Home ಸುದ್ದಿ ಬೆಳೆಯಲಿ ಪರಿಸರ, ಉಳಿಯಲಿ ನೆನಪು: ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳ ಪರಿಸರ ಸ್ನೇಹಿ : ವಿದಾಯ…….
ಸುದ್ದಿ

ಬೆಳೆಯಲಿ ಪರಿಸರ, ಉಳಿಯಲಿ ನೆನಪು: ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳ ಪರಿಸರ ಸ್ನೇಹಿ : ವಿದಾಯ…….

Share
Share

 

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ಪದವಿ ಹಂತದ ವಿದ್ಯಾಭ್ಯಾಸದ ಕೊನೆಯ ದಿನವನ್ನು ಸ್ಮರಣೀಯವಾಗಿಸಲು ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳು ಭಿನ್ನ ಹಾಗೂ ಅರ್ಥಪೂರ್ಣ ದಾರಿಯನ್ನು ಆರಿಸಿಕೊಂಡಿದ್ದಾರೆ. ಯಾವುದೇ ಅದ್ದೂರಿ ಆಚರಣೆಗೆ ಮಾರುಹೋಗದೆ, ಪರಿಸರದ ಕಾಳಜಿ ಮೆರೆಯುವ ಮೂಲಕ ಗಿಡ ನೆಟ್ಟು ಈ ವಿಶೇಷ ದಿನವನ್ನು ಸಂಭ್ರಮದಿಂದ ಆಚರಿಸಿದರು.

ನಗರದ ಬೇತಲ್ ಮಹಿಳಾ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಮುಂದಿನ ಬದುಕಿನ ಯಶಸ್ಸಿನ ಸಂಕೇತವಾಗಿ ಸಸಿಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, “ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತವಾಗದೆ, ಸಮಾಜ ಮತ್ತು ಪರಿಸರದ ಕಡೆಗೂ ಕಾಳಜಿ ಹೊಂದಿರುವುದು ಶ್ಲಾಘನೀಯ. ಈ ಸಸಿಗಳು ಕಾಲಕ್ರಮೇಣ ಹೆಮ್ಮರವಾಗಿ ಬೆಳೆಯುವಂತೆ, ನಿಮ್ಮ ಬದುಕೂ ಉನ್ನತ ಮಟ್ಟಕ್ಕೇರಲಿ” ಎಂದು ಶುಭ ಹಾರೈಸಿದರು.

ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಬಿ.ಸಿ.ಎಫ್.ಎ (BCFA) ಸಂಸ್ಥೆಯ ಅಧ್ಯಕ್ಷರಾದ ರಾಜು ಸುಧಾಕರ್, ಖಜಾಂಚಿ. ಶ್ರೀಮತಿ ಸುಜಾತಾ ರಾಜು ಸುಧಾಕರ್, ಹಾಗೂ ಬೆತೆಲ್ ಸಂಸ್ಥೆಯ ಮ್ಯಾನೇಜರ್ ಶ್ರೀಮತಿ ಆಲಿಯಾ ಮಿಲ್ಟನ್ ಭಾಗವಹಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಪದವಿ ಮಹಾವಿದ್ಯಾಲಯದ ಉಪ ಪ್ರಾಂಶುಪಾಲರಾದ ಹನುಮಂತಪ್ಪ ಕೆ., ಬೆತೆಲ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಸವರಾಜ್ ಕೆ. ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಸಂಸ್ಥೆಯ ಉಪನ್ಯಾಸಕ ವೃಂದದವರಾದ ಗೀತಾ ಅಂಗಡಿ, ವೆಂಕಟೇಶ್ ಬಿಂಗಿ, ವಿರೂಪಾಕ್ಷಪ್ಪ, ಸಂತೋಷ್, ಮಂಜುನಾಥ್ ಕಾರ್ಪುಡಿ, ಶ್ರೀದೇವಿ ತಟ್ಟಿ, ಹಸೀನಾ ಬೇಗಂ, ಸೈಯದಾ ಸಲೀಮಾ ಬಾನು, ಸುಪ್ರೀತಾ, ಪಲ್ಲವಿ ಮತ್ತು ಗೀತಾ ಕೊಳ್ಳಿ ಅವರು ಮಾರ್ಗದರ್ಶನ ನೀಡಿದರು. ಜೊತೆಗೆ ಸಹಾಯಕರಾದ ರಾಜಮ್ಮ, ಸುರೇಶ್ ದರೋಜಿ ಹಾಗೂ ಪ್ರಥಮ ದರ್ಜೆ ಸಹಾಯಕರಾದ ಶ್ರೀದೇವಮ್ಮ ಅವರು ಸಮನ್ವಯಕಾರರಾಗಿ ಕಾರ್ಯನಿರ್ವಹಿಸಿದರು.

ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳ ಒಗ್ಗಟ್ಟಿನಿಂದ ಜರುಗಿದ ಈ ಗಿಡ ನೆಡುವ ಕಾರ್ಯಕ್ರಮವು, ಮುಂಬರುವ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿಯ ಮಾದರಿಯಾಗಿ ಉಳಿಯಲಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...