Home ಸುದ್ದಿ ಹೇರೂರಿನಲ್ಲಿ ಶ್ರದ್ಧಾ-ಭಕ್ತಿಯ ‘ಗಂಗಾಪರಮೇಶ್ವರಿ ಜಾತ್ರಾ ಮಹೋತ್ಸವ’ ಹಾಗೂ ಸಾಮೂಹಿಕ ವಿವಾಹ ಸಂಭ್ರಮ
ಸುದ್ದಿ

ಹೇರೂರಿನಲ್ಲಿ ಶ್ರದ್ಧಾ-ಭಕ್ತಿಯ ‘ಗಂಗಾಪರಮೇಶ್ವರಿ ಜಾತ್ರಾ ಮಹೋತ್ಸವ’ ಹಾಗೂ ಸಾಮೂಹಿಕ ವಿವಾಹ ಸಂಭ್ರಮ

Share
Share

 

 

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ತಾಲೂಕಿನ ಹೇರೂರು ಗ್ರಾಮದಲ್ಲಿ ಶ್ರೀ ಗಂಗಾಪರಮೇಶ್ವರಿ ಸೇವಾ ಸಮಿತಿ ಹಾಗೂ ಶ್ರೀ ಅಂಬಿಗರ ಚೌಡಯ್ಯ ಯುವಕ ಸಂಘದ ಆಶ್ರಯದಲ್ಲಿ ಶ್ರೀ ಗಂಗಾಪರಮೇಶ್ವರಿ ದೇವಿಯ ಜಾತ್ರಾ ಮಹೋತ್ಸವವು ಅತ್ಯಂತ ವೈಭವ ಮತ್ತು ಭಕ್ತಿಪೂರ್ವಕವಾಗಿ ಜರುಗಿತು.

ಭಕ್ತಿಭಾವ ಮೆರೆದ ಮೆರವಣಿಗೆ

ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ನಂತರ, ಅಲಂಕೃತಗೊಂಡ ಶ್ರೀ ಗಂಗಾಪರಮೇಶ್ವರಿ ದೇವಿಯ ಭಾವಚಿತ್ರವನ್ನು ಕುಂಭ ಕಳಸಗಳೊಂದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ಭಕ್ತರು ಭಕ್ತಿ ಭಾವದಿಂದ ಪಾಲ್ಗೊಂಡಿದ್ದರು.

 

ಜಾತ್ರೆಯ ವಿಶೇಷ ಆಕರ್ಷಣೆಯಾಗಿ ಏರ್ಪಡಿಸಿದ್ದ ಸಾಮೂಹಿಕ ವಿವಾಹಗಳು ಎಲ್ಲರ ಗಮನ ಸೆಳೆದವು. ನೂತನ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದ ವಧು-ವರರಿಗೆ ದೇವಿಯ ಸನ್ನಿಧಾನದಲ್ಲಿ ಮಂತ್ರಾಕ್ಷತೆ ಹಾಕಿ ಆಶೀರ್ವದಿಸಲಾಯಿತು. ಕಾರ್ಯಕ್ರಮದ ನಂತರ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಯ ವ್ಯವಸ್ಥೆ ಮಾಡಲಾಗಿತ್ತು.

ಈ ಕುರಿತು ಮಾತನಾಡಿದ ಹೇರೂರು ಗ್ರಾಮದ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷರಾದ ಶಶಿಧರ್ ಗೌಡ ಮಾಲಿ ಪಾಟೀಲ್, “ಸಾಮೂಹಿಕ ವಿವಾಹಗಳು ಮದುವೆ ಕಾರ್ಯಕ್ರಮಗಳಲ್ಲಿನ ಅನಗತ್ಯ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಉತ್ತಮ ದಾರಿ. ದೇವಿಯ ಸನ್ನಿಧಾನದಲ್ಲಿ ಮದುವೆಯಾಗುತ್ತಿರುವ ಈ ಜೋಡಿಗಳು ಸುಖ-ಶಾಂತಿ ಮತ್ತು ಸಮೃದ್ಧಿಯಿಂದ ಬಾಳಲಿ ಎಂದು ಅಮ್ಮನವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ಮಂಜುನಾಥ ರೆಡ್ಡಿ ವಗರನಾಳ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು, ಗಣ್ಯರು ಹಾಗೂ ಯುವಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದು ಜಾತ್ರೆಯ ಯಶಸ್ಸಿಗೆ ಸಹ

ಕರಿಸಿದರು.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...