Home ಸುದ್ದಿ ಅಹಿಂದ ಮತಬ್ಯಾಂಕ್‌ ಉಳಿಸಿಕೊಳ್ಳಲು ಎಚ್. ಎಂ .ರೇವಣ್ಣ ಅಸ್ತ್ರ: ಕಾಂಗ್ರೆಸ್‌ ಹೈಕಮಾಂಡ್‌ಗೆ ಮುಖಂಡರ ಆಗ್ರಹ
ಸುದ್ದಿ

ಅಹಿಂದ ಮತಬ್ಯಾಂಕ್‌ ಉಳಿಸಿಕೊಳ್ಳಲು ಎಚ್. ಎಂ .ರೇವಣ್ಣ ಅಸ್ತ್ರ: ಕಾಂಗ್ರೆಸ್‌ ಹೈಕಮಾಂಡ್‌ಗೆ ಮುಖಂಡರ ಆಗ್ರಹ

Share
Share

 

 

 

 

ಮರ್ಚೆಡ್ ಡೇಸ್

ವಿಶೇಷ ವರದಿ:

ರಾಯಚೂರು: ಅಹಿಂದ ವರ್ಗದ ಅಸಮಾಧಾನ ತಣಿಸಲು ಹೆಚ್.ಎಂ. ರೇವಣ್ಣಗೆ ಸಚಿವ ಸ್ಥಾನಕ್ಕೆ ಆಗ್ರಹ

ಕರ್ನಾಟಕ ರಾಜ್ಯದ ಅಹಿಂದ ವರ್ಗದ ಏಳ್ಗೆಗಾಗಿ ಕಳೆದ ಎಂಟು ವರ್ಷಗಳಿಂದ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಯಿಂದಾಗಿ, ಅಹಿಂದ ಸಮುದಾಯದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ, ಸಮುದಾಯದ ಅಸಮಾಧಾನವನ್ನು ತಣಿಸಲು ಮತ್ತೋರ್ವ ಹಿರಿಯ ಮುಖಂಡ ಹೆಚ್.ಎಂ. ರೇವಣ್ಣ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಕೊಪ್ಪಳ ಜಿಲ್ಲಾ ಅಹಿಂದ ಸಂಘಟನೆಯ ಮುಖಂಡರಾದ ಕೆ. ಮಲ್ಲಪ್ಪ, ಯು. ಮಹೇಶ ಮತ್ತು ಕೃಷ್ಣ ಜಂಗ್ಲಿ ಅವರು ಕಾಂಗ್ರೆಸ್ ಹೈಕಮಾಂಡ್ ಅನ್ನು ಒತ್ತಾಯಿಸಿದ್ದಾರೆ.

ಕಳೆದ 25 ವರ್ಷಗಳಿಂದ ಅಹಿಂದ ಸಂಘಟನೆಯ ಮೂಲಕ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರನ್ನು ಸಂಘಟಿಸುವಲ್ಲಿ ಸಿದ್ದರಾಮಯ್ಯನವರು ಪ್ರಮುಖ ಪಾತ್ರ ವಹಿಸಿದ್ದರು. ಈ ಸುದೀರ್ಘ ಹೋರಾಟದಲ್ಲಿ ಸಿದ್ದರಾಮಯ್ಯ ಅವರಿಗೆ ಹೆಗಲಿಗೆ ಹೆಗಲು ಕೊಟ್ಟು ಹೆಚ್.ಎಂ. ರೇವಣ್ಣ ಅವರು ಕಾರ್ಯನಿರ್ವಹಿಸಿದ್ದಾರೆ. ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿರುವುದು ರಾಜ್ಯದ ಅಹಿಂದ ವರ್ಗದ ಜನರಲ್ಲಿ ಅಸಮಾಧಾನ ಮೂಡಿಸಿದ್ದು, ಪಕ್ಷದ ಸಂಘಟನೆಗೆ ಧಕ್ಕೆ ತರುವ ಸಾಧ್ಯತೆಯಿದೆ ಎಂದು ಮುಖಂಡರು ಕಳವಳ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೀದರ್‌ನಿಂದ ಚಾಮರಾಜನಗರದವರೆಗೆ ರಾಜ್ಯದ ವಿವಿಧ ಭಾಗಗಳ ಅಹಿಂದ ವರ್ಗದ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ನೇರವಾಗಿ ರೇವಣ್ಣ ಅವರ ಮನೆಗೆ ಭೇಟಿ ನೀಡುತ್ತಿದ್ದರು. ರೇವಣ್ಣ ಅವರು ಜನರ ಅಹವಾಲುಗಳನ್ನು ಆಲಿಸಿ, ಸಿದ್ದರಾಮಯ್ಯನವರ ಗಮನಕ್ಕೆ ತರುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವಲ್ಲಿ ಸೇತುವೆಯಾಗಿ ಕೆಲಸ ಮಾಡುತ್ತಿದ್ದರು. ಅಹಿಂದ ವರ್ಗದವರ ಈ ನಂಬಿಕೆಯನ್ನು ಉಳಿಸಿಕೊಳ್ಳಲು ರೇವಣ್ಣ ಅವರಿಗೆ ಸೂಕ್ತ ಸ್ಥಾನಮಾನ ನೀಡುವುದು ಅನಿವಾರ್ಯವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಅಹಿಂದ ವರ್ಗದ ಬೆಂಬಲವೇ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರಲು ಪ್ರಮುಖ ಕಾರಣವಾಗಿದೆ. ಈಗ ಸಿದ್ದರಾಮಯ್ಯನವರ ರಾಜೀನಾಮೆಯಿಂದಾಗಿ ಈ ವರ್ಗವು ಪಕ್ಷದಿಂದ ದೂರ ಸರಿಯುವ ಭೀತಿ ಎದುರಾಗಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು, ಹೆಚ್.ಎಂ. ರೇವಣ್ಣ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ, ಸಚಿವ ಸಂಪುಟದಲ್ಲಿ ಸೇರ್ಪಡೆಗೊಳಿಸಿ, ಅವರಿಗೆ ಪ್ರಮುಖ ಖಾತೆಯನ್ನು ನೀಡಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಈ ಕುರಿತು ಕೆಪಿಸಿಸಿ ಅಧ್ಯಕ್ಷರು ಮತ್ತು ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಅವರು ತಕ್ಷಣ ಎಐಸಿಸಿ ಹೈಕಮಾಂಡ್‌ನೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಒಂದು ವೇಳೆ ಅಹಿಂದ ವರ್ಗದ ಬೇಡಿಕೆಯನ್ನು ನಿರ್ಲಕ್ಷ್ಯ ಮಾಡಿದರೆ, ಮುಂಬರುವ 2028ರ ವಿಧಾನಸಭೆ ಹಾಗೂ 2029ರ ಲೋಕಸಭಾ ಚುನಾವಣೆಯಲ್ಲಿ ಅಹಿಂದ ವರ್ಗವು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುವ ಸಾಧ್ಯತೆ ಹೆಚ್ಚಿದೆ ಎಂದು ಮುಖಂಡರು ಎಚ್ಚರಿಸಿದ್ದಾರೆ.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...