Home ಸುದ್ದಿ ಸೇವೆಯಿಂದ ನಿವೃತ್ತರಾದ ಶಾಮಿದ್ ಕೆ.ಅವರಿಗೆ ಆತ್ಮೀಯ ಸನ್ಮಾನ
ಸುದ್ದಿ

ಸೇವೆಯಿಂದ ನಿವೃತ್ತರಾದ ಶಾಮಿದ್ ಕೆ.ಅವರಿಗೆ ಆತ್ಮೀಯ ಸನ್ಮಾನ

Share
Share

 

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ಇತ್ತೀಚೆಗೆ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಪ್ರಥಮ ದರ್ಜೆ ಕಾಲೇಜಿನ ಅಧೀಕ್ಷಕ (ಸೂಪರ್ಡೆಂಟ್) ಶಾಮಿದ್. ಕೆ. ಅವರನ್ನು ವಿಜಯನಗರ ಆನಂದ್ ಸಿಂಗ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರಾದ ಡಾ. ಎನ್. ಜಿ. ಹೆಬಸೂರು ಅವರು ವಿಶೇಷವಾಗಿ ಸನ್ಮಾನಿಸಿ ಗೌರವಿಸಿದರು.

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಡಾ. ಎನ್. ಜಿ. ಹೆಬಸೂರು ಅವರು, “ಶಾಮಿದ್ .ಕೆ. ಅವರು ತಮ್ಮ ಸುದೀರ್ಘ ಸೇವಾವಧಿಯಲ್ಲಿ ಅತ್ಯಂತ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದ್ದಾರೆ. ಅವರ ಸೇವೆ ಇತರರಿಗೆ ಮಾದರಿಯಾಗಿದೆ” ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಕೊಲ್ಲಿ ನಾಗೇಶ್ವರ್ ರಾವ್ ಗಂಗಯ್ಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಿವರಾಜ್ ಗುರುಕರ್, ಕಾಲೇಜಿನ ಮ್ಯಾನೇಜರಾದ ರಾಘಮ್ಮ  ಸಿಬ್ಬಂದಿವರ್ಗದವರಾದ ಪ್ರತಿಭಾ,   ಉಪನ್ಯಾಸಕರಾದ ವಿಜಯ್ ಮಾಂತೇಶ್ ರವಿಕುಮಾರ್ ಬಸವರಾಜ್ ಗಡದ್  ಆಫೀಸ್ ಸಿಬ್ಬಂದಿಗಳಾದ ವೀರೇಶ್ , ದುರ್ಗೇಶ್ ಮತ್ತು ಜವನರಾದ  ಮಡಿವಾಳಪ್ಪ ಮತ್ತು ನಾಗಪ್ಪ ಮುಂತಾದವರು ಉಪಸ್ಥಿತರಿದ್ದರು.

ಸನ್ಮಾನ ಸ್ವೀಕರಿಸಿದ ಶಾಮಿದ್. ಕೆ.ಅವರನ್ನು ಅಭಿನಂದಿಸಿದ ಗಣ್ಯರು, ಅವರ ಮುಂದಿನ ನಿವೃತ್ತ ಜೀವನವು ಸುಖಮಯವಾಗಿರಲಿ ಎಂದು ಶುಭ ಹಾರೈಸಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...