Home ಸುದ್ದಿ ಸಿದ್ದರಾಮಯ್ಯ ರಾಜೀನಾಮೆಯಿಂದ ಮುನಿಸಿಕೊಂಡ ಅಹಿಂದ ವರ್ಗದ ನ್ಯಾಯಕ್ಕಾಗಿ ಮತ್ತೊರ್ವ ಅಹಿಂದ ಮುಖಂಡ ‌ಹೆಚ್.ಎಂ.ರೇವಣ್ಣನವರಿಗೆ‌ ಸಚಿವ ಸ್ಥಾನ ನೀಡುವಂತೆ ಆಗ್ರಹ!
ಸುದ್ದಿ

ಸಿದ್ದರಾಮಯ್ಯ ರಾಜೀನಾಮೆಯಿಂದ ಮುನಿಸಿಕೊಂಡ ಅಹಿಂದ ವರ್ಗದ ನ್ಯಾಯಕ್ಕಾಗಿ ಮತ್ತೊರ್ವ ಅಹಿಂದ ಮುಖಂಡ ‌ಹೆಚ್.ಎಂ.ರೇವಣ್ಣನವರಿಗೆ‌ ಸಚಿವ ಸ್ಥಾನ ನೀಡುವಂತೆ ಆಗ್ರಹ!

Share
Share

 

 

 

ಮರ್ಚೆಡ್ ಡೇಸ್ ಸುದ್ದಿ.
ರಾಯಚೂರು: ಕರ್ನಾಟಕ ರಾಜ್ಯದ ಅಹಿಂದ ವರ್ಗದ ಏಳ್ಗೆಗಾಗಿ ಶ್ರಮಿಸಿ ಎಂಟು ವರ್ಷಗಳ ಕಾಲ ಅಹಿಂದ ವರ್ಗದ ಪರವಾಗಿ ಸರ್ಕಾರವನ್ನು ನಡೆಸಿ ಯೋಜನೆಗಳನ್ನು ಅನುಷ್ಠಾನ ಮಾಡಿ ಪ್ರಗತಿ ಮಾರ್ಗದಲ್ಲಿ ಮೇಲೆತ್ತಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಯಿಂದ ಅಹಿಂದ ವರ್ಗ ಕಾಂಗ್ರೆಸ್ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದು, ಈ ಸಂದರ್ಭದಲ್ಲಿ ಮತ್ತೋರ್ವ ರಾಜ್ಯ ಮುಖಂಡ ಹೆಚ್.ಎಂ. ರೇವಣ್ಣನವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನವನ್ನು ಕಲ್ಪಿಸುವಂತೆ ಕೊಪ್ಪಳ ಜಿಲ್ಲಾ ಅಹಿಂದ ಸಂಘಟನೆಯ ಮುಖಂಡರಾದ ಕೆ.ಮಲ್ಲಪ್ಪ, ಯು.ಮಹೇಶ,ಕೃಷ್ಣ ಜಂಗ್ಲಿ ಪ್ರಕಟಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನ್ನು ಒತ್ತಾಯಿಸಿದ್ದಾರೆ.
ಕಳೆದ 25 ವರ್ಷಗಳಿಂದ ಕರ್ನಾಟಕ ರಾಜ್ಯದಲ್ಲಿ ಅಹಿಂದ ಸಂಘಟನೆ ಮೂಲಕ ಅಲ್ಪಸಂಖ್ಯಾತರು ಹಿಂದುಳಿದವರು ಮತ್ತು ದಲಿತರನ್ನು ಸಂಘಟಿಸುವ ಮೂಲಕ ಅವರ ಪರವಾಗಿ ರಾಜ್ಯ ಸರ್ಕಾರದ ಪರವಾಗಿ ಅನುಷ್ಠಾನ ಮಾಡಲು ಒತ್ತಾಯಿಸುವ ಮತ್ತು ಮೀಸಲಾತಿ ಸೇರಿದಂತೆ ಸರ್ಕಾರದ ಸೌಲಭ್ಯಗಳು ಅಹಿಂದ ವರ್ಗದ ಜನರಿಗೆ ಸಿಗುವಂತೆ ಮಾಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಮುಖ ಪಾತ್ರ ವಹಿಸಿದ್ದರು ಇವರ ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು ಹೆಚ್.ಎಂ. ರೇವಣ್ಣನವರು ಕಾರ್ಯ ಮಾಡಿದ್ದಾರೆ ಕಾಂಗ್ರೆಸ್ ಹೈಕಮಾ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ ಪರಿಣಾಮ ರಾಜ್ಯದ ಅಹಿಂದ ವರ್ಗ ಕಾಂಗ್ರೆಸ್ ಪಕ್ಷದ ವಿರುದ್ಧ ಅಕ್ರೋಶಗೊಂಡಿದೆ.ಈ ಕೋಪವನ್ನು ತಣಿಸಲು ಕಾಂಗ್ರೆಸ್ ಹೈಕಮಾಂಡ್ ಹೆಚ್. ಎಂ. ರೇವಣ್ಣ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವ ಸಂಪುಟದಲ್ಲಿ ಸೇರ್ಪಡೆ ಮಾಡಿ ಅತ್ಯುತ್ತಮ ಖಾತೆಯನ್ನು ಕೊಡಬೇಕು. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬೀದರ್ ನಿಂದ ಚಾಮರಾಜನಗರ ಜಿಲ್ಲೆಗಳಿಂದ ಆಗಮಿಸುತ್ತಿದ್ದ ಅಹಿಂದ ವರ್ಗದ ಜನರು ಮುಖ್ಯಮಂತ್ರಿ ಮನೆಗೆ ತೆರಳದೆ ರೇವಣ್ಣನವರ ಮನೆಗೆ ತೆರಳಿ ಅವರ ಕಷ್ಟ ಮತ್ತು ಸಮಸ್ಯೆಗಳ ಬಗ್ಗೆ ಮನವಿ ಮಾಡಿಕೊಳ್ಳುತ್ತಿದ್ದರು. ಇದಕ್ಕೆ ಸ್ಪಂದಿಸಿದ ರೇವಣ್ಣನವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವರಿಕೆ ಮಾಡಿಸಿ ಕೆಲಸ ಮಾಡಿ ಕೊಡುತ್ತಿದ್ದರು, ಅಹಿಂದ ವರ್ಗ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ನೀಡಿ ಅತ್ಯಧಿಕ ಸ್ಥಾನಗಳನ್ನು ಗೆಲ್ಲಲು ಕಾರಣವಾಗಿದ್ದು, ಸಿದ್ದರಾಮಯ್ಯನವರ ರಾಜೀನಾಮೆಯಿಂದ ಅಹಿಂದ ವರ್ಗ ಕಾಂಗ್ರೆಸ್ ನಿಂದ ಹಿಂದೆ ಸರಿಯುವ ಸಂದರ್ಭ ಇದೆ. ಆದ್ದರಿಂದ ರೇವಣ್ಣನವರಿಗೆ ವಿಧಾನ ಪರಿಷತ್ ಸ್ಥಾನ ನೀಡಿ ಅವರನ್ನು ಸಚಿವರನ್ನಾಗಿ ಮಾಡಬೇಕು.ಈ ನಿಟ್ಟಿನಲ್ಲಿ ಕೆಪಿಸಿಸಿಯ ಅಧ್ಯಕ್ಷರು ಹಾಗೂ ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಕುರಿತು ಎಐಸಿಸಿ ಹೈಕಮಾಂಡ್ ನೊಂದಿಗೆ ಮಾತನಾಡಿ ರೇವಣ್ಣನವರನ್ನು ವಿಧಾನಪರಿಷತ್ತಿಗೆ ಆಯ್ಕೆ ಮಾಡಿ ನಂತರ ಸಚಿವ ಸಂಪುಟದಲ್ಲಿ ಸೇರ್ಪಡೆ ಮಾಡಿಕೊಳ್ಳಬೇಕು.
ಇಲ್ಲದಿದ್ದರೆ ಮುಂದಿನ 2028 ರ ವಿಧಾನಸಭೆ ಹಾಗೂ 2029ರ ಲೋಕಸಭಾ ಚುನಾವಣೆಯಲ್ಲಿ ಅಹಿಂದ ವರ್ಗ‌ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುವ ಸಂದರ್ಭ ಹೆಚ್ಚಿದೆ,ಆದ್ದರಿಂದ ಕಾಂಗ್ರೆಸ್ ಪಕ್ಷ ಅಹಿಂದ ವರ್ಗವನ್ನು ನಿರ್ಲಕ್ಷ್ಯ ಮಾಡಬಾರದೆಂದು ಆಗ್ರಹಿಸಿದ್ದಾರೆ.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...