Home ಸುದ್ದಿ ಮತದಾರರ ಪಟ್ಟಿ ಪರಿಷ್ಕರಣೆ: ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು
ಸುದ್ದಿ

ಮತದಾರರ ಪಟ್ಟಿ ಪರಿಷ್ಕರಣೆ: ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು

Share
Share

 

ಮರ್ಚೆಡ್ ಡೇಸ್ ಸುದ್ದಿ.

ಕೊಪ್ಪಳ ಜೂನ್ 04 (ಕ.ವಾ.):

ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ಬಗ್ಗೆ ಕೊಪ್ಪಳ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಜೂನ್ 04ರಂದು ಸಂವಾದ ನಡೆಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, ಭಾರತ ಚುನಾವಣಾ ಆಯೋಗವು 14ನೇ ಮೇ 2026ರಂದು ಅಧಿಸೂಚನೆ ಹೊರಡಿಸಿ, ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ಕೆ ವೇಳಾಪಟ್ಟಿ ನಿಗದಿಪಡಿಸಿದೆ.

ನಮ್ಮ ದೇಶದಲ್ಲಿ 2002ರಲ್ಲಿ ಈ ಹಿಂದೆ ಎಸ್ ಐಆರ್ ಆಗಿತ್ತು. 2025ರ ಮತದಾರರ ಪಟ್ಟಿಯಲ್ಲಿ ಇರುವವರು 2010ರ ಮತದಾರರ ಪಟ್ಟಿಯಲ್ಲಿ ಎಲ್ಲಿದ್ದರು ಎಂದು ಈಗ ಮ್ಯಾಪಿಂಗ್ ಮಾಡಲಾಗುತ್ತಿದೆ.

ಜನಗಣತಿಗೆ ನೇಮಕವಾದ ಅಧಿಕಾರಿಗಳು ಮತ್ತು ಸಿಬ್ಬಂದಿಯು 2002ರ ಮತ್ತು 2025ರ ಈ ಎರಡು ಮತದಾರರ ಪಟ್ಟಿಗಳನ್ನು ಇಟ್ಟುಕೊಂಡು ಮ್ಯಾಪಿಂಗ್ ಕಾರ್ಯ ಮಾಡುತ್ತಿದ್ದಾರೆ. ಜೂನ್ 30 ರಿಂದ ಒಂದು ತಿಂಗಳ ಕಾಲ ಬಿಎಲ್ಓ ಮನೆಮನೆಗೆ ಭೇಟಿ ಕೊಡುತ್ತಾರೆ. ಮ್ಯಾಪಿಂಗ್ ಮಾಡಿದ ಎಲ್ಲರಿಗೂ ಜನಗಣತಿ ಫಾರ್ಮನ್ನು ಕೊಡಲಾಗುತ್ತದೆ.

ಬಿಎಲ್ ಓಗಳು

ಮತದಾರರಿಗೆ ಗೈಡ್ ಮಾಡಿ ಜನಗಣತಿ ಪಾರ್ಮನ್ನು ತುಂಬಿಸುತ್ತಾರೆ. ಗಣತಿ ವೇಳೆಯಲ್ಲಿ, ಮತದಾರರು ನಾನು ಯಾವುದೆ ದೇಶದಲ್ಲಿ ಪೌರತ್ವ ಹೊಂದಿಲ್ಲ. ನನ್ನ ಹೆಸರು ಒಂದೇ ಕಡೆ ಇದ್ದು ಬೇರೆಡೆ ಇಲ್ಲ ಎನ್ನುವಂತಹ ಡಿಕ್ಲೇರೆಷನ್ ನೀಡಬೇಕು ಎನ್ನುವಂತಹ ಮಾರ್ಗಸೂಚಿಗಳನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆಯ ಈ ಸಂದರ್ಭದಲ್ಲಿ ಹೆಸರು ಸೇರಿಸಲು, ಹೆಸರು ತೆಗೆಯಲು ಮತ್ತು ಹೆಸರನ್ನು ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ತೀರಿಕೊಂಡ ಅಥವಾ ಬೇರೆಡೆ ಸ್ಥಳಾಂತರವಾದ ಅಥವಾ ಡುಪ್ಲಿಕೇಟ್‌ ಮತದಾರರು ಯಾರು ಎಂಬುದನ್ನು ಪತ್ತೆ ಹಚ್ಚಿ ಮತದಾರ ಪಟ್ಟಿಯನ್ನು ಪರಿಷ್ಕರಿಸಲಾಗುತ್ತದೆ. ಈ ಪರಿಷ್ಕರಣಾ ಕಾರ್ಯದಲ್ಲಿ

ರಾಜಕೀಯ ಪಕ್ಷಗಳಿಂದ ನೇಮಕಗೊಂಡ

ಬಿಎಲ್ ಎಗಳು ಸಹ ಭಾಗಿಯಾಗುತ್ತಾರೆ ಎಂದರು.

ಕೊಪ್ಪಳ ಜಿಲ್ಲೆಯಲ್ಲಿ 2025ರ ಮತದಾರರ ಪಟ್ಟಿಯಲ್ಲಿ ಒಟ್ಟು 11,92,307 ಮತದಾರರ ಪೈಕಿ ಇದುವರೆಗೆ 11,34,937 ಮತದಾರರಿಗೆ ಈಗಾಗಲೇ ಮ್ಯಾಪಿಂಗ್ ಮಾಡಿದ್ದು, 57,370 ಮತದಾರರಿಗೆ ಮ್ಯಾಪಿಂಗ್ ಕಾರ್ಯ ಬಾಕಿ ಇದೆ ಎಂದು ತಿಳಿಸಿದರು.

ಈ ವೇಳೆ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಹಾಗು

ಮಾಧ್ಯಮ ಪ್ರತಿನಿಧಿಗಳು ಇದ್ದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...