Home ಸುದ್ದಿ ಶಾಸಕರಾದ ಡಾ.ಎಸ್. ಶಿವರಾಜ್ ಪಾಟೀಲ್ ಅವರಿಂದ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ 
ಸುದ್ದಿ

ಶಾಸಕರಾದ ಡಾ.ಎಸ್. ಶಿವರಾಜ್ ಪಾಟೀಲ್ ಅವರಿಂದ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ 

Share
Share

 

ಮರ್ಚೆಡ್ ಡೇಸ್ ಸುದ್ದಿ.

ರಾಯಚೂರು: ವಿಶ್ವ ಪರಿಸರ ದಿನದ ಅಂಗವಾಗಿ ರಾಯಚೂರಿನಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ರಾಯಚೂರು ನಗರದ ಶಾಸಕರಾದ ಡಾ. ಎಸ್. ಶಿವರಾಜ್ ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನಗರದ ಪಿರಮಿಡ್ ಧ್ಯಾನ ಮಂದಿರದ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರದ ರಕ್ಷಣೆ ಮತ್ತು ಮರಗಳ ನೆಡುವಿಕೆಯ ಮಹತ್ವವನ್ನು ಒತ್ತಿ ಹೇಳಿದರು. ಕಾರ್ಯಕ್ರಮದಲ್ಲಿ ಮಾಜಿ ನಗರ ಅಧ್ಯಕ್ಷರಾದ ಶ್ರೀ ಗೋವಿಂದ, ಬಿಜೆಪಿ ಮುಖಂಡರಾದ ಶ್ರೀ ರಾಘವೇಂದ್ರ ಹುಲ್ಲೂರು, ಶ್ರೀ ಕಡಗೋಲ ಆಂಜನೇಯ, ಶ್ರೀ ರವೀಂದ್ರ ಜಲ್ಲಾರ್, ಶ್ರೀ ಪ್ರದೀಪ್ ಸಾನ್ಬಾಳ, ಮಾಜಿ ಆರ್.ಡಿ.ಎ ಅಧ್ಯಕ್ಷರಾದ ಶ್ರೀ ಗೋಪಾಲ್ ರೆಡ್ಡಿ ಯಾಪ ಶೇಟ್ಟಿ ಸೇರಿದಂತೆ ಬಿಜೆಪಿ ಪಕ್ಷದ ಅನೇಕ ಕಾರ್ಯಕರ್ತರು, ಪಿರಮಿಡ್ ಧ್ಯಾನ ಮಂದಿರದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಿದರು.

Share
Related Articles
ಸುದ್ದಿ

ಆಕಾಶದಲ್ಲೇ ಬೆಳಕಿನ ಮಹಾಸಂಗ್ರಾಮ! ಶತಮಾನಗಳ ಸಂಪ್ರದಾಯಕ್ಕೆ ಸಾಕ್ಷಿಯಾದ ಕೇರಳದ ತ್ರಿಶೂರ್ ಪೂರಂನ ‘ವೆಡಿಕ್ಕೆಟ್ಟು’ ವೈಭವ.

  ಮರ್ಚೆಡ್ ಡೇಸ್ ಸುದ್ದಿ| ವಿಶೇಷ ವರದಿ ಭಕ್ತಿ, ಸಂಪ್ರದಾಯ ಮತ್ತು ಪಟಾಕಿಗಳ ಅಬ್ಬರದ ಅಪರೂಪದ...

ಸುದ್ದಿ

ಹಾಲುಮತದ ಪುಣ್ಯಕಾಶಿ ಹುಲಜಂತಿಯಲ್ಲಿ ಕಲಿಯುಗದ ಪವಾಡ: ಮಾಳಿಂಗರಾಯನ ಶಿಖರಕ್ಕೆ ಶಿವ-ಪಾರ್ವತಿಯರಿಂದ ರೇಷ್ಮೆ ಮುಂಡಾಸು ಸೇವೆ.

ಮರ್ಚೆಡ್ ಡೇಸ್ ಸುದ್ದಿ|ಹುಲಿಜಂತಿ. ಹುಲಿಜಂತಿ:ಹಾಲುಮತದ ಶ್ರದ್ಧಾ ಕೇಂದ್ರ ಹುಲಜಂತಿ ಕ್ಷೇತ ಸಮಸ್ತ ಹಾಲುಮತ ಸಂಸ್ಕೃತಿಯ ಆರಾಧ್ಯ...

ಅಂಕಣಸುದ್ದಿ

ಮಿಡ್ಲ್ ಕ್ಲಾಸ್ ದೀಪಾವಳಿ: ಬೆಳಕಿನ ಹಬ್ಬದ ಹಿಂದಿರುವ ಬಜೆಟ್ ಬದುಕು.

  ಮರ್ಚೆಡ್ ಡೇಸ್ ವಿಶೇಷ ಲೇಖನ: ಕೆಲವು ವರ್ಷಗಳ ಹಿಂದಿನ ಸಂಭ್ರಮ ಈಗಿಲ್ಲ; ಆಸೆಗಳು ದೊಡ್ಡದಿವೆ,...

ಸುದ್ದಿ

ಗಂಗಾವತಿ ನಗರಸಭೆಗೆ ಹೊಸ ಪೌರಾಯುಕ್ತರಾಗಿ ಮಂಜುನಾಥ್ ಮಲ್ಲಪ್ಪ ಗುಂಡೂರ ನೇಮಕ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ಗಂಗಾವತಿ:* ಗಂಗಾವತಿ ನಗರಸಭೆಯಲ್ಲಿ ಖಾಲಿಯಿದ್ದ ಪೌರಾಯುಕ್ತರ...