Home ಸುದ್ದಿ 2026ನೇ ಸಾಲಿನ ವಿ.ಪಿ.ಸಿಂಗ್ ಮತ್ತು ಕರ್ಪೂರಿ ಠಾಕೂರ್ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ.
ಸುದ್ದಿ

2026ನೇ ಸಾಲಿನ ವಿ.ಪಿ.ಸಿಂಗ್ ಮತ್ತು ಕರ್ಪೂರಿ ಠಾಕೂರ್ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ.

Share
Share

 

 

ಮರ್ಚೆಡ್ ಡೇಸ್ ಸುದ್ದಿ.

ಬೆಂಗಳೂರು ; 2026ನೇ ಸಾಲಿನ ವಿ.ಪಿ.ಸಿಂಗ್ ಮತ್ತು ಕರ್ಪೂರಿ ಠಾಕೂರ್ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದರ ಮತ್ತು ವರದಿಗಾರರ ಸಂಘ ಅತ್ಯುನ್ನತ ಗೌರವಗಳಲ್ಲಿ ಒಂದಾದ ವಿ.ಪಿ.ಸಿಂಗ್ ಪ್ರಶಸ್ತಿ ಮತ್ತು ಕರ್ಪೂರಿ ಠಾಕೂರ್ ಪ್ರಶಸ್ತಿಗಳನ್ನು ಘೋಷಿಸಿದೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಗೌರವಾಧ್ಯಕ್ಷ ಎಂ.ಎಸ್.ಮಣಿ,ರಾಜ್ಯಾಧ್ಯಕ್ಷ ಗಂಧರ್ವ ಸೇನಾ, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ ಹಾಲಗಳಲೆ, ಈ ಬಾರಿ 7 ವಿ.ಪಿ.ಸಿಂಗ್ ಪ್ರಶಸ್ತಿಗೆ, 7ಮಂದಿ ಕರ್ಪೂರಿ ಠಾಕೂರ್ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಸಾಮಾಜಿಕ, ಆರೋಗ್ಯ, ಶಿಕ್ಷಣ ಮತ್ತು ಸಮುದಾಯ ಸೇವೆಯಂತಹ ಕ್ಷೇತ್ರಗಳಲ್ಲಿ ಅಮೂಲ್ಯ ಕೊಡುಗೆ ನೀಡಿದವರಿಗೆ ವಿ.ಪಿ.ಸಿಂಗ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಿ.ಪಿ.ಸಿಂಗ್ ಪ್ರಶಸ್ತಿಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ದಿನೇಶ್, ಸ್ಪರ್ಶ ಆಸ್ಪತ್ರೆಯ ತಜ್ಞವೈದ್ಯ ಡಾ.ನಾಗೇಶ್ ಬಸವರಾಜ, ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಯ ನಿರ್ದೇಶಕ ಡಾ.ಶಶಿಭೂಷಣ್, ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ, ಹಿರಿಯ ಪತ್ರಕರ್ತರಾದ ರಾಜು ಕಂಬಾರ, ಕೆ.ಎಸ್.ಸೋಮಣ್ಣ, ಸಮಾಜಸೇವಕ ಲಕ್ಷ್ಮೀನಾರಾಯಣ ಅವರುಗಳು ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

 

ಕರ್ಪೂರಿ ತಾಕೂ‌ರ್ ಪ್ರಶಸ್ತಿಗೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್, ಕರ್ನಾಟಕ ಮಾಧ್ಯಮ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ.ಸಿದ್ದರಾಜು, ಬೆಂಗಳೂರು ಉತ್ತರ ವಿ.ವಿ. ಉಪಕುಲಪತಿ ಪ್ರೊ. ಬಿ.ಕೆ. ರವಿ, ಹಿರಿಯ ಪತ್ರಕರ್ತರುಗಳಾದ ಲಕ್ಷಣ ಕೊಡಸೆ, ಗಂಗಾಧರ ಮೊದಲಿಯಾ‌ರ್, ಐ.ಎಚ್.ಸಂಗಮದೇವ ಹಾಗೂ ರವಿ ಬಿದನೂರ ಅವರುಗಳು ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದಾರೆ.

 

ವಿಶೇಷವಾಗಿ “ದೇವಮ್ಮ” ಪ್ರಶಸ್ತಿಗೆ ಪತ್ರಕರ್ತೆ ಮಿನಿ ತೇಜಸ್ವಿ ಅವರು ಆಯ್ಕೆಯಾಗಿದ್ದಾರೆ, ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನಲ್ಲಿ ನಡೆಯಲಿದ್ದು ಸದ್ಯದಲ್ಲೆ ದಿನಾಂಕ ಪ್ರಕಟಿಸಲಾಗುವುದು ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದರು.

Share
Related Articles
ಅಂಕಣಸುದ್ದಿ

ಜನರ ಜೀವ ಉಳಿಸಲು ಜಾಗತಿಕ ಔಷಧಿ ದೈತ್ಯರ ಎದರು ಸೆಟೆದು ನಿಂತ ಧೀರ ಅಧಿಕಾರಿ ಐಎಎಸ್ ಅಧಿಕಾರಿ ಪಿ.ಎಚ್. ಕುರಿಯನ್.

ಮರ್ಚೆಡ್ ಡೇಸ್ | ವಿಶೇಷ ಲೇಖನ: ಅಧಿಕಾರವೆಂದರೆ ಜನರ ಸೇವೆ ಎಂಬುದನ್ನು ಜಗತ್ತಿಗೆ ತೋರಿಸಿದ ಅಪರೂಪದ...

ಸುದ್ದಿ

ಡ್ರೋನ್ ಕಣ್ಣಲ್ಲಿ ಸೆರೆಯಾಯ್ತು ದೇವಿರಮ್ಮ ಬೆಟ್ಟದ ಅದ್ಭುತ ವೈಭವ: ಜನಸಾಗರದ ನಡುವೆ ರಕ್ಷಣಾ ಪಡೆಯ ಶ್ಲಾಘನೀಯ ಸೇವ.

ಮರ್ಚೆಡ್ ಡೇಸ್ ಸುದ್ದಿ|ಚಿಕ್ಕಮಂಗಳೂರು. ಚಿಕ್ಕಮಗಳೂರು :ತಾಲೂಕಿನ ಮಲ್ಲೇನಹಳ್ಳಿ ಸಮೀಪದಲ್ಲಿರುವ ಸುಪ್ರಸಿದ್ಧ ದೇವಿರಮ್ಮ ಬೆಟ್ಟದಲ್ಲಿ ಭಕ್ತಿಭಾವದ ಪರಾಕಾಷ್ಠೆ...

ಸುದ್ದಿ

ಆಕಾಶದಲ್ಲೇ ಬೆಳಕಿನ ಮಹಾಸಂಗ್ರಾಮ! ಶತಮಾನಗಳ ಸಂಪ್ರದಾಯಕ್ಕೆ ಸಾಕ್ಷಿಯಾದ ಕೇರಳದ ತ್ರಿಶೂರ್ ಪೂರಂನ ‘ವೆಡಿಕ್ಕೆಟ್ಟು’ ವೈಭವ.

  ಮರ್ಚೆಡ್ ಡೇಸ್ ಸುದ್ದಿ| ವಿಶೇಷ ವರದಿ ಭಕ್ತಿ, ಸಂಪ್ರದಾಯ ಮತ್ತು ಪಟಾಕಿಗಳ ಅಬ್ಬರದ ಅಪರೂಪದ...

ಸುದ್ದಿ

ಹಾಲುಮತದ ಪುಣ್ಯಕಾಶಿ ಹುಲಜಂತಿಯಲ್ಲಿ ಕಲಿಯುಗದ ಪವಾಡ: ಮಾಳಿಂಗರಾಯನ ಶಿಖರಕ್ಕೆ ಶಿವ-ಪಾರ್ವತಿಯರಿಂದ ರೇಷ್ಮೆ ಮುಂಡಾಸು ಸೇವೆ.

ಮರ್ಚೆಡ್ ಡೇಸ್ ಸುದ್ದಿ|ಹುಲಿಜಂತಿ. ಹುಲಿಜಂತಿ:ಹಾಲುಮತದ ಶ್ರದ್ಧಾ ಕೇಂದ್ರ ಹುಲಜಂತಿ ಕ್ಷೇತ ಸಮಸ್ತ ಹಾಲುಮತ ಸಂಸ್ಕೃತಿಯ ಆರಾಧ್ಯ...