Home ಸುದ್ದಿ ಹಿಮಾಲಯದ ತಪ್ಪಲಿನಿಂದ ತುಂಗಭದ್ರಾ ತೀರಕ್ಕೆ ಮಾದಕ ನಶೆ! ಸಾಣಾಪುರದಲ್ಲಿ 16 ಲಕ್ಷದ ಚರಸ್ ವಶ, ಮೂವರು ಅಂದರ್.
ಸುದ್ದಿ

ಹಿಮಾಲಯದ ತಪ್ಪಲಿನಿಂದ ತುಂಗಭದ್ರಾ ತೀರಕ್ಕೆ ಮಾದಕ ನಶೆ! ಸಾಣಾಪುರದಲ್ಲಿ 16 ಲಕ್ಷದ ಚರಸ್ ವಶ, ಮೂವರು ಅಂದರ್.

Share
Share

 

 

 

 

ಮರ್ಚೆಡ್ ಡೇಸ್ ಸುದ್ದಿ|ಕೊಪ್ಪಳ.

ಕೊಪ್ಪಳ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ಗಂಗಾವತಿ ತಾಲೂಕಿನ ಸಾಣಾಪುರ ಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಭರ್ಜರಿ ದಾಳಿ ನಡೆಸಿ ಬೃಹತ್ ಜಾಲವೊಂದನ್ನು ಭೇದಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆಗೆ ಇಳಿದ ಪೊಲೀಸರು, ಅಂದಾಜು 16 ಲಕ್ಷ ರೂಪಾಯಿ ಮೌಲ್ಯದ 753 ಗ್ರಾಂ ತೂಕದ ‘ಚರಸ್’ (ಹಶೀಶ್) ಮಾದಕ ವಸ್ತುವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರರಾಜ್ಯ ನಂಟು ಹೊಂದಿರುವ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಹಿಮಾಚಲ ಪ್ರದೇಶದಿಂದ ಅಕ್ರಮವಾಗಿ ಚರಸ್ ತಂದು ಸಾಣಾಪುರ ಭಾಗದಲ್ಲಿ ಸಂಗ್ರಹಿಸಿಟ್ಟಿರುವ ಬಗ್ಗೆ ಪೊಲೀಸರಿಗೆ ನಿಖರ ಸುಳಿವು ಸಿಕ್ಕಿತ್ತು. ತಕ್ಷಣವೇ ಸಾಣಾಪುರದ ಮೇಲೆ ದಾಳಿ ನಡೆಸಿದ ಪೊಲೀಸರಿಗೆ ಆರಂಭದಲ್ಲಿ ಚರಸ್ ತುಂಬಿದ್ದ ಎರಡು ಚಿಕ್ಕ ಪ್ಯಾಕೆಟ್‌ಗಳು ಪತ್ತೆಯಾದವು. ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಸಮೀಪದ ಬಸಾಪುರ ಗ್ರಾಮದ ಮನೆಯೊಂದರಲ್ಲಿ ಹೆಚ್ಚಿನ ಪ್ರಮಾಣದ ಮಾದಕ ವಸ್ತುವನ್ನು ಅಡಗಿಸಿಟ್ಟಿರುವ ಸತ್ಯ ಬಯಲಾಯಿತು.

ತಡಮಾಡದೆ ಬಸಾಪುರ ಗ್ರಾಮದ ಆ ಮನೆಯ ಮೇಲೆ ದಾಳಿ ನಡೆಸಿದ ಪೊಲೀಸ್ ತಂಡ, ಅಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 88 ಚಿಕ್ಕ ಪ್ಯಾಕೆಟ್‌ಗಳಲ್ಲಿದ್ದ ಒಟ್ಟು 753 ಗ್ರಾಂ ಚರಸ್ ಅನ್ನು ಜಪ್ತಿ ಮಾಡಿದೆ. ಬಂಧಿತ ಆರೋಪಿಗಳನ್ನು ಹಿಮಾಚಲ ಪ್ರದೇಶ ಮೂಲದ ರಾಜೇಶ್ ಶರ್ಮಾ ಹಾಗೂ ಗಂಗಾವತಿ ತಾಲೂಕಿನ ಹನುಮನಹಳ್ಳಿ ಗ್ರಾಮದ ನಿವಾಸಿಗಳಾದ ಮಂಜುನಾಥ ಮತ್ತು ರಜನಿಕಾಂತ್ ಎಂದು ಗುರುತಿಸಲಾಗಿದೆ. ಹೊರರಾಜ್ಯದಿಂದ ಮಾದಕ ವಸ್ತುವನ್ನು ತಂದು ಸ್ಥಳೀಯರ ಸಹಕಾರದೊಂದಿಗೆ ಮಾರಾಟ ಮಾಡಲು ಇವರು ಸಂಚು ರೂಪಿಸಿದ್ದರು ಎನ್ನಲಾಗಿದೆ.

ಹಂಪಿ ಮತ್ತು ಸಾಣಾಪುರ ಭಾಗಕ್ಕೆ ದೇಶ-ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುವುದರಿಂದ, ಇಲ್ಲಿ ಮಾದಕ ವಸ್ತುಗಳಿಗೆ ಬೇಡಿಕೆ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶ ಆರೋಪಿಗಳದ್ದಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಈ ಅಕ್ರಮ ದಂಧೆಯ ಹಿಂದೆ ಕೇವಲ ಈ ಮೂವರು ಮಾತ್ರವಲ್ಲದೆ, ಇನ್ನೂ ದೊಡ್ಡ ಜಾಲವೇ ಸಕ್ರಿಯವಾಗಿರುವ ಸಾಧ್ಯತೆಯಿದ್ದು, ಪೂರೈಕೆದಾರರು ಮತ್ತು ಖರೀದಿದಾರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಪ್ರವಾಸೋದ್ಯಮದ ಹೆಸರಿನಲ್ಲಿ ನಡೆಯುವ ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿದ್ದು, ಬಂಧಿತರ ವಿಚಾರಣೆಯಿಂದ ಇನ್ನಷ್ಟು ಸ್ಫೋಟಕ ಮಾಹಿತಿ ಹೊರಬೀಳುವ ನಿರೀಕ್ಷೆಯಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...