಾದ ಇವರು ದಿನಾಂಕ 30-10-2026ರಂದು ಹೃದಯಗತದಿಂದ ನಿಧನರಾಗಿದ್ದಾರೆ. ಕುಟುಂಬದ ಹಿರಿಯರಾಗಿ ಸದಾ ಮಾರ್ಗದರ್ಶನ ನೀಡುತ್ತಾ, ಎಲ್ಲರೊಂದಿಗೂ ಪ್ರೀತಿ, ವಿಶ್ವಾಸ ಹಾಗೂ ಆತ್ಮೀಯತೆಯಿಂದ ಬೆರೆಯುತ್ತಿದ್ದ ಅವರು, ಕುಟುಂಬದ ಪ್ರತಿಯೊಬ್ಬರಿಗೂ ಆಸರೆಯಾಗಿದ್ದರು. ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಬಂಧುಗಳು, ಸ್ನೇಹಿತರು ಹಾಗೂ ಆತ್ಮೀಯ ವಲಯದಲ್ಲಿ ತೀವ್ರ ದುಃಖ ಆವರಿಸಿದೆ.

ಕುಟುಂಬಕ್ಕೆ ಸದಾ ಮಾರ್ಗದರ್ಶಕರಾಗಿದ್ದ ಮಹಾಂತೇಶ್ ಅಂಗಡಿ ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಅವರೊಂದಿಗಿನ ಒಡನಾಟ, ಆತ್ಮೀಯತೆ ಹಾಗೂ ನೆನಪುಗಳು ಕುಟುಂಬಸ್ಥರು ಮತ್ತು ಹಿತೈಷಿಗಳ ಮನದಲ್ಲಿ ಸದಾ ಉಳಿಯಲಿವೆ. ಅವರ ನಿಧನದ ಸುದ್ದಿ ತಿಳಿದು ಬಂಧುಮಿತ್ರರು ಹಾಗೂ ಪರಿಚಿತರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 31-10-2026, ಶನಿವಾರ ಬೆಳಗ್ಗೆ 10 ಗಂಟೆಗೆ ಕಾರಟಗಿ ಪಟ್ಟಣದ ವೀರಶೈವ ರುದ್ರಭೂಮಿಯಲ್ಲಿ ಶಾಸ್ತ್ರೋಕ್ತವಾಗಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ. ಅಗಲಿದ ಮಹಾಂತೇಶ್ ಅಂಗಡಿ ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬಸ್ಥರು, ಬಂಧುಗಳು ಮತ್ತು ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತಾ, ಭಾವಪೂರ್ಣ ಶ್ರದ್ಧಾಂಜಲಿಗಳು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...