Home ಸುದ್ದಿ ತಾವರಗೇರಾ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ
ಸುದ್ದಿ

ತಾವರಗೇರಾ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Share
Share

 

ಮರ್ಚೆಡ್ ಡೇಸ್ ಸುದ್ದಿ.

ತಾವರಗೇರಾ : ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಸಿಗೆ ನೀರು ಹಾಕುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಉಪನ್ಯಾಸಕರಾದ ವಿಜಯಕುಮಾರ ಕಟ್ಟಿಮನಿ. ಮಾತನಾಡಿ ಪ್ರಸ್ತುತ ದಿನಮಾನದಲ್ಲಿ ನಾವೆಲ್ಲರೂ ಪರಿಸರವನ್ನು ಸಂರಕ್ಷಣೆ ಮಾಡುವುದು ಬಹಳ ಅವಶ್ಯಕವಾಗಿದೆ. ಹಾಗೂ ಪ್ರತಿಯೊಬ್ಬ ವಿದ್ಯಾರ್ಥಿಯು ಗಿಡಮರಗಳನ್ನು ಉಳಿಸಿ ಬೆಳೆಸುವುದು ಅನಿವಾರ್ಯವಾದುದು ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಇಕೋ ಕ್ಲಬ್ & ಪರಿಸರ ಸಮಿತಿಯ ಸಂಚಾಲಕರಾದ

ಡಾ. ಯಮನೂರಪ್ಪ ನವರು ಪ್ರಾಸ್ತಾವಿಕವಾಗಿ ಮಾತನಾಡಿ ನಾವೆಲ್ಲರೂ ಸಹಭಾಗಿತ್ವದಿಂದ ಪರಿಸರ ಸಂರಕ್ಷಣೆ ಮಾಡುವುದು ಮತ್ತು ಅರಣ್ಯ ಸಂಪತ್ತನ್ನು ಕಾಪಾಡಿಕೊಂಡರೆ ಮಾತ್ರ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಆಯೋಜನೆ ಮಾಡಿದ್ದಕ್ಕೆ ಸಾರ್ಥಕವಾಗುತ್ತದೆ ಎಂಬ ಕಿವಿ ಮಾತನ್ನು ವಿದ್ಯಾರ್ಥಿಗಳಿಗೆ ಹೇಳಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕನಕಗಿರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ವೀರೇಶ ಕೆಂಗಲ್. ಇವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು ಮತ್ತು ಕಾಲೇಜಿನ ಆವರಣದಲ್ಲಿ ಪ್ರಾಂಶುಪಾಲರು ಮತ್ತು ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಎಲ್ಲರೂ ಸೇರಿ ಕಾಲೇಜಿನ ಆವರಣದಲ್ಲಿ ಸಸಿಗಳನ್ನು ನೇಡಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ವೆಂಕಟೇಶ, ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಗುರುರಾಜ ಮಾಲಿಪಾಟೀಲ್, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಏಜಾಜ್ ಹುಸೇನ, ಉಪನ್ಯಾಸಕರಾದ ಮಂಜುನಾಥ ಹನುಮಸಾಗರ, ಮಲ್ಲೇಶ, ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕರಾದ ಮಂಜುನಾಥ್ ಸ್ವಾಗತಿಸಿದರು ಅಮರಯ್ಯ ರವರು ವಂದಿಸಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...